Home Posts tagged #mangalore dc (Page 2)

ಅಕ್ಷರ ಸಂತನ ಮನೆಗೆ ವೃಕ್ಷಮಾತೆ ಭೇಟಿ

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಮನೆಗೆ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ತುಳಸೀ ಗೌಡ ಅವರು ಹರೇಕಳದ ನ್ಯೂಪಡ್ಪು ಮನೆಯಲ್ಲಿ ಭೇಟಿ ನೀಡಿದರು. ಇಂದು ಬೆಳಗ್ಗೆ ಭೇಟಿ ನೀಡಿದ ತುಳಸಿ ಗೌಡ ಅವರು ಹಾಜಬ್ಬರ ಜೊತೆ ಉಪಹಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಹರೇಕಳ ಗ್ರಾಮಸ್ಥರಿಂದ ತುಳಸಿ ಗೌಡ ಅವರನ್ನು ಅಭಿನಂದಿಸಲಾಯಿತು.

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದ.ಕ. ಜಿಲ್ಲಾಡಳಿತದಿಂದ ಸನ್ಮಾನ

ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ, ಅಧಿಕಾರಿಗಳು ಉಪಸ್ಥಿತರಿದ್ದರು.

ತಣ್ಣೀರುಬಾವಿ ತೀರದಲ್ಲಿ ಲಕ್ಷ ಕಂಠಗಳ ಗೀತ ಗಾಯನ

ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ,

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇವಾರಿಗೆ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು:  ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ  ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು. ಅವರು

ಜಿಲ್ಲೆಯಲ್ಲಿ ವೀಕೆಂಡ್ ಮನರಂಜನೆಗೆ ಚಿಂತನೆ : ಜಿಲ್ಲಾಧಿಕಾರಿ

ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು. ಬೀಚ್‍ಗಳಿಗೆ ಆಗಮಿಸುವವರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ ಜತೆಗೆ ಹೊಟೇಲ್ ಮಾದರಿಯ ಊಟೋಪಾಚರ

ಮಂಗಳೂರಿನಲ್ಲಿ ವಾಣಿಜ್ಯ ಸಪ್ತಾಹ-ರಫ್ತುದಾರರ ಸಮಾವೇಶ

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.

ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ : ಡಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19

ದ.ಕ. ಜಿಲ್ಲೆಯಲ್ಲಿ ಸೆ.17ರಂದು ಮೆಗಾ ಲಸಿಕಾ ಮೇಳ

ದ.ಕ. ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 4ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 1.50 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ಶೇ. 80ರಷ್ಟು ಮಂದಿ ಪ್ರಥಮ ಡೋಸ್ ಪಡೆದಿದ್ದಾರೆ. ಸುಮಾರು 56,000 ಮಂದಿ ಪ್ರಸಕ್ತ ಎರಡನೆ ಡೋಸ್ ಪಡೆಯಲು ಅರ್ಹತೆ

ಮಂಗಳೂರಿನಲ್ಲಿ ರೋಗಿಗೆ ನಿಫಾ ವೈರಸ್ ಲಕ್ಷಣ ಪತ್ತೆ ವಿಚಾರ : ಉಡುಪಿ ಮತ್ತು ಕಾರವಾರ ಅಲರ್ಟ್

ಕೊರೊನಾದೊಂದಿಗೆ ನಿಫಾ ವೈರಸ್ ಮತ್ತಷ್ಟು ಆತಂಕ ತಂದೊಡ್ಡಿದ್ದು, ಇದೀಗ ಕಾರವಾರದ ವ್ಯಕ್ತಿಯೊಬ್ಬಗೆ ಸೋಂಕಿನ ಕೆಲ ಲಕ್ಷಣ ಕಂಡು ಬಂದಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಾರವಾರದ ವ್ಯಕ್ತಿ ಗೋವಾದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದು, ಕಾರವಾರಕ್ಕೆ ಬೈಕ್ ನಲ್ಲಿ ಮಳೆಯಲ್ಲಿ ಬಂದಿದ್ದು, ಆತನಿಗೆ ನಿಫಾ ಸೋಂಕಿನ ಶಂಕೆ ಇಲ್ಲದಿದ್ದರೂ ನಿರ್ಲಕ್ಷ ಮಾಡಲು

ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು : ದ. ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ .ಕೆ.ವಿ

ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ,