Home Posts tagged #MANGALORE AIRPORT

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಆತ್ಮೀಯವಾಗಿ ಸ್ವಾಗತಿಸಿದ ನಳಿನ್ ಕುಮಾರ್ ಕಟೀಲು

ಉಡುಪಿ ಜಿಲ್ಲಾ ಪ್ರವಾಸದ ನಿಮಿತ್ತ ಮಂಗಳೂರು ಏರ್ ಪೋರ್ಟ್ ಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಇವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. , ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾಸಕ

 ಮತದಾರರ ಪಟ್ಟಿ ಪರಿಷ್ಕರಣೆ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ : ಸಿಎಂ ಬೊಮ್ಮಾಯಿ

ಅವರು ನಗರದ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿಂದು ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ಚುನಾವಣಾ ಸಂದರ್ಭದಲ್ಲಿ ನಡೆಯುವ ನಿರಂತರ ಪ್ರಕ್ರಿಯೆ. ಅದರಲ್ಲಿ ಲೋಪವಾಗಿರುವ ಬಗ್ಗೆ ಬಂದ ದೂರಿನ ಬಗ್ಗೆ ತ್ವರಿತವಾಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವ ಎಸ್.ಅಂಗಾರ, ಅಶ್ವತ್ಥನಾರಾಯಣ, ಶಾಸಕ ವೇದವ್ಯಾಸ ಕಾಮತ್, ರಾಜೇಶ್

ಡಿ.1ರಿಂದ ಮಂಗಳೂರು ವಿಮಾನ ನಿಲ್ದಾಣದ ಹೆಸರು ಬದಲಾವಣೆ

ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದಿರುವ ಹೆಸರನ್ನು ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ. ವಿಮಾನ ನಿಲ್ದಾಣದಲ್ಲಿರುವ ಬೋರ್ಡ್ ಸಹಿತ ಸ್ವಾಗತ ಕಮಾನುಗಳಲ್ಲಿ ಈಗಾಗಲೇ ‘ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಬರೆಯಲಾಗಿದೆ. ಆದರೆ, ಪ್ರಾಧಿಕಾರದ ದಾಖಲೆಗಳಲ್ಲಿ ಮಾತ್ರ ‘ಮ್ಯಾಂಗಲೋರ್’ ಎಂದೇ ಇದೆ. ಆದರೆ, ಮಂಗಳೂರು ನಗರದಲ್ಲಿಯೂ ‘ಮಂಗಳೂರು’ ಪದ ಬಳಕೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ

ಮಂಗಳೂರು ವಿಮಾನ ನಿಲ್ದಾಣಕ್ಕೆ KSRTC ಬಸ್‌ ಸಂಚಾರ ಆರಂಭ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಣಿಪಾಲ ಮತ್ತು ಮಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್‌ ಸಂಚಾರ ಅ. 31ರಂದು ಆರಂಭಗೊಳ್ಳಲಿದ್ದು, ತಾತ್ಕಾಲಿಕ ವೇಳಾಪಟ್ಟಿಯನ್ನು ಸಿದ್ಧಗೊಳಿಸಲಾಗಿದೆ. ಈ ಹಿಂದೆ ನಿಗದಿ ಪಡಿಸಿದಂತೆ ಅಕ್ಟೋಬರ್‌ 27ರಂದು ಬಸ್‌ ಸಂಚಾರ ಆರಂಭಗೊಳ್ಳಬೇಕಿತ್ತು. ಕೆಲವು ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ ಎಂದು ಕೆಎಸ್ಸಾರ್ಟಿಸಿ ಮೂಲಗಳು ತಿಳಿಸಿವೆ. ಮಂಗಳೂರು ರೈಲು ನಿಲ್ದಾಣ ದಿಂದ ವಿಮಾನ ನಿಲ್ದಾಣಕ್ಕೆ ಬಸ್ಸು ಬೆಳಗ್ಗೆ 6.30, 8.45,

ಕೇರಳ ಗಡಿ ನಿರ್ಬಂಧ ತೆರವಿಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ: ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್ 19 ಹಿನ್ನೆಲೆಯಲ್ಲಿ ಕೇರಳ ಗಡಿ ನಿರ್ಬಂಧ ತೆರವಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ದ.ಕ. ಮತ್ತು ಉಡುಪಿ ಜಿಲ್ಲೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಜಿಲ್ಲೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ವಿಚಾರದ ಬಗ್ಗೆ ಪ್ರತಿಕ್ರಿಯೆ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ.

ಏರ್ ಪೋರ್ಟ್ ಸುತ್ತಮುತ್ತ ಡ್ರೋನ್‍ ಹಾರಾಟಕ್ಕೆ ಅವಕಾಶವಿಲ್ಲ

ದೇಶದಲ್ಲಿ ಉಗ್ರರ ವಿಧ್ವಂಸಕ ಕೃತ್ಯ ಸಾಧ್ಯತೆ ಬೆನ್ನಲ್ಲೇ ಮಂಗಳೂರು ಏರ್ ಪೋರ್ಟ್ ಸುತ್ತಮುತ್ತ ಅಲರ್ಟ್ ಮಾಡಲಾಗಿದೆ. ಏರ್‍ಪೋರ್ಟ್ ಭದ್ರತೆಯ ಸಿಐಎಸ್‍ಎಫ್ ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಅಧಿಕಾರಿಗಳು ಸ್ಥಳೀಯರಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಮಾತನಾಡಿ, ಅಂತಾರಾಷ್ಟ್ರೀಯ

ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆಗೆ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲಿನ ಮಿಲಿಟರಿ ಏರ್ ಬೇಸ್ ನಲ್ಲಿ ಉದ್ಯೋಗದಲ್ಲಿದ್ದ ಮಂಗಳೂರು ಮೂಲದ ನಾಲ್ಕು ಮಂದಿ ಸುರಕ್ಷಿತವಾಗಿ ಮನೆ ಸೇರಿದ್ದಾರೆ. ಕಾಬೂಲಿನ ನ್ಯಾಟೋ ಏರ್ ಬೇಸ್ ನಲ್ಲಿ ಕೆಲಸಕ್ಕಿದ್ದ ನಾಲ್ವರನ್ನು ಅಮೆರಿಕದ ವಾಯುಪಡೆ ಆಗಸ್ಟ್ 17 ರಂದು ಕತಾರ್ ಗೆ ಏರ್ ಲಿಫ್ಟ್ ಮಾಡಿತ್ತು. ಅಲ್ಲಿಂದ ಭಾರತದ ವಾಯುಪಡೆ ವಿಮಾನ ಭಾನುವಾರ ದೆಹಲಿಗೆ ಕರೆತಂದಿತ್ತು. ದೆಹಲಿಯಿಂದ ತೊಕ್ಕೊಟ್ಟು ಕೊಲ್ಯ ನಿವಾಸಿ ಪ್ರಸಾದ್ ಆನಂದ್ ಸೋಮವಾರ ಬೆಳಗ್ಗೆ ಮನೆ ಸೇರಿದ್ದರೆ,

ಕರಾವಳಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ

ಮಂಗಳೂರು, ಆ.12(ಕ.ವಾ):- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಮೀನುಗಾರಿಕೆ, ಬಂದರು ಹಾಗೂ

ಮರವೂರು ಸೇತುವೆ ದುರಸ್ತಿ ಕಾಮಗಾರಿ ಪೂರ್ಣ

ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ ತಜ್ಞ ಇಂಜಿನಿಯರ್‌ಗಳು ಪರಿಶೀಲಿಸಿ, ಸರಿಪಡಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು