Home Posts tagged #mangalore (Page 145)

ಬಲ್ಮಠ ಜ್ಯೂಸ್ ಜಂಕ್ಷನ್ ಬಳಿ ಬೆಂಕಿಗೆ ಸುಟ್ಟು ಕರಕಲಾದ ಕಾರು

ಮಂಗಳೂರು: ಕಾರೊಂದು ಹೊತ್ತಿ ಉರಿದ ಘಟನೆ ನಗರದ ಜ್ಯೋತಿ ಬಳಿ ನಡೆದಿದೆ. ಇಂದು ಮಧ್ಯಾಹ್ನ ಜ್ಯೋತಿ ಬಳಿಯ ಜ್ಯೂಸ್ ಜಂಕ್ಷನ್ ಬಳಿ ಈ ಘಟನೆ ನಡೆದಿದ್ದು, ಸ್ಥಳೀಯರು ಬೆಂಕಿ ನಂದಿಸಿದ್ದಾರೆ. ಬೆಂಕಿ ಯಾವ ಕಾರಣಕ್ಕೆ ತಗುಲಿತ್ತು ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.

ಹೊಯಿಗೆ ಫ್ರೆಂಡ್ಸ್ ಪಲಿಮಾರು ; ಹಾವು ನಾವು ಮತ್ತು ಪರಿಸರ ವಿಷಯದ ಕುರಿತು ಜಾಗೃತಿ

ಹೊಯಿಗೆ ಫ್ರೆಂಡ್ಸ್ (ರಿ) ಪಲಿಮಾರು” ಸಂಸ್ಥೆಯ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ಖ್ಯಾತ ಉರಗ ತಜ್ಞ ಶ್ರೀ ಗುರುರಾಜ್ ಸನಿಲ್ ಉಡುಪಿ ಇವರಿಂದ, ‘ಹಾವು ನಾವು ಮತ್ತು ಪರಿಸರ’ ಎಂಬ ವಿಷಯದ ಕುರಿತು ಜಾಗ್ರತಿ ಮೂಡಿಸುವ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು. ಜೀವಂತ ಹಾವುಗಳನ್ನು ತಂದು,ಅವುಗಳ ಪರಿಚಯವನ್ನು ಮಾಡಿಸಿದರು. ಹಾವುಗಳು ಕಾರಣವಿಲ್ಲದೆ ಯಾರಿಗೂ ಕಚ್ಚುವುದಿಲ್ಲ ವಿದ್ಯಾರ್ಥಿಗಳು ಹಾವುಗಳನ್ನು ಕಂಡು

ಪಡುಬಿದ್ರಿ :ಉಪ್ಪಿನಕಾಯಿ ಬಾಟಲಿ ಒಳಗಡೆ ಹಲ್ಲಿ ಪತ್ತೆ

ಪಡುಬಿದ್ರಿ ಬೀಡು ಬಳಿಯ ನಿವಾಸಿ ಉಮೇಶ್ ಪೂಜಾರಿ ಎಂಬವರು ಮುಲ್ಕಿ ಕಾರ್ನಾಡಿನ ಅಂಗಡಿಯೊಂದರಲ್ಲಿ ಕರೀದಿ ಮಾಡಿದ ಉಪ್ಪಿನ ಕಾಯಿ ಬಾಟಲ್ ಒಳಗಡೆ ಸತ್ತ ಹಲ್ಲಿ ಪತ್ತೆಯಾಗಿ ಕೆಲ ಕ್ಷಣ ಮನೆಮಂದಿ ಆತಂಕ ಪಟ್ಟಿದ್ದಾರೆ.

