ಆತ ಗ್ರಾಮೀಣ ಭಾಗದ 20ರ ಹರೆಯದ ಯುವಕ. ಕಾಲೇಜು ಮೆಟ್ಟಿಲು ಹತ್ತದೇ, ಕಿರಿ ವಯಸ್ಸಿನಿಂದಲೇ ಸ್ಟಂಟ್‌ನಲ್ಲಿ ಅತೀವ ಹುಮ್ಮಸ್ಸು. ಇಂದು ಅದೇ ಹುಮ್ಮಸ್ಸು ರಾಷ್ಟ್ರದ 25,೦೦೦ ಮಂದಿಯ ಎದುರುಗಡೆ, ೨೮ ಸ್ಪರ್ಧಾಳುಗಳನ್ನು ಸೋಲಿಸಿ ಇಡೀ ಗ್ರಾಮದ ಹೆಸರನ್ನು ಕೀರ್ತಿಪತಾಕೆಗೆ ಏರಿಸಿ ಸಾಧನೆ ಮೆರೆದಿದ್ದಾರೆ. ಪಜೀರು ಗ್ರಾಮದ ನಿವಾಸಿ ನೌಮಾನ್ ಪಜೀರು ಎಂಬವರು ಪ್ರತಿಷ್ಠಿತ
ಉಡುಪಿ: ಕ್ರಿಸ್ತ ಜಯಂತಿ ಹಬ್ಬವು ಶಾಂತಿಯನ್ನು ಸಾರುತ್ತದೆ. ಶಾಂತಿಯ ಸಾಧನವಾಗಲು, ಶಾಂತಿಯ ದೂತರಾಗಲು ನಮ್ಮನ್ನು ಪ್ರೇರೇಪಿಸುತ್ತದೆ. ಕ್ರಿಸ್ತ ಜಯಂತಿಯ ಪ್ರೀತಿಯ ಜ್ಯೋತಿ ನಮ್ಮ ತನುಮನಗಳಲ್ಲಿ ಪ್ರಜ್ವಲಿಸಬೇಕಾದರೆ ನಾವು ಕ್ರಿಸ್ತರಂತೆ ಪ್ರೀತಿ ಸ್ವರೂಪರಾಗಿ ಸೇವಾಮನೋಭಾವದಿಂದ ನಿಸ್ವಾರ್ಥಿಗಳಾಗಬೇಕು ಎಂದು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಅವರು ಶನಿವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ
ಮನುಷ್ಯನ ಮಾನಸಿಕ ಹಾಗೂ ದೈಹಿಕ ಸದೃಡತೆಗೆ ಕ್ರೀಡೆಯು ಸಹಕಾರಿ ಎಂದು ಕಿನ್ನಿಗೋಳಿ ಲಯನ್ಸ್ ಕ್ಲಬ್‌ನ ಅಧ್ಯಕ್ಷೆ ಹಿಲ್ಡಾ ಡಿಸೋಜ ಅವರು ಹೇಳಿದರು. ಅವರು ಐಕಳ ಶಕ್ತಿಕಲ್ಯಾಣಿ ಮೈದಾನದಲ್ಲಿ ಐಕಳ ಕಂಬಲ ಫ್ರೆಂಡ್ಸ್ ವತಿಯಿಂದ ಆಶಕ್ತರಿಗೆ ವೈದ್ಯಕೀಯ ನೆರವಿಗಾಗಿ ಐಕಳ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಐಕಳ ಗ್ರಾಮ ಪಂಚಾಯತ್ ಅಧ್ಯಕ್ಷ ದೀವಾಕರ ಚೌಟ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಈ ವೇಳೆ
ಕಡಬ:ಕಳಾರ ಸಮೀಪ ಡಿ.15 ತಡ ರಾತ್ರಿ ಕಾರು ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಶಾಲಾ ಬಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆಕಾಣಿಯೂರು ಮೂಲದ ಪ್ರಸ್ತುತ ಕಳಾರದಲ್ಲಿ ವಾಸವಿರುವ ಚಂದ್ರಶೇಖರ ಅವರ ಪುತ್ರ ,ಸರಸ್ವತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಬಿಪಿನ್ ಮೃತಪಟ್ಟ ಬಾಲಕ.ತಮ್ಮ ನಿವಾಸಕ್ಕೆ ತಲುಪುವ ಸುಮಾರು ನೂರು ಮೀಟರ್ ಅಂತರದಲ್ಲಿ ಈ ಅಪಘಾತ ನಡೆದಿದೆ.ಈ ಅಪಘಾತದಲ್ಲಿ ಮೃತ ಬಾಲಕನ ತಂದೆ ಚಂದ್ರಶೇಖರ ಮತ್ತು ಪುಟಾಣಿ ತಂಗಿ ಗಾಯದೊಂದಿಗೆ
