ಮಂಗಳೂರು ಬೋಳಾರದ ಮಂಗಳಾದೇವಿ ದೇವಸ್ಥಾನದ ಹೆಸರನ್ನು ಗೂಗಲ್ ಭೂಪಟದಲ್ಲಿ ಯಾರೋ ಕಿಡಿಗೇಡಿಗಳು ಪೀರ್ ದರ್ಗಾ ಕಾಂಪೌಂಡ್ ಎಂದು ತಿದ್ದಿರುವುದಾಗಿ ತಿಳಿದು ಬಂದಿದೆ. ಇದನ್ನು ಸರಿಪಡಿಸುವಂತೆ ದೇವಾಲಯದ ಆಡಳಿತ ಮಂಡಳಿಯವರು ದೂರು ದಾಖಲಿಸಿದ್ದಾರೆ. ಇದು ಕುಕೃತ್ಯ ಎಂದೂ ಖಂಡಿಸಿದ್ದಾರೆ.
ದಸರಾ ಸಂಭ್ರಮಾಚರಣೆಯ ಅಂಗವಾಗಿ ಆಸಕ್ತಿ ಮಂಗಳೂರು, ಕಲಾಸಕ್ತರ ಬಳಗ ಹಾಗೂ ಚುಟುಕು ಸಾಹಿತ್ಯ ಪರಿಷತ್ ಅವರು ಆಯೋಜನೆ ಮಾಡಿದಂತಹ ಕವಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಕಲಾ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮಾನಾಥ ಹೆಗ್ಡೆ ಉದ್ಘಾಟಿಸಿದರು. ಚುಟುಕು ಸಾಹಿತ್ಯ ಪರಿಷತ್‍ನ ಜಿಲ್ಲಾಧ್ಯಕ್ಷರಾದ ಹರೀಶ್ ಸುಲಾಯ ಒಡ್ಡಂಬೆಟ್ಟು ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.