ವಿಶ್ವದಲ್ಲಿ ಅತಿ ದೊಡ್ಡ ಮೂತ್ರಕೋಶದ ಕಲ್ಲು ಪತ್ತೆ

ಮಣಿಪಾಲ, 25ನೇ ನವೆಂಬರ್ 2022: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿನ ಮೂತ್ರಶಾಸ್ತ್ರಜ್ಞರ ತಂಡವು ಅತಿದೊಡ್ಡ ಮೂತ್ರಕೋಶದ ಕಲ್ಲು ಯಶಸ್ವಿಯಾಗಿ ತೆಗೆದುಹಾಕಿದೆ. 60 ವರ್ಷ ವಯಸ್ಸಿನ ಮಹಿಳೆ ಕಳೆದ ಆರು ವರ್ಷಗಳಿಂದ ಉರಿ ಮೂತ್ರ ದೂರುಗಳೊಂದಿಗೆ ಸ್ಥಳೀಯ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ ರೋಗಲಕ್ಷಣಗಳ ಪ್ರತಿ ಭೇಟಿಯಲ್ಲಿ ಮೂತ್ರನಾಳದ ಸೋಂಕಿಗೆ ಪ್ರಾಯೋಗಿಕವಾಗಿ ಚಿಕಿತ್ಸೆ ನೀಡಲಾಗಿತ್ತು. ಇತ್ತೀಚೆಗೆ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ

ಬಂಟ್ವಾಳ : ಉದಯೋನ್ಮುಖ ಚಿತ್ರಕಲಾವಿದ ಶಶಾಂಕ್

ಬಂಟ್ವಾಳ: ಕಲಾವಿದರಿಗೆ ಸೂಕ್ತ ಅವಕಾಶ ಹಾಗೂ ಪ್ರೊತ್ಸಾಹಗಳು ಸಿಕ್ಕಾಗ ಅವರ ಪ್ರತಿಭೆ ಅನಾವರಣಗೊಳ್ಳಲು ಸಾಧ್ಯವಿದೆ. ಬಂಟ್ವಾಳದ ಉದಯೋನ್ಮುಖ ಚಿತ್ರಕಲಾವಿದನೋರ್ವನಿಗೆ ಆತನ ಚಿತ್ರಕಲಾ ಶಿಕ್ಷಕರು ನೀಡಿದ ಪ್ರೋತ್ಸಾಹ ಹಾಗೂ ಹಿತೈಷಿಗಳು ನೀಡಿದ ಅವಕಾಶದಿಂದ ಇಂದು ಯಶಸ್ವಿ ಚಿತ್ರಕಲಾಕಾರನಾಗಿ ಮೂಡಿ ಬರುತಿದ್ದಾನೆ. ತಾಲೂಕಿನ ಪಾಣಮಂಗಳೂರಿನಲ್ಲಿರುವ ನವರಂಗ್ ಸ್ಮರಣಿಕ ಕೇಂದ್ರ ಹಾಗೂ ಅಲ್ಲೇ ಪಕ್ಕದಲ್ಲಿರುವ ಪೋನಸ್ ಹಲಸಿನ ಅಂಗಡಿಗೆ ಭೇಟಿ ನೀಡಿದಾಗ ಅದರ ಗೋಡೆಗಳಲ್ಲಿ

ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ; ಮಾ.5 ರಿಂದ 13 ರವರೆಗೆ ಬ್ರಹ್ಮಕಲಶ ಮತ್ತು ಜಾತ್ರಾ ಮಹೋತ್ಸವ

ಚಿತ್ರಾಪುರ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಚಿತ್ರಾಪುರ ಇಲ್ಲಿನ ಜೀರ್ಣೋದ್ಧಾರಕ್ಕೆ ಸರ್ವ ಭಕ್ತರು ಕೈ ಜೋಡಿಸಿ ದೇವಸ್ಥಾನವನ್ನು ಐತಿಹಾಸಿಕವಾಗಿ ಬೆಳಗಿಸಿ ಶ್ರೀ ದೇವಿಯ ಆಶೀರ್ವಾದ ಪಡೆಯುವಂತಾಗಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಬ್ರಹ್ಮಕಲಶಾಧಿ ದಾರ್ಮಿಕ ಸೇವಾ ಕಾರ್ಯಗಳು ಮಾ.5 ರಿಂದ 13 ರವರೆಗೆ ಜರಗಲಿದ್ದು ,13 ರಂದು ಬ್ರಹ್ಮಕಲಶ ಮತ್ತು 14 ರಿಂದ ಜಾತ್ರಾ ಮಹೋತ್ಸವ

