ಉಳ್ಳಾಲ: ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲದ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ.ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ ಎಂಬವರ ಮನೆಗೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳಿಗೆ ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ವಿದ್ಯುತ್ ವೈರ್, ಸೇರಿದಂತೆ ಹಲವು ಸಲಕರಣೆಗಳು ಸಂಪೂರ್ಣ ಸುಟ್ಟು
ಉಡುಪಿ: ಹುಬ್ಬಳ್ಳಿ ಯಲ್ಲಿ ಬಂಧಿಸಿದ ಕರಸೇವಕರನ್ನು ಕೂಡಲೇ ಬಿಡುಗಡೆ ಗೊಳಿಸುವಂತೆ ಅಗ್ರಹಿಸಿ ಹಿಂದೂ ಜಾಗರಣಾ ವೇದಿಕೆ ಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಉಡುಪಿ ಪೊಲೀಸ್ ಉಪಾಧೀಕ್ಷಕರ ಕಛೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹುಬ್ಬಳ್ಳಿ ಯಲ್ಲಿ ಬಂಧಿಸಿದ ಶ್ರೀಕಾಂತ್ ಪೂಜಾರಿ ಅವರನ್ನು ತಕ್ಷಣ ಬಿಡುಗಡೆ ಗೊಳ್ಳಿಸಬೇಕು ಇಲ್ಲವೇ ನಮ್ಮನ್ನು ಕೂಡ ಬಂಧಿಸಿ ಎಂದು ಒತ್ತಾಯಿಸಿದರು. ದೇಶದಲ್ಲಿ ರಾಮ ಮಂದಿರ ಉದ್ಘಾಟನೆಯ ಸಂಭ್ರಮ ಮನೆ ಮಾಡಿದೆ.
ಉಡುಪಿ: ದೇಶದಲ್ಲಿ ರಾಮನ ಭಕ್ತರು ಸಂತರು ಮಹಂತರು ಬಹಳ ಇದ್ದಾರೆ. ಜನಪ್ರತಿನಿಧಿಗಳು, ದಾನಿಗಳು ಭಕ್ತರೆಲ್ಲ ಆಮಂತ್ರಿತರೇ. ಪ್ರಾಣಪ್ರತಿಷ್ಠೆಗೆ ಪ್ರಾತಿನಿಧ್ಯ ಇಟ್ಟುಕೊಂಡು ಆಯ್ಕೆ ಮಾಡಲಾಗಿದೆ ಆಹ್ವಾನ ಕೊಡಲಾಗಿದೆ. ಸೀಮಿತ ಸ್ಥಳ ಇರೋದರಿಂದ ಎಲ್ಲರೂ ಭಾಗಿಯಾಗೋದು ಕಷ್ಟ ಎಂದು ರಾಮಮಂದಿರ ಪ್ರಾಣ ಪ್ರತಿಷ್ಠೆಗೆ ಆಹ್ವಾನ ಗೊಂದಲ ಬಗ್ಗೆ ಪೇಜಾವರ ಮಠಾಧೀಶ, ಟ್ರಸ್ಟಿ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು,
ಮಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವುದು ನಮ್ಮ ಹೆಮ್ಮೆ. ಇದರ ಉದ್ಘಾಟನೆಯನ್ನು ಶ್ರದ್ಧಾಭಕ್ತಿಯಿಂದ ಮಾಡಬೇಕಾದ್ದು ನಮ್ಮ ಧರ್ಮ. ಇದನ್ನು ರಾಜಕೀಯಗೊಳಿಸುವ ಅಗತ್ಯವೇನು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಅಯೋಧ್ಯೆ ವಿಚಾರ ವಿವಾದ ಇತ್ತು, ಅದು ಕೋರ್ಟ್ ಇತ್ಯರ್ಥ ಆಗಿದೆ. ಇದರಲ್ಲಿ ರಾಜಕೀಯ ಮಾಡುವ ಔಚಿತ್ಯವೇನು? ಬಿಜೆಪಿ
ಮಂಗಳೂರು: ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಸ್ಕೂಟರ್‌ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಜಾಲ್‌ನ ಅಶ್ಪಾಕ್ ಯಾನೆ ಜುಟ್ಟು ಅಶ್ಪಾಕ್ (27) ಮತ್ತು ಕಾಟಿಪಳ್ಳದ ಉಮರ್ ಫಾರೂಕ್ ಇರ್ಫಾನ್ (26) ಬಂಧಿತ ಆರೋಪಿಗಳಾಗಿದ್ದಾರೆ. ಇವರಿಂದ ಎಂಡಿಎಂಎ ಹಾಗೂ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ 1,92,800 ಮೌಲ್ಯದ ಸೊತ್ತುಗಳನ್ನು
