ಮಂಗಳೂರು, ಆ.12(ಕ.ವಾ):- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ
ಮಂಗಳೂರು: ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡು ಶುಕ್ರವಾರ ಸಾಯಂಕಾಲದಿಂದ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ ಮರವೂರು ಸೇತುವೆ ಒಂದುವರೆ ತಿಂಗಳ ಹಿಂದೆ ಎರಡು ಅಡಿಯಷ್ಟು ಕುಸಿದಿತ್ತು. ಬೆಂಗಳೂರಿನಿಂದ ಬಂದ ತಜ್ಞ ಇಂಜಿನಿಯರ್‌ಗಳು ಪರಿಶೀಲಿಸಿ, ಸರಿಪಡಿಸಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಬಹುದು ಎಂದು
ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿದ ಮರವೂರು ಸೇತುವೆಯ ಕುಸಿದ ಪಿಲ್ಲರ್‌ನ್ನು ಯಥಾಸ್ಥಿತಿಗೆ ತಂದು ಸೇತುವೆ ದುರಸ್ತಿ ಕೆಲಸ ಬಹುತೇಕ ಪೂರ್ತಿಯಾಗಿದೆ. ಜು.30ರಿಂದ ಲಘು ವಾಹನ ಸಂಚಾರಕ್ಕೆ ಮುಕ್ತಗೊಳಿಸುವ ನಿರೀಕ್ಷೆಯಿದೆ. ಪಿಡಬ್ಲ್ಯೂಡಿ ಇಲಾಖೆಯ ತಜ್ಞ ಇಂಜಿನಿಯರ್‌ಗಳ ಸಲಹೆಯಂತೆ ಸೇತುವೆಯ ಪಿಲ್ಲರ್ ಅನ್ನು ಹೈಡ್ರೋಲಿಕ್ ಜ್ಯಾಕ್ ಬಳಸಿ ಮೇಲಕ್ಕೆತ್ತಿ ಯಥಾಸ್ಥಿತಿಗೆ ತರಲಾಗಿತ್ತು. ಇದೀಗ ದುರಸ್ತಿ ಕೆಲಸ ಬಹುತೇಕ ಪೂರ್ಣಗೊಂಡಿದೆ.ಗುರುವಾರ ತಜ್ಞರ ಉಪಸ್ಥಿತಿಯಲ್ಲಿ