ಕಾಂತಾರ ಸಿನಿಮಾ ತಂಡಕ್ಕೆ ಕೋರ್ಟಿನಲ್ಲಿ ಗೆಲುವು ; ತೈಕ್ಕುಡಂ ತಕರಾರು ಅರ್ಜಿ ವಜಾ

ಕಾಂತಾರ ಸಿನಿಮಾದ ವರಾಹರೂಪಂ ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಭಾರೀ ಹಿನ್ನಡೆಯಾಗಿದೆ. ವರಾಹಂ ರೂಪಂ ಹಾಡು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಜಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು, ತೈಕ್ಕುಡಂ ಬ್ರಿಡ್ಜ್ ಹಾಕಿದ್ದ ಅರ್ಜಿಯನ್ನೇ ವಜಾ ಮಾಡಿದೆ. ಕಾಂತಾರ ಸಿನಿಮಾ ದೇಶಾದ್ಯಂತ ಭಾರೀ ಸದ್ದು ಮಾಡಿದ ಬೆನ್ನಲ್ಲೇ ತೈಕ್ಕುಡಂ ಬ್ರಿಡ್ಜ್ ತಂಡದವರು ವರಾಹಂ ರೂಪಂ ಹಾಡಿನ ಬಗ್ಗೆ

ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಮಹಾಸಭೆ

ದಕ್ಷಿಣ ಕನ್ನಡ ಜಿಲ್ಲಾ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಶ್ರಯದಲ್ಲಿ ಜನ ಸಂಪರ್ಕ ಹಾಗೂ ಸರ್ವ ಸದಸ್ಯರ ಮಹಾಸಭೆಯನ್ನು ನವೆಂಬರ್ 27ರಂದು ನಗರದ ಡಾನ್ ಬಾಸ್ಕೋ ಹಾಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಮೇಕ್ಸಿಂ ಡಿಸಿಲ್ವ ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಬೇಡಿಕೆ, ಮುಂದಿನ ಕಾರ್ಯತಂತ್ರಗಳ ರೂಪಿಸುವಿಕೆ ಹಾಗೂ ವೇದಿಕೆಯ ಕಾನೂನು ಸಲಹೆ

ಸಮಾಜದಲ್ಲಿ ಭೀತಿ ಮೂಡಿಸುವ ಚಟುವಟಿಕೆ ಮಟ್ಟ ಹಾಕುತ್ತೇವೆ -ಸಚಿವ ಸುನೀಲ್ ಕುಮಾರ್

ಸಮಾಜದಲ್ಲಿ ಭೀತಿ ಮೂಡಿಸುವ ಎಲ್ಲಾ ಚಟುವಟಿಕೆಗಳನ್ನು ಮಟ್ಟ ಹಾಕುತ್ತೇವೆ. ಆಗಿರುವ ಘಟನೆಗಳ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಕುಕ್ಕರ್ ಬಾಂಬ್ ಸ್ಪೋಟಗೊಂಡ ನಾಗುರಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಹಿಂದು ಸಮಾಜವನ್ನು ಗುರಿಯಾಗಿಸಲಾಗಿದೆ. ಅವರ ಷಡ್ಯಂತ್ರವನ್ನು ಮಟ್ಟ ಹಾಕುತ್ತೇವೆ. ಎನ್‍ಐಎಗೆ ಶೀಘ್ರವಾಗಿ ಪ್ರಕರಣ ಹಸ್ತಾಂತರ ಆಗಲಿದ್ದು, ಇಡೀ ಪ್ರಕರಣದ ಆಳ ಅಗಲ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ;ಆಟೋ ಚಾಲಕನ ಆರೋಗ್ಯ ವಿಚಾರಿಸಿದ ಸಚಿವ ಸುನೀಲ್ ಕುಮಾರ್

ಮಂಗಳೂರು ಸಮೀಪದ ನಾಗೂರಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಉಜ್ಜೋಡಿ ನಿವಾಸಿ ಪುರುಷೋತ್ತಮರವರನ್ನು ಮಾನ್ಯ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ತೆರಳಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು ಹಾಗೂ ಕುಟುಂಬದವರಿಗೆ ಧೈರ್ಯ ತುಂಬಲಾಯಿತು..