Home Posts tagged #mangalore dc

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆ-ಮಲ್ಲೈ ಮುಗಿಲನ್

ಮಂಗಳೂರು: ಮಣ್ಣು ,ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ

ಡಿ.17ರಂದು ಬೆಂಗ್ರೆಯಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ

ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಮೃತ ಮಹೋತ್ಸವದ ಅಂಗವಾಗಿ ಬೆಂಗ್ರೆ ಪರಿಸದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ಡಿಸೆಂಬರ್ 17ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಜನ ಸಂಘ ಬೆಂಗ್ರೆಯ ಅಧ್ಯಕ್ಷರು ಮತ್ತು ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲದ ಅಧ್ಯಕ್ಷರಾದ ಚೇತನ್ ಬೆಂಗ್ರೆ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡ ಬಳಿಕ ವಿ4 ನ್ಯೂಸ್‍ಗೆ ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ನದಿಗಳಿಗೆ ಕಸ

ಜಲೀಲ್ ಹತ್ಯೆ ಖಂಡಿಸಿ ಕರ್ನಾಟಕ ಮುಸ್ಲಿಂ ಜಮಾಅತ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಮನವಿ : ನಾಳೆ ಧರಣಿ

ಕರಾವಳಿ ಜಿಲ್ಲೆಯಲ್ಲಿ ಮತ್ತೆ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು ಹತ್ಯೆ ಮಾಡಿದ ಆರೋಪಗಳನ್ನು ಶೀಘ್ರದಲ್ಲೇ ಬಂಧಿಸಿ, ಕಠಿಣ ಶಿಕ್ಷೆಗೆ ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮುಸ್ಲಿಂ ಜಮಾಅತ್ ಮುಖಂಡರು ಮನವಿ ಸಲ್ಲಿಸಿದರು. ಕರಾವಳಿ ಭಾಗದಲ್ಲಿ ನಡೆಯುತ್ತಿರುವ ಕೊಲೆ ಪ್ರಕರಣಗಳನ್ನ ಮಟ್ಟ ಹಾಕಬೇಕು. ಜೊತೆಗೆ ಕೃಷ್ಣಾಪುರದ ಜಲೀಲ್ ಎಂಬ ಅಮಾಯಕನನ್ನು

ಡಿ. 1ರಿಂದ ಸುರತ್ಕಲ್‌ನಲ್ಲಿ ಟೋಲ್ ಸಂಗ್ರಹ ಇಲ್ಲ : ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ  ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್  1 ರಿಂದ ಸುರತ್ಕಲ್‌ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುರತ್ಕಲ್ ಟೋಲನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ವಿಲೀನಗೊಳಿಸಿರುವುದನ್ನು ಮುಂದಿಟ್ಟು ಜಿಲ್ಲಾಧಿಕಾರಿಯವರು ಈ ಆದೇಶ ಮಾಡಿದ್ದಾರೆ. ಈ ಆದೇಶದನ್ವಯ ಡಿಸೆಂಬರ್

ಇರುವೈಲ್‍ನಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ : 35 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ

ಮೂಡುಬಿದಿರೆ: ದ.ಕ ಜಿಲ್ಲಾಡಳಿತ , ದ.ಕ. ಜಿ.ಪಂ ವತಿಯಿಂದ ಇರುವೈಲು ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ನಡೆದ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಡೀಮ್ಡ್ ಫಾರೆಸ್ಟ್, ಹಾಗೂ ಖಾಸಗಿಗೆ ಸಂಬಂಧಿಸಿದ ಅರ್ಜಿಗಳನ್ನು ಪರಿಶೀಲಿಸಿ 35 ಅರ್ಜಿಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಸರ್ಕಾರದ ಮಟ್ಟದಲ್ಲಿ ಪರಿಹರಿಸಬಹುದಾದ ಅರ್ಜಿಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿದರು.

3 ದಿನಗಳಲ್ಲಿ ಟೋಲ್‍ಗೇಟ್ ತೆರವು ಅಂತಿಮ ಆದೇಶ : ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಭರವಸೆ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸದಿರುವ ಕುರಿತು ಚರ್ಚಿಸಲು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ದ.ಕ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು. ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ

ಜಾತ್ಯಾತೀತ ಪಕ್ಷಗಳ ಜಂಟಿ ವೇದಿಕೆಯ ನಿಯೋಗ ಜಿಲ್ಲಾಧಿಕಾರಿಗಳ ಭೇಟಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸದಿರುವ ಕುರಿತು ಚರ್ಚಿಸಲು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ದ‌.ಕ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು. ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ

ದ.ಕ. ಜಿಲ್ಲೆಯಲ್ಲಿ 2023ರ ಕರಡು ಮತದಾರರ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಜಿಲ್ಲೆಯ ಮತದಾರರು ಕರಡ ಪಟ್ಟಿ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ 17,08, 955 ಮತದಾರರಿದ್ದು, 8, 71,364 ಮಹಿಳಾ ಮತ್ತು 8,37,527 ಪುರುಷ ಮತದಾರರಿದ್ದಾರೆ. ಡಿ.8ರ ವರೆಗೆ ಮತದಾರರ ಪಟ್ಟಿ ಪರಿಷ್ಕರಣೆಯ ಹಿನ್ನೆಲೆಯಲ್ಲಿ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಯ ಹಿನ್ನಲೆಯಲ್ಲಿ ವಿಶೇಷ

ನೀರುಮಾರ್ಗದಲ್ಲಿ  ಆಫ್ರಿಕನ್​ ಹಂದಿ ಜ್ವರ ಪತ್ತೆ : ಜನ ಭಯಭೀತರಾಗುವುದು ಬೇಡಾ : ದ.ಕ.ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್

ಮಂಗಳೂರು :  ಮಂಗಳೂರು ನಗರದ ನೀರುಮಾರ್ಗದಲ್ಲಿ  ಆಫ್ರಿಕನ್​ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ. ನಗರದ ನೀರುಮಾರ್ಗ ಗ್ರಾಮದ ಕೆಲರಾಯಿ ಪ್ರದೇಶದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿನ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ಇರುವುದು ದೃಢಪಟ್ಟಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ರಾಷ್ಟ್ರೀಯ ರೋಗ ನಿಯಂತ್ರಣ ಮಾರ್ಗಸೂಚಿಯಂತೆ

ಕಡಬದಲ್ಲಿ ದಾರಿ ತಕರಾರು ಪರಿಶೀಲಿಸಿದ ಜಿಲ್ಲಾಧಿಕಾರಿ

ಕಡಬದಲ್ಲಿ ಜರಗಿದ ಡಿಸಿ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ 45ಕ್ಕೂ ಹೆಚ್ಚು ಅರ್ಜಿಗಳನ್ನು ಪರಿಶೀಲಿಸಿದರು. ದಾರಿ ತಕರಾರುಗಳ ಅರ್ಜಿಗಳನ್ನು ಪರಿಶೀಲಿಸಿದ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಪಿಡಿಓಗಳು ಹಾಗೂ ಕಂದಾಯ ಅಧಿಕಾರಿಗಳಿಗೆ ಆದೇಶಿಸಿದರು. 11 ಇ ಅರ್ಜಿಗಳ ವಿಲೇವಾರಿಗೆ ವೇಗ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದವರು ಆ