ಉಳ್ಳಾಲ: ಸಿಟಿ ಬಸ್ ಚಾಲಕ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಕೊಂಡಾಣ ಬೆಳರಿಂಗೆ ನಿವಾಸಿ ವೆಂಕಪ್ಪ ಶೆಟ್ಟಿ ಎಂಬವರ ಪುತ್ರ ಜಗದೀಶ್ (39) ಮೃತರು. ಸ್ಟೇಟ್ ಬ್ಯಾಂಕ್ ಕಿನ್ಯಾ ನಡುವೆ ಚಲಿಸುವ ಮಹೇಶ್ 43 ನಂಬರಿನ ಸಿಟಿ ಬಸ್‌ನಲ್ಲಿ ಚಾಲಕರಾಗಿದ್ದ ಇವರು, ಇಂದು ನಸುಕಿನ ಜಾವ ಸೋಮೇಶ್ವರ
ಮಂಗಳೂರು: ತುಳುನಾಡು ಸತ್ಯ, ಧರ್ಮ, ನ್ಯಾಯ, ನೀತಿಗಳ ನೆಲೆಬೀಡು. ಈ ನಾಡೇ ಆರಾಧನಾಲಯಗಳ ತವರೂರು. ಅದೆಷ್ಟೋ ದೈವಸ್ಥಾನಗಳು, ದೇವಸ್ಥಾನಗಳು, ಮಠ, ಮಂದಿರ, ಗುಡಿ, ಗರಡಿಗಳು, ಮಾಡಗಳು, ಬನಗಳು ತನ್ನ ಕಲೆ ಕಾರ್ಣಿಕ ಮೆರೆಯುತ್ತಾ ತುಳುನಾಡಿನ ಧಾರ್ಮಿಕ ಪರಂಪರೆಗೆ ಕೀರ್ತಿ ತಂದಿದೆ. ಇಂತಹ ಧಾರ್ಮಿಕ ಶ್ರದ್ಧಾಕೇಂದ್ರಗಳ ಪೈಕಿ ತುಳುನಾಡಿನಲ್ಲಿ ಪುರಾಣ ಕಾಲಘಟ್ಟದಲ್ಲಿ ಮತ್ತು ಇತಿಹಾಸದಲ್ಲಿ ವೈಭವದಿಂದ ಮೆರೆದ ಸಾನಿಧ್ಯವೊಂದು ಬಂಟ್ವಾಳ ತಾಲೂಕಿನ ಅಗ್ರಾರ್ ಸಮೀಪ ದ
ನಗರದ ಕಂಕನಾಡಿ ಬಳಿ ಖೋಟಾ ನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಕೇರಳ ಮೂಲದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಂಜೇಶ್ವರದ ಆಬುಪಡ್ಪು ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ. ಆರೋಪಿಯು 500 ರೂ., 200 ರೂ., 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9ಸಾವಿರ ರೂ. ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನೆಲ್ಯಾಡಿ: ಬೆಂಗಳೂರಿಂದ ಮಂಗಳೂರಿಗೆ ಬರುತ್ತಿದ್ದ ಕಾರೊಂದು ನಿಂತಿದ್ದ ಬಸ್‌ನ ಹಿಂಬದಿಗೆ ಗುದ್ದಿದ ಘಟನೆ ಶಿರಾಡಿ ಇಂಡಿಯನ್ ಪೆಟ್ರೋಲ್ ಬಂಕ್ ಹತ್ತಿರ ಸಂಭವಿಸಿದೆ. ಬೆಳಗಿನ ಜಾವವಾದ ಕಾರಣ ಬಸ್ಸು ನಿಂತಿದ್ದು, ಕಾರು ಚಾಲಕನ ಗಮನಕ್ಕೆ ಬಾರದೆ ಇದ್ದುದರಿಂದ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಬೆಂಗಳೂರಿನ ಬನಶಂಕರಿ ಲೇ ಔಟ್‌ನ ಮಹೇಶ್ (28) ,ಅಭಿಷೇಕ್ (30 ), ಮುತ್ತು ರಾಜ್( 30 ), ನವೀನ್ (29) ಎಂದು ಗುರುತಿಸಲಾಗಿದೆ. ಮಹೇಶ್ ಎಂಬುವರಿಗೆ ಕಣ್ಣು ಮತ್ತು ತಲೆಯ
ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ. ಭಾನುವಾರ ರಾತ್ರಿ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ ದೋಣಿಯಲ್ಲಿ ೩ ಜನ ಮೀನುಗಾರರಿದ್ದರು. ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ದೋಣಿಯಲ್ಲಿದ್ದ ಅಬ್ಸುಲ್ ಸತ್ತರ್ ಹಡವಿನಕೋಣೆ, ಶಿರೂರು ಮಿಸ್ಬಾ
