Home Posts tagged #mangalore news (Page 3)

ಪ್ರಮಾಣ ಪತ್ರ ಸ್ವೀಕರಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ

ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ್ ಭಂಡಾರಿ ಅವರಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಪ್ರಮಾಣ ಪತ್ರ ವಿತರಿಸಿದರು

ಕಾಪು ಪುರಸಭೆ ಚುನಾವಣೆ: ಬಿಜೆಪಿಗೆ ಬಂಡಾಯ ಬಿಸಿ

ಕಾಪು ಪುರಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಬಿಜೆಪಿ ಎರಡೂ ಪಕ್ಷಗಳೂ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಿದ್ದು, ಬಂಡಾಯದ ಬಿಸಿ ಬಿಜೆಪಿಯನ್ನು ಸುಡಲಿದೆಯೇ ಎಂಬ ಆತಂಕ ಬಿಜೆಪಿ ಪಾಳಾಯದಲ್ಲಿ ಮೂಡಿದೆ.ನಾಮಪತ್ರ ಸಲ್ಲಿಕೆಗೆ ಡಿ.15 ಅಂತಿಮ ದಿನವಾಗಿದ್ದು, ಇದೀಗ ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆಗೊಳಿಸುತ್ತಿರುವಂತೆ, ಟಿಕೇಟ್ ವಂಚಿತರು ಕೆಂಡಾಮಂಡಲವಾಗಿದ್ದಾರೆ. ಪಕ್ಷಕ್ಕಾಗಿ ದುಡಿದ ನಮಗೆ ನಮ್ಮದೇ ಪಕ್ಷದ ನಾಯಕರಿಂದ ಅನ್ಯಾಯವಾಗಿದೆ ಎಂಬ ಮಾತುಗಳು ಅತೃಪ್ತರ

ಬೈಕಂಪಾಡಿಯಲ್ಲಿರುವ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್ : ಕಂಪನಿಯ ರಾಯಭಾರಿಯ ಪರಿಚಯ, ಪ್ರಚಾರ ಅಭಿಯಾನದ ಉದ್ಘಾಟನೆ

ಮಂಗಳೂರಿನ ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪ್ರತಿಷ್ಠಿತ ಕಂಪನಿಯಾದ ಓಶಿಮಾ ಸಿಸ್ಟಮ್ಸ್ ಪ್ರೈವೆಟ್ ಲಿಮಿಟೆಡ್‍ನ ವೆಲ್ಡಿಂಗ್ ಎಲೆಕ್ಟ್ರೋಡ್ ಮತ್ತು ಇನ್ವರ್ಟರ್ ಬ್ಯಾಟರಿ ತಯಾರಕರು ಬೈಕಂಪಾಡಿಯ ಕೆನರಾಇಂಡಸ್ಟ್ರೀಸ್ ಅಸೋಸಿಯೇಶನ್‍ನಲ್ಲಿ, ತನ್ನ ಕಂಪನಿಯ ರಾಯಭಾರಿಯನ್ನು ಪರಿಚಯಿಸುವ ಹಾಗೂ ಪ್ರಚಾರ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಪೆನಿಯ ಬ್ರಾಂಡ್ ಅಂಬಾಸಿಡರ್ ಖ್ಯಾತ ಚಲನಚಿತ್ರ ನಟ ಪೃಥ್ವಿ ಅಂಬರ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು

ಕೋವಿಡ್ ಸೂಕ್ಷ್ಮ ನಡವಳಿಕೆ ಮತ್ತು ಲಸಿಕೆಯ ಕುರಿತು ಮಾಹಿತಿ

ಸ್ವಚ್ಛ ಭಾರತ್ ಮಿಷನ್ (ಗ್ರಾ) ವತಿಯಿಂದ ಸಾಹಸ್, ಐಐಎಚ್‌ಎಂಆರ್ ಬೆಂಗಳೂರು, ಯುನಿಸೆಫ್ ಸಹಯೋಗದಲ್ಲಿಆಶಾ ಕಾರ್ಯಕರ್ತೆಯರಿಗೆ ಕೋವಿಡ್ -19 ಸೂಕ್ಷ್ಮ ನಡವಳಿಕೆ ಮತ್ತು ಲಸಿಕೆಯ ಕುರಿತು ಮಾಹಿತಿ,ಶಿಕ್ಷಣ ಹಾಗೂ ಸಂವಹನ ಕಾರ್ಯಾಗಾರವನ್ನು ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಡಾ. ಸುಜಯ್ ಅವರು ಆಶಾ ಕಾರ್ಯಕರ್ತೆಯರಿಗೆ Menstrual Cup ವಿತರಿಸುವ ಮೂಲಕ ಚಾಲನೆ ನೀಡಿದರು. ಕೋವಿಡ್ -೧೯ ಆರಂಭಿಕ ಸಮಯದಲ್ಲಿ ಲಸಿಕೆ ಬಗ್ಗೆ ಜನರಿಗೆ ಹಿಂಜರಿಕೆ ಇತ್ತು. ಪ್ರಸ್ತತ ಜನರು

