ನಗರದ ಹಂಪನಕಟ್ಟೆ ವಿಶ್ವವಿದ್ಯಾಲಯ ಕಾಲೇಜಿನ ಐದು ಮತಗಟ್ಟೆಗಳಲ್ಲಿ ಮತದಾರರು ಸರದಿಯಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 8,189 ಮತದಾರರು ಇದ್ದು, ಅವರಲ್ಲಿ 5,539 ಪುರುಷರು, 2,650 ಮಹಿಳೆಯರು ಇದ್ದಾರೆ. ಪದವೀಧರ ಕ್ಷೇತ್ರದಲ್ಲಿ ಒಟ್ಟು 19,971 ಮತದಾರರು ಇದ್ದು, ಅವರಲ್ಲಿ 11,596 ಮಹಿಳೆಯರು ಹಾಗೂ 8,375
ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ಪೂರ್ಣ ಪ್ರಜ್ಞ ಕಾಲೇಜು ಮತ್ತು ಮಂಗಳೂರು ವಿವಿ ಸ್ನಾತಕೋತ್ತರ ಕೇಂದ್ರಗಳು ಜಂಟಿಯಾಗಿ ನಡೆಸಿದ ಅಂತರ ವಿಶ್ವವಿದ್ಯಾನಿಲಯ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವು 33 ವರುಷಗಳ ಬಳಿಕ ಮತ್ತೆ ಚಾಂಪಿಯನ್ ಅಯಿತು. ಅಖಿಲ ಭಾರತ ಅಂತರ ವಿಶ್ವವಿದ್ಯಾನಿಲಯ ಪುರುಷರ ಕಬಡ್ಡಿಯ ಫೈನಲಿನಲ್ಲಿ 45- 15 ಅಂಕಗಳಿಂದ ಮಂಗಳೂರು ವಿವಿಗೆ ಸೋತ ಚೆನ್ನೈನ ವೇಲ್ ಸಯನ್ಸ್ ಆಂಡ್
ಮುಡಿಪು : ಕಲಾವಿದನಾಗಲಿ ಗಾಯಕನಾಗಲಿ ಸಂಗೀತದ ಎಲ್ಲಾ ಪ್ರಕಾರಗಳನ್ನು ಒಂದೇ ರೀತಿ ಇಷ್ಟಪಡಬೇಕು. ಸಂಗೀತ ಕ್ಷೇತ್ರದಲ್ಲಿ ಸ್ವರಗಳ ಜ್ಞಾನ ಅರಿತುಕೊಂಡು ಬೆಳೆದರೆ ಯಶಸ್ಸು ಸಾಧ್ಯ. ಸಂಗೀತ ಮತ್ತು ಸಾಹಿತ್ಯ ಎನ್ನುವಂತದ್ದು ಸಾಗರ. ಅದರಲ್ಲಿಯೂ ಕನಕದಾಸರು ಹಾಗೂ ಪುರಂದರದಾಸರ ರಚನೆಗಳು ಅಪೂರ್ವ. ಗಾಯಕರು ಸಾಹಿತ್ಯಕ್ಕೆ ಗಮನಕೊಟ್ಟು ಹಾಡಿದರೆ ಅದರ ಚಂದವೇ ಬೇರೆ ಎಂದು ಬೆಂಗಳೂರಿನ ಖ್ಯಾತ ಗಾಯಕರು, ಗಾನ ಗಂಧರ್ವ ಶಶಿಧರ್ ಕೋಟೆ ಅವರು ಹೇಳಿದರು. ಮಂಗಳೂರು
ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಮೌಲ್ಯಮಾಪನ) ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ರಾಜು ಕೃಷ್ಣ ಚಲ್ಲಣ್ಣವರ್ ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಸರ್ಕಾರದ ಅಧಿಸೂಚನೆಯಂತೆ ಕುಲಸಚಿವ (ಮೌಲ್ಯಮಾಪನ) ರಾಗಿದ್ದ ಪ್ರೊ. ಪಿ ಎಲ್ ಧರ್ಮ ಅವರು ನೂತನ ಕುಲಸಚಿವರಿಗೆ ಅಧಿಕಾರ ಹಸ್ತಾಂತರಿಸಿದರು. ಪ್ರೊ. ಪಿ ಎಲ್ ಧರ್ಮ ಅವರು ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ ಮುಂದುವರಿಯಲಿದ್ದಾರೆ. ಅನ್ವಯಿಕ
ಮಂಗಳೂರು ವಿಶ್ವವಿದ್ಯಾನಿಲಯದ ಆವರಣದಲ್ಲಿ ಜೈನ್ ವಿವಿಯ ಪ್ರಕರಣವನ್ನು ಖಂಡಿಸಿ ನಡೆಸಿರುವ ಶಾಂತಿಯುತ ಪ್ರತಿಭಟನೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಬೋಧಕ ಹಾಗೂ ಬೋಧಕೇತರ ವರ್ಗದವರು ಬಾಗವಹಿಸಿದರು. ಈ ಶಾಂತಿಯುತ ಪ್ರತಿಭಟನೆಯಲ್ಲಿ ಅಂಬೇಡ್ಕರ್, ಫುಲೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಅವಿನಾಶ್ ಕಾಂಬ್ಳೆ, ವಿಜಯ್ ಕುಮಾರ್, ಗೋವಿಂದ್