Home Posts tagged #mangalore city corporation (Page 2)

ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕಲಬುರಗಿ ಪಾಲಿಕೆಯ ಮೇಯರ್ ಆಗ್ತಾರೆ: ಶಾಸಕ ಖಾದರ್ ವಿಶ್ವಾಸ

ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ

ಮಂಗಳೂರಿನಲ್ಲಿ ಅನಧಿಕೃತ ಗೂಡಂಗಡಿಗಳ ತೆರವು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.   ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಯಿತು.  

ಪಣಂಬೂರಿನ ಸಮುದ್ರ ತೀರದಲ್ಲಿ ತ್ಯಾಜ್ಯ ರಾಶಿಗೆ ಕೊನೆಗೂ ಮುಕ್ತಿ:ಮಹಾನಗರ ಪಾಲಿಕೆ ಸಿಬ್ಬಂದಿಗಳಿಂದ ಸ್ವಚ್ಚತಾ ಕಾರ್ಯ

ಮಂಗಳೂರಿನ ಪಣಂಬೂರಿನ ಸಮುದ್ರ ತೀರದಲ್ಲಿ ತ್ಯಾಜ್ಯ ರಾಶಿಗೆ ಕೊನೆಗೂ ಮುಕ್ತಿ ಸಿಕ್ಕಿದಂತಾಗಿದೆ. ವಿ4 ನ್ಯೂಸ್‌ನ ವರದಿಗೆ ಎಚ್ಚೆತ್ತು ಮಂಗಳೂರು ಮಹಾನಗರ ಪಾಲಿಕೆ ಸ್ವಚ್ಛತಾ ಕಾರ್ಯವನ್ನ ಕೈಗೊಂಡಿದೆ. ಇನ್ನು ನಗರ ಪಾಲಿಕೆ ಸಿಬ್ಬಂದಿಗಳು ಸ್ವಚ್ಛ ಕಾರ್ಯವನ್ನು ಕೈಗೊಂಡಿದ್ದಾರೆ. ಪಣಂಬೂರು ಸಮುದ್ರ ತೀರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿರುವುದರಿಂದ ಬೀಚ್ ಸೌಂದರ್ಯಕ್ಕೆ ಧಕ್ಕೆಯಾಗಿತ್ತು. ಸಮುದ್ರಕ್ಕೆ ಪ್ರವಾಸಿಗರೇ ಎಸೆದ ಕಸ ಈಗ ದೊಡ್ಡ

ಶಾಸಕ ಡಾ. ವೈ ಭರತ್ ಶೆಟ್ಟಿ ಅವರಿಂದ 3.96 ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿಪೂಜೆ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಮರಕಡ 14ನೇ ವಾರ್ಡಿನಲ್ಲಿ ವಿಮಾನ ನಿಲ್ದಾಣ ರಸ್ತೆಗೆ ತಡೆ ಗೋಡೆ ಹಾಗೂ ಫುಟ್ ಪಾತ್ ನಿರ್ಮಾಣ ಕಾಮಗಾರಿಗೆ ಚಾಲನೆ ಸಿಕ್ಕಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಎ .ಆರ್ ನಿಧಿಯಿಂದ ಮತ್ತು ಸಾಮಾನ್ಯ ನಿಧಿಯಿಂದ 3.96 ಕೋಟಿ ಅನುದಾನದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಉಪಮೇಯರ್ ಸುಮಂಗಲ ರಾವ್ ,

 ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ

ಉರ್ವ ಮಾರುಕಟ್ಟೆ ಸಂಕೀರ್ಣ : ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆಯ ಉರ್ವ ಮಾರುಕಟ್ಟೆ ಸಂಕೀರ್ಣಕ್ಕೆ ಇಂದು ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಹಾನಗರ ಪಾಲಿಕೆಯ ಮೇಯರ್ ಶ್ರೀ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದಅಕ್ಷಯ್ ಶ್ರೀಧರ್ , ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಗಣೇಶ್ ಕುಲಾಲ್, ಸಂಧ್ಯಾ ಮೋಹನ್ ಆಚಾರ್, ಜಗದೀಶ್ ಶೆಟ್ಟಿ ಬೋಳೂರು, ಪಾಲಿಕೆ ನಾಮನಿರ್ದೇಶಿತ

ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥ ಅವೈಜ್ಞಾನಿಕ : ಎ.ಸಿ. ವಿನಯರಾಜ್ 

ಬೆಂಗಳೂರು ಮಾದರಿಯಲ್ಲಿ ಮಂಗಳೂರಿನಲ್ಲಿ ಸೈಕಲ್ ಪಥ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಮಂಗಳೂರಿನಲ್ಲಿ ಪ್ರಸ್ತಾವಿತ ಸೈಕಲ್ ಪಥವು ಅವೈಜ್ಞಾನಿಕವಾಗಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡಲಾಗುವುದು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ವಿಪಕ್ಷ ನಾಯಕ ಎ.ಸಿ. ವಿನಯರಾಜ್ ಎಚ್ಚರಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳೂರಿನಲ್ಲಿ ಎರಡು ಹಂತದಲ್ಲಿ ನಿರ್ಮಿಸಲು

ಕೋಟಿ ಗಟ್ಟಲೆ ವೆಚ್ಚದಲ್ಲಿ ನಿರ್ಮಾಣಗೊಂಡು 3ವರ್ಷ ಕಳೆದರೂ, ಆರಂಭವಾಗಿಲ್ಲ ಉರ್ವ ಮಾರುಕಟ್ಟೆ

ಅದು ಬರೋಬರಿ 13.5 ರೂ ಕೋಟಿ ವೆಚ್ಚದಲ್ಲಿ ನಡೆದ ಮಾರ್ಕೇಟ್….. ಉದ್ಘಾಟನೆಗೊಂಡು 3 ವರ್ಷ ಕಳೆದರೂ , ವ್ಯಾಪಾರಕ್ಕಾಗಿ ಗ್ರಾಹಕರಿಗೆ ಬಿಟ್ಟುಕೊಟ್ಟಿಲ್ಲ…. ಬೀಕೋ ಎನ್ನುತ್ತಿರುವ ಕಟ್ಟಡ… ಹಾಗಾದ್ರೆ ಅದು ಯಾವ ಮಾರುಕಟ್ಟೆ ಅಂತೀರಾ ಇಲ್ಲಿದೆ ಸ್ಟೋರಿ… 2019ರ ಜೂನ್ 28ರಂದು ಮಂಗಳೂರಿನ ಉರ್ವನಲ್ಲಿ ನಿರ್ಮಾಣಗೊಂಡ ಮಾರ್ಕೇಟ್…..ಉದ್ಘಾಟನೆಗೊಂಡ ಬಳಿಕ ಮಳಿಗೆಗಳನ್ನು ಏಲಂ ಮಾಡದೇ ಬಿಕೋ ಎನ್ನುತ್ತಿರುವ ಕಟ್ಟಡ….. ಹೌದು ಮಂಗಳೂರು

ಪಚ್ಚನಾಡಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಭೇಟಿ, ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,