ಕರ್ನಾಟಕದಲ್ಲಿ ಅಸ್ಥಿತ್ವಕ್ಕೆ ಬಂದ ಡಿಜಿಟಲ್ ಮೀಡಿಯಾ ಫೋರಂ

ಮಾಧ್ಯಮ‌ಲೋಕದಲ್ಲಿ‌ ಮತ್ತೊಂದು ಹೊಸ ಬದಲಾವಣೆಯ ಡಿಜಿಟಲ್ ಕ್ರಾಂತಿ ಶುರುವಾಗಿದ್ದು ಗೊತ್ತೇಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ಥಿತ್ವಕ್ಕೆ ಬಂದಿದೆ. ಈ ಮೀಡಿಯಾ ಫೊರಂ ನ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರಾದ ಸಮೀವುಲ್ಲಾ

ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಂತಹ ಅಭ್ಯರ್ಥಿ : ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

ಮಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ದಕ್ಷಿಣ ಕನ್ನಡದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಮೊದಲ ಸ್ಥಾನವನ್ನು ಪಡೆದಿದ್ದಾರೆ. ಈ ಕುರಿತು ಸಂತಸ ವ್ಯಕ್ತಪಡಿಸಿದ ಅವರು, ಮತದಾರರಿಗೆ ಹಾಗೂ ಖರ್ಚಿಗೆ ಒಂದೇ ಒಂದು ರೂಪಾಯಿ ಖರ್ಚು ಮಾಡಿದೇ ಗೆದ್ದಂತಹ ಅಭ್ಯರ್ಥಿ ಅಂದರೆ ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಎಂದು ಹೇಳಲು ಸಂತೋಷಪಡುತ್ತೇನೆ. ಇದು ನೈಜ ಮತದಾರರ ಗೆಲುವು ಅಂತ ನನಗೆ ಅನಿಸುತ್ತೆ. ಮತ್ತು ಇದು ಬಿಜೆಪಿ ಪಕ್ಷದ ಪ್ರತಿ

ಮತದಾನ ಮಾಡಿದ ಚುನಾಯಿತ ಪ್ರತಿನಿಧಿಗಳಿಗೆ ಅಭಿನಂದನೆ : ಡಾ. ಮಂಜುನಾಥ ಭಂಡಾರಿ ಹೇಳಿಕೆ

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅವಕಾಶ ಕೊಟ್ಟ ಕಾಂಗ್ರೆಸ್ಸಿಗೆ ನಮಿಸುತ್ತೇನೆ. ನನಗೆ ಬೆಂಬಲ ಕೊಟ್ಟು ಹಾಗೂ ಮತದಾನ ಮಾಡಿದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ಸಿನ ವಿಧಾನಪರಿಷತ್ ಅಭ್ಯರ್ಥಿ ಮಂಜುನಾಥ ಭಂಡಾರಿ ಹೇಳಿದರು. ಈ ಗೆಲುವು ಕಾಂಗ್ರೆಸ್ ಕಾರ್ಯಕರ್ತರ ಗೆಲುವು ಎಂದು ಸಂತೋಷ ವ್ಯಕ್ತಪಡಿಸಿದರು. ಸಾಮಾನ್ಯ ಕಾರ್ಯಕರ್ತನಾಗಿದ್ದ ನನ್ನನ್ನು ಈ ಮಟ್ಟಕ್ಕೆ ಗುರುತಿಸಿ ಬೆಳೆಸಿದ ಕಾಂಗ್ರೆಸ್

ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ ಆತ್ಮಹತ್ಯೆ

ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಇಲ್ಲದಂತಹ

ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ನಿಧನ

ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿ ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಬಡಾವಣೆಯೊಂದರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರಾಜೇಶ್ವರಿ ಅವರು ತನ್ನ ತಂದೆಯ ಪ್ರೋತ್ಸಾಹದಿಂದ ಆ ಕಾಲದಲ್ಲಿ ಉತ್ತಮ ವಿದ್ಯಭ್ಯಾಸ ಮಾಡಿದ್ದರು. ತತ್ವಶಾಸ್ತ್ರದಲ್ಲಿ

ಸಂಪೂರ್ಣ ಹದಗೆಟ್ಟಿರುವ ಕಾನ-ಕುಳಾಯಿ ರೈಲ್ವೇ ಮೇಲ್ಸೇತುವೆ : ಡಿವೈಎಫ್‍ಐನಿಂದ ಪ್ರತಿಭಟನೆ

ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್‍ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‍ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ ರಸ್ತೆ ಗುಂಡಿ ಬಿದ್ದು, ಸಂಚರಿಸಲು ಆಗದ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