ಮಂಗಳೂರು ಮಹಾನಗರ ಪಾಲಿಕೆ, ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಕಾರ್ಯಕ್ರಮ, ಮನವಿ ಪತ್ರ, ಲಾಂಛನ, ಸಮವಸ್ತ್ರ ಬಿಡುಗಡೆ ಕಾರ್ಯಕ್ರಮವು ಬೆಂಗ್ರೆಯ ಫೆರಿ ಪಾಯಿಂಟ್‌ನಲ್ಲಿ ನಡೆಯಿತು. ಮೀನುಗಾರಿಕಾ ಇಲಾಖೆಯ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಬೃಹತ್ ಸ್ವಚ್ಛತಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬೆಂಗ್ರೆ ವಿದ್ಯಾರ್ಥಿ ಸಂಘ ಯುವಕ ಮಂಡಲ ಅಮೃತ ಮಹೋತ್ಸವದ ಲಾಂಛನ ಬಿಡುಗಡೆಗೊಳಿಸಿದರು. ಇದೇ
ವಿಟ್ಲ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಮ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿನಡಿಗೆ ಎಸೆಯಟ್ಟಿದ್ದು, ಸಂಪೂರ್ಣ ಜಖಂಗೊಂಡಿದೆ. ಕಬಕ ಕಡೆಯಿಂದ ಬಿ.ಸಿ ರೋಡ್ ಗೆ ತೆರಳುತ್ತಿದ್ದಾಗ ಎದುರಿನಿದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬಿಟ್ಟು ಬದಿಯ ಕಣಿವೆಗೆ ಜಾರಿ
ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ ನ ಮೂರನೇ ದಿನವಾಗಿರುವ ಶನಿವಾರದಂದು ಭಾರತೀಯ ಚಿತ್ರರಂಗದ ಹಿನ್ನಲೆ ಗಾಯಕಿ, ಮೆಲೋಡಿ ಹಾಡುಗಳ ಮೂಲಕ ಗುರುತಿಸಿಕೊಂಡಿರುವ ಶ್ರೇಯಾ ಘೋಷಾಲ್ ಅವರ ಮೆಲೋಡಿ ಹಾಡುಗಳ “ಭಾವ ಲಹರಿ” ಸಂಗೀತ ಕಾರ್ಯಕ್ರಮವು ಪುತ್ತಿಗೆ ವಿವೇಕಾನಂದ ನಗರದ ಬಯಲು ರಂಗಮಂದಿರದಲ್ಲಿ ಸೇರಿದ ಸಂಗೀತ ರಸಿಕರ ಹೃದಯ ಗೆದ್ದಿತು. “ಐಸಾ ಕ್ಯೂನ್ ಹೋತಾ ಹೈ” ಚಿತ್ರದ ಯಾರಾ ಯಾರಾ ಹಾಡಿನ ಮೂಲಕ ಆರಂಭಿಸಿದ ಶ್ರೇಯಾ
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಚೌತಿಯ ದಿನವಾದ ಶನಿವಾರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ಎಡೆಸ್ನಾನ ಸೇವೆ ನೆರವೇರಿಸಿದರು. ಗೋವು ಸೇವಿಸಿದ ಎಲೆಯ ಮೇಲೆ ಭಕ್ತರು ಉರುಳು ಸೇವೆ ನಡೆಸುವ ಮೂಲಕ ಚಂಪಾಷಷ್ಠಿಯ ಜಾತ್ರೋತ್ಸವದ ಚೌತಿಯ ದಿನದಂದು ಎಡೆಸ್ನಾನ ಹರಕೆ ಸೇವೆ ಸಲ್ಲಿಸಿದರು. ಸುಮಾರು 95ಭಕ್ತರು ಸ್ವಯಂಪ್ರೇರಿತರಾಗಿ ಸೇವೆ ನೆರವೇರಿಸಿದರು.ಇನ್ನು ಪಂಚಮಿ ಮತ್ತು ಷಷ್ಠಿಯಂದು ಭಕ್ತರು ಎಡೆಸ್ನಾನ ಸೇವೆ
ಸುಬ್ರಹ್ಮಣ್ಯ :ಮಹಾತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಕಾರ್ತಿಕ ಶುದ್ಧ ಚೌತಿಯ ದಿನವಾದ ಶನಿವಾರ ಶ್ರೀ ದೇವಳದಲ್ಲಿ ಪಲ್ಲಪೂಜೆ ನೆರವೇರಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಒಳಾಂಗಣದಲ್ಲಿ ಪಲ್ಲಪೂಜೆ ನೆರವೇರಿಸಿದರು.ಅಲ್ಲದೆ ಅಕ್ಷಯ ಪಾತ್ರೆಗೆ ಪೂಜೆ ಸಲ್ಲಿಸಿದರು.ಕುಕ್ಕೆಯಲ್ಲಿ ನಿರಂತರ ಅನ್ನದಾನ ನಡೆಯುವುದು ಪ್ರಧಾನವಾಗಿದ್ದು ಜಾತ್ರಾ ಸಮಯ ವಿಶೇಷ ಬೋಜನ ಪ್ರಸಾದ ವಿತರಣೆಯ ಸಂಕೇತವಾಗಿ ಶ್ರೀ




