ಮೂಡುಬಿದಿರೆ: ಇಲ್ಲಿನ ಜೈನಪೇಟೆಯಲ್ಲಿರುವ ಹಿರೇ ಅಮ್ಮನವರ ಬಸದಿಯನ್ನು ಜೀರ್ಣೋದ್ಧಾರಗೊಳಿಸಲಾಗಿದ್ದು, ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ರಥೋತ್ಸವದ ಆಮಂತ್ರಣ ಪತ್ರಿಕೆಯನ್ನು ಜೈನ ಮಠದಲ್ಲಿ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಮಂಗಳವಾರ ಬಿಡುಗಡೆಗೊಳಿಸಿದರು.ನಂತರ ಮಾತನಾಡಿದ ಸ್ವಾಮೀಜಿ ಅವರು, ಹಿರೇ ಬಸದಿಯು ಅತ್ಯಂತ ಪ್ರಾಚೀನ ಬಸದಿಯಾಗಿದೆ. 24 ತೀರ್ಥಂಕರರ ಲೆಪ್ಪದ ಮೂರ್ತಿಗಳನ್ನು
ಪುತ್ತೂರು: ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38 ವ.) ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭಾನುವಾರ ಪುತ್ತೂರಿನಲ್ಲಿ ನಡೆದ ಮರಾಟಿ ಸಂಘದ ವಾರ್ಷಿಕ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಾರ್ಪಾಡಿ ಗ್ರಾಮದ ಕಲ್ಲಬೆಟ್ಟು ನಿವಾಸಿ ಸತೀಶ್ ಪೂಜಾರಿ ಅವರಿಗೆ ಡಯಾಲಿಸಿಸ್ ನ ವೆಚ್ಚಕ್ಕಾಗಿ ಸಾಯಿ ಮಾರ್ನಾಡ್ ಸೇವಾ ಸಂಘ(ರಿ) ರೂ.10,000 ಸಹಾಯಧನವನ್ನು ನೀಡಿ ಸ್ಪಂದಿಸಿದೆ. ಸತೀಶ್ ಅವರ ಎರಡೂ ಕಿಡ್ನಿಗಳು ವೈಫಲ್ಯ ಹೊಂದಿದ್ದು ವಾರಕ್ಕೊಮ್ಮೆ ಡಯಾಲಿಸಿಸ್ ಮಾಡಬೇಕಾಗಿದ್ದು ಒಮ್ಮೆಗೆ ಚಿಕಿತ್ಸೆಗೆ 3ರಿಂದ 4 ಸಾವಿರದಷ್ಟು ವೆಚ್ಚವಾಗುತ್ತದೆ. ತೀರ ಬಡತನದಲ್ಲಿರುವ ಈ ಕುಟುಂಬಕ್ಕೆ ಚಿಕಿತ್ಸೆಯ
ಮೂಡುಬಿದಿರೆ: ಕಳೆದ 25 ವರ್ಷಗಳಿಂದ ರೋಟರಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯಲ್ಲಿ ಕಾವಲುಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನೇಪಾಳ ಮೂಲದ, ಹುಡ್ಕೋ ನಿವಾಸಿ ಪ್ರೇಮ್ ಬಹದ್ದೂರ್ (65) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿಯೇ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಬಹದ್ದೂರು ಅವರಿಗೆ ಪತ್ನಿ, ಓರ್ವ ಪುತ್ರ
ಅರ್ಜುನ ಪ್ರಶಸ್ತಿ ಪುರಸ್ಕೃತರಾಗಿದ್ದ ಪಂಜಾಬಿನ ಡಿಎಸ್‌ಪಿ- ಉಪ ಪೊಲೀಸ್ ವರಿಷ್ಠಾಧಿಕಾರಿ ದಲ್ಬೀರ್ ಸಿಂಗ್ ಡಿಯೋಲ್ ಅವರು ಜಲಂಧರಿನಲ್ಲಿ ಮರ್ಮಮಯ ರೀತಿಯಲ್ಲಿ ಸಾವನ್ನಪ್ಪಿರುವುದು ಸೋಮವಾರ ಬೆಳಕಿಗೆ ಬಂದಿದೆ. ಹೊಸ ವರುಷದ ದಿನವೇ ಈ ದುರಂತ ಬೆಳಕಿಗೆ ಬಂದಿದೆ. ರಾತ್ರಿ ಹೊಸ ವರುಷಾಚರಣೆ ಸಂಬಂಧ ದಲ್ಬೀರ್ ಸಿಂಗ್ ಹೋದವರು ಮನೆಗೆ ವಾಪಾಸು ಆಗಿಲ್ಲ. ಹಾಗಾಗಿ ಇಂದು ಮನೆಯವರು ನಾಪತ್ತೆ ದೂರು ದಾಖಲಿಸಿದ್ದರು. ಪೋಲೀಸರು ಹುಡುಕಾಟ ನಡೆಸಿದಾಗ ಜಲಂಧರ್ ಹೊರ ವಲಯದ ಬಸ್ತಿ




