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಸಂಭ್ರಮದಲ್ಲಿದ್ದು, ಜಾತ್ರಾ ಮಹೋತ್ಸವದಲ್ಲಿ ಬಹುಪಾಲು ರಥಗಳದ್ದೇ ಆಕರ್ಷಣೆ. ಜಾತ್ರೆಗೆ ಮೂಲ ನಿವಾಸಿಗಳಾದ ಮಲೆಕುಡಿಯ ಜನಾಂಗದವರು ರಚಿಸುವ ಆಕರ್ಷಕ ಬೆತ್ತದ ರಥಗಳು ಭೂಷಣವಾಗಿದೆ. ಕಾರ್ತಿಕ ಮಾಸದ ಶುದ್ಧ ಪೌರ್ಣಿಮಿ ದಿನ ಸಹಸ್ರನಾಮಾರ್ಚನೆಯ ಬಳಿಕ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಸಂದರ್ಭ ಎಳೆಯುವ ರಥಗಳಿಗೆ ಗೂಟ ಪೂಜಾ ಮೂಹೂರ್ತವನ್ನು ಕ್ಷೇತ್ರ ಪುರೋಹಿತರು ನೆರವೇರಿಸಿದ್ದರು. ಆನಂತರ
ಕಾನೂನು ಬಾಹಿರವಾಗಿ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರನ್ನು ತಡೆದ ಸಾರ್ವಜನಿಕರು ಚಾಲಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಪಡುಬಿದ್ರಿಯ ಇಕ್ಕಟ್ಟಾದ ಸರ್ವಿಸ್ ರಸ್ತೆಯಲ್ಲಿ ಸಾಲುಗಟ್ಟಿ ಟಿಪ್ಪರ್ ಗಳು ಮಣ್ಣಿಗೆ ಹೊದಿಕೆಯನ್ನೇ ಹಾಕದೆ ಕಾನೂನು ಬಾಹಿರವಾಗಿ ಸಾಗಾಟ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಬಹಳಷ್ಟು ಬಾರಿ ಎಚ್ಚರಿಕೆಯನ್ನು ನೀಡಿದರೂ ಮಾನ್ಯತೆ ನೀಡದೆ ತಮ್ಮ ಚಾಲಿ ಮುಂದುವರಿಸಿದ್ದರಿಂದ ಆಕ್ರೋಶಗೊಂಡ ಸಾರ್ವಜನಿಕರು ಪಡುಬಿದ್ರಿ ಗ್ರಾ.ಪಂ.
ಪಡುಬಿದ್ರಿ ಕಾರ್ಕಳ ರಾಜ್ಯ ಹೆದ್ದಾರಿಯ ನಯಾತ್ ಕಟ್ಟಡದ ಮುಂಭಾಗ ಕದ್ದು ಅಕ್ರಮವಾಗಿ ಸಾಗಿಸುತ್ತಿದ್ದ ಟಿಪ್ಪರ್, ಮರಳು ಸಹಿತ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಆರೋಪಿಗಳಾದ ಮಂತ್ರದೇವತೆ ಹೆಸರಿನ ಟಿಪ್ಪರ್ ಮಾಲಕ ಗುರುಪುರದ ರಾಜೇಶ್ ಹಾಗೂ ಅದರ ಚಾಲಕ ನಂದಿಕೂರು ದೇವಸ್ಥಾನ ಬಳಿಯ ನಿವಾಸಿ ಸರ್ಫ್ರಾಜ್ ಆರೋಪಿಗಳು.ಟಿಪ್ಪರ್ ಮಾಲಿಕನ ಸೂಚನೆಯಂತೆ ವಾಹನದಲ್ಲಿ ಮರಳು ತುಂಬಿಸಿ ಪಡುಬಿದ್ರಿ ಬೀಚ್ ಕಡೆ ಸಾಗಿಸಲು ಹೋಗುತ್ತಿದ್ದ ಟಿಪ್