ಮೂಡುಬಿದಿರೆ : ಕಳೆದ ಮೂರು ದಶಕಗಳಿಂದ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಸಾಧನೆಗಳನ್ನು ಮಾಡಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಈ ಬಾರಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.ಮೂಡುಬಿದಿರೆ ಕೋ ಆಪರೇಟಿವ್ ಸರ್ವೀಸ್ ಸೊಸೈಟಿಯ ನಿರ್ದೇಶಕ ಸ್ಥಾನಗಳಿಗೆ
ಕರಾವಳಿ ತೀರದ ಯಕ್ಷಗಾನ ಪ್ರಸಂಗ ಕರ್ತೃ, ಸಂಶೋಧಕ, ಅನುವಾದಕ, ವಿಮರ್ಶಕ, ಜಾನಪದ ವಿದ್ವಾಂಸ, ಕವಿ, ಕಥೆಗಾರ ಅಮೃತ ಸೋಮೇಶ್ವರ ಅವರು ಇಂದು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ಮಂಗಳೂರು ವಿಶ್ವವಿದ್ಯಾಲಯದ ಯಕ್ಷಗಾನ ಮಾಹಿತಿ ಕೇಂದ್ರದ ಸಂದರ್ಶಕ ಪ್ರಾಧ್ಯಾಪಕರಾಗಿ ಕೆಲಕಾಲ ಕಾರ್ಯ ನಿರ್ವಹಿಸಿದರು. ಯಕ್ಷಗಾನದಲ್ಲಿ ಪ್ರಸಂಗ ಕರ್ತೃವಿಗೆ ಸ್ವಾತಂತ್ರ್ಯ ಕಡಿಮೆಯೆ. ಆದರೂ ಕಲೆಯ ಮೂಲಕ ವೈಚಾರಿಕತೆಯನ್ನೂ ಪ್ರತಿಪಾದಿಸಿ ಯಕ್ಷಗಾನ
ಮೂಡುಬಿದಿರೆ: ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ತರಗತಿಯಲ್ಲಿ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ಸಿಗಬೇಕು. ಶಿಕ್ಷಣ ಸಂಸ್ಥೆಗಳು ಸಮಾಜಕ್ಕೆ ಓರ್ವ ಉತ್ತಮವಾದ ಡಾಕ್ಟರ್, ಎಂಜಿನಿಯರ್, ಸಿ.ಎ ಹಾಗೂ ವಕೀಲರನ್ನು ಮಾತ್ರ ತಯಾರು ಮಾಡುವುದಲ್ಲ ಬದಲಾಗಿ ಎಲ್ಲಾ ಕ್ಷೇತ್ರಗಳನ್ನು ನಿಭಾಯಿಸಬಲ್ಲ ಓರ್ವ ಉತ್ತಮವಾದ ರಾಜಕರಣಿಯನ್ನು ನೀಡುವ ಶಕ್ತಿ ಕೇಂದ್ರಗಳಾಗಬೇಕು ಎಂದು ರಾಜ್ಯ ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್ ಹೇಳಿದರು. ಅವರು ವಿದ್ಯಾಗಿರಿಯ ಕೃಷಿಸಿರಿ ವೇದಿಕೆಯಲ್ಲಿ
ಸಮಾಜದಲ್ಲಿ ಸಾಮಾನ್ಯರಂತೆ ಬದುಕು ಸಾಗಿಸಲು ಅಸಾಧ್ಯವಾದ ವಿಶೇಷ ಮಕ್ಕಳ ಮನಸ್ಸನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲಲು ಸಾಧ್ಯ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.ಅವರು ಶಿರ್ವ ಪಾಂಬೂರಿನ ಮಾನಸ ವಿಶೇಷ ಮಕ್ಕಳ ಶಾಲೆಯಲ್ಲಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ ಸೊರಕೆಯವರ 69ನೇ ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಕೇಕ್ ಕತ್ತರಿಸಿ ಪುಟಾಣಿಗಳಿಗೆ ತಿನ್ನಿಸಿ ಮಾತನಾಡಿದರು.ಇದೇ ಸಂದರ್ಭ ವಿಶೇಷ ಮಕ್ಕಳಿಗಾಗಿ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಉತ್ತರ 32ನೇ ವಾರ್ಡಿನ ಶರ್ಬತ್ ಕಟ್ಟೆಯ ಐಟಿಐ ಬಳಿ ಸರ್ಕಾರಿ ಜಾಗದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಸ್ಥಳೀಯರ ಬಹುಬೇಡಿಕೆಯ ಉದ್ಯಾನವನವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟನೆಗೊಳಿಸಿದರು. ಹಿರಿಯರು, ಮಕ್ಕಳು, ಸ್ಥಳೀಯರು, ಸೇರಿದಂತೆ ಎಲ್ಲರಿಗೂ ಈ ಉದ್ಯಾನವನ ಉಪಯೋಗಕರವಾಗಲಿದ್ದು ಇಲ್ಲಿನ ಉತ್ತಮ ಗುಣಮಟ್ಟದ ವ್ಯವಸ್ಥೆಗಳಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ
ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ ಇದರ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯ ಮಟ್ಟದ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿಯ ವೈಗಾ ಎಂ ಪ್ರಥಮ ಸ್ಥಾನವನ್ನು ಪಡೆದುರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ದರ್ಬೆ ಸುದರ್ಶನ್ ಎಂಟರ್ಪ್ರೈಸಸ್ ನ ಮಾಲಕರಾದ ಮನೋಜ್ ಟಿ ವಿ ಹಾಗೂ ಸಂಧ್ಯಾ ಎಂ ಇವರ ಪುತ್ರಿ.
ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶ್ರೀ ಡಿ.ಕೆ ಶಿವಕುಮಾರ್ ಹಾಗೂ ಉನ್ನತ ಶಿಕ್ಷಣ ಸಚಿವರಾದ ಶ್ರೀ ಎಂ. ಸಿ ಸುಧಾಕರ್ ಅವರ ಸೂಚನೆಯಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸವಾದ್ ಸುಳ್ಯ ಮೂಲತ ಸುಳ್ಯ ನಗರದ ಗಾಂಧಿನಗರದವರು, ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಸೈಂಟ್ ಬ್ರಿಜಿಸ್ಟ್ನಲ್ಲಿ ಮುಗಿಸಿ 14 ನೇ ವಯಸ್ಸಿನಲ್ಲಿ ಸರಕಾರಿ ಪ್ರೌಢ ಶಾಲೆ ಗಾಂಧೀನಗರ ಸುಳ್ಯ ಇದರ ಚುನಾಯಿತ ಉಪನಾಯಕನಾಗಿ ಆಯ್ಕೆಗೊಂಡಿದ್ದು, 10
ಮಂಗಳೂರು : ಎ.ಜೆ. ಆಸ್ಪತ್ರೆ & ಸಂಶೋಧನ ಕೇಂದ್ರದ ಕಾರ್ಡಿಯಾಲಜಿ ವಿಭಾಗದ ವತಿಯಿಂದ ಒಂದು ದಿನದ ಕಾರ್ಡಿಯಾಲಜಿ ಸಮ್ಮೇಳನ “ಸ್ಪೆಕ್ಟ್ರಮ್ – 2024” ಅನ್ನು ಜನವರಿ 6, 2024 ರಂದು ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ “ದಿ ಓಶಿಯನ್ ಪರ್ಲ್” ಹೋಟೆಲ್ನಲ್ಲಿ ಆಯೋಜಿಸಲಾಗಿದೆ ಎಂದು ಆಯೋಜಕ ಸಮಿತಿಯ ಅಧ್ಯಕ್ಷ ಹಾಗೂ ಎ.ಜೆ. ಆಸ್ಪತ್ರೆ & ಸಂಶೋಧನ ಕೇಂದ್ರದ ಮುಖ್ಯ ಕಾರ್ಡಿಯಾಲಜಿಸ್ಟ್ ಎ.ಜೆ. ವೈದ್ಯಕೀಯ ವಿಜ್ಞಾನ ಸಂಸ್ಥೆ
ತೆಲಂಗಾಣದಲ್ಲಿ ವೈಎಸ್‌ಆರ್ ಪಕ್ಷವನ್ನು ಸ್ಥಾಪಿಸಿದ್ದ ಹಿಂದಿನ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಆಗಿದ್ದ ರಾಜಶೇಖರ ರೆಡ್ಡಿಯವರ ಮಗಳು ಮತ್ತು ಈಗಿನ ಆಂಧ್ರದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿಯವರ ಸಹೋದರಿ ವೈ. ಎಸ್. ಶರ್ಮಿಳಾ ಅವರು ದಿಲ್ಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಸಮ್ಮುಖದಲ್ಲಿ ಶರ್ಮಿಳಾ ಅವರು ಕಾಂಗ್ರೆಸ್ ಸೇರಿದ್ದಲ್ಲದೆ ತಮ್ಮ ಪಕ್ಷವನ್ನು ಕಾಂಗ್ರೆಸ್ಸಿನಲ್ಲಿ
ಸಹಕಾರಿ, ಧುರೀಣ ಸವಣೂರು ಸೀತಾರಾಮ ರೈ ಅವರ ಅಳಿಯ ಅಶ್ವಿನ್ ಎಲ್ ಶೆಟ್ಟಿ ರಾಜಕೀಯ ಪ್ರವೇಶ ಮಾಡಿದ್ದಾರೆ. ಇಂದು ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರಿ ಮತ್ತು ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಶಾಸಕಿ ಭಾಗೀರಥಿ ಮುರುಳ್ಯ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಸಂತೋಷ ಕುಮಾರ್ ಬೊಳಿಯಾರು,




























