ತಣ್ಣೀರುಬಾವಿ, ಪಣಂಬೂರು ಸೇರಿದಂತೆ ದ.ಕ. ಜಿಲ್ಲೆಯ ಬೀಚ್‍ಗಳಲ್ಲಿ ಮೂಲಭೂತ ಸೌಕರ್ಯದೊಂದಿಗೆ ಪ್ರವಾಸಿಗರನ್ನು ಸೆಳೆಯಲು ವಿಭಿನ್ನ ರೀತಿಯ ಕ್ರಮಗಳನ್ನು ರೂಪಿಸಲಾಗಿದೆ. ಪ್ರವಾಸಿಗರಿಗೆ ಮಂಗಳೂರಿನ ಒಳಗಡೆ ಇರುವ ಬೀಚ್‍ಗಳನ್ನು ಸಂಪರ್ಕಿಸಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಬಗ್ಗೆ ಸೆ.27ರಂದು ಪ್ರವಾಸೋದ್ಯಮ ದಿನದ ಅಂಗವಾಗಿ ನಡೆಯುವ ಸಭೆಯಲ್ಲಿ ಚರ್ಚಿಸಲಾಗುವುದು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಜಿಲ್ಲಾ ಕೈಗಾರಿಕಾ ಸಂಸ್ಥೆ ವತಿಯಿಂದ 75ನೇ ಆಜಾದಿಕಾ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಾಣಿಜ್ಯ ಸಪ್ತಾಹ ರಫ್ತುದಾರರ ಸಮಾವೇಶಕ್ಕೆ ನಗರದ ಓಷಿಯನ್ ಪರ್ಲ್ ಹೋಟೆಲ್‍ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೆ.23ರ ಗುರುವಾರ ಚಾಲನೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಶೇ.80ರಷ್ಟು ಮಂದಿಗೆ ಲಸಿಕೆ ಹಾಕಿಸಲಾಗಿದೆ. ಆದರೆ ಬಾಕಿ ಉಳಿದವರಿಗೆ ಲಸಿಕೆ ಹಾಕಿಸುವುದು ತುಂಬಾ ಸವಾಲಿನ ಕೆಲಸ ಆಗಲಿದೆ. ಅದಕ್ಕಾಗಿ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಇಂದಿನ ಲಸಿಕಾ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‍ಕ್ಲಬ್‍ನಲ್ಲಿ ಏರ್ಪಡಿಸಲಾದ ಕೋವಿಡ್ 19
ದ.ಕ. ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 4ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 1.50 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ಶೇ. 80ರಷ್ಟು ಮಂದಿ ಪ್ರಥಮ ಡೋಸ್ ಪಡೆದಿದ್ದಾರೆ. ಸುಮಾರು 56,000 ಮಂದಿ ಪ್ರಸಕ್ತ ಎರಡನೆ ಡೋಸ್ ಪಡೆಯಲು ಅರ್ಹತೆ
ಕೊರೊನಾದೊಂದಿಗೆ ನಿಫಾ ವೈರಸ್ ಮತ್ತಷ್ಟು ಆತಂಕ ತಂದೊಡ್ಡಿದ್ದು, ಇದೀಗ ಕಾರವಾರದ ವ್ಯಕ್ತಿಯೊಬ್ಬಗೆ ಸೋಂಕಿನ ಕೆಲ ಲಕ್ಷಣ ಕಂಡು ಬಂದಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಾರವಾರದ ವ್ಯಕ್ತಿ ಗೋವಾದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದು, ಕಾರವಾರಕ್ಕೆ ಬೈಕ್ ನಲ್ಲಿ ಮಳೆಯಲ್ಲಿ ಬಂದಿದ್ದು, ಆತನಿಗೆ ನಿಫಾ ಸೋಂಕಿನ ಶಂಕೆ ಇಲ್ಲದಿದ್ದರೂ ನಿರ್ಲಕ್ಷ ಮಾಡಲು
ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ,
ಬೆಂಗಳೂರು: ‘ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರಕಾರವು ಮನೆಯಲ್ಲಿ 2 ಅಡಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ 4 ಅಡಿ ಗಣೇಶ ಮೂರ್ತಿ ಇಡಬೇಕೆಂಬ ಅರ್ಥಹೀನ ನಿರ್ಬಂಧ ಹೇರುವ ಮೂಲಕ ಮೂರ್ತಿ ತಯಾರಕರ ಬದುಕಿನ ಜತೆ ಚೆಲ್ಲಾಟವಾಡಿದೆ. ತಕ್ಷಣ ಈ ಆದೇಶ ಹಿಂಪಡೆಯಬೇಕು ಅಥವಾ ಮೂರ್ತಿ ತಯಾರಿಕರಿಗೆ ಪರಿಹಾರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ‘ಕಳೆದ 2 ತಿಂಗಳಿಂದ ಗಣೇಶ ಮೂರ್ತಿ
ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ
ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಕೋವಿಡ್ 3ನೆ ಅಲೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತ ಕೈಗೊಂಡಿರುವ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ನಿಯಂತ್ರಣಕ್ಕೆ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಲಾಗಿದೆ. ಆ ಸಂದರ್ಭ ಸಂಪೂರ್ಣ ಲಾಕ್‍ಡೌನ್ ಇರಲಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಕ್ಕೆ ತರಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚನೆ ನೀಡಿದರು. ಕೊರೋನ ನಿಯಂತ್ರಣ ಕುರಿತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರ್‍ಗಳು, ತಾಲೂಕು ಆರೋಗ್ಯಾಧಿಕಾರಿಗಳ ಜೊತೆಗೆ ದ.ಕ.ಜಿಲ್ಲಾಧಿಕಾರಿ ಕಚೇರಿಯ ವೀಡಿಯೊ ಕಾನ್ಫರೆನ್ಸ್


















