ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಭಾರೀ ಮಳೆಯಾಗಿದೆ. ಮಂಗಳೂರು ನಗರದ ಹಲವೆಡೆ ರಸ್ತೆಗಳಲ್ಲಿ ಕೃತಕ ನೆರೆ ಉಂಟಾಗಿದೆ. ಕೊಟ್ಟಾರದಲ್ಲಿ ರಾಷ್ಟ್ರೀಯ ಹೆದ್ದಾರಿಗೂ ನೀರು ಬಂದಿದೆ. ಕೊಟ್ಟಾರ ಪ್ರದೇಶದ ಮಾಲೆಮಾರ್, ಕೋಡಿಕಲ್ ಏರಿಯಾದಲ್ಲಿ ರಸ್ತೆಯಲ್ಲಿ ಭಾರೀ ಪ್ರಮಾಣದ ನೀರು ಹರಿದಿದ್ದು ಹಲವಾರು ಮನೆಗಳಿಗೆ ಮಳೆ ನೀರು ನುಗ್ಗಿದೆ. ನೀರುಮಾರ್ಗದ ಬಳಿಯ ಬದಿನಡಿ
ಕರಾವಳಿಯಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರೀ ಮಳೆ ಮುಂದುವರೆದಿದೆ. ಉತ್ತರ ಕನ್ನಡ ಸೇರಿದಂತೆ ದಕ್ಷಿಣ ಕನ್ನಡ, ಉಡುಪಿ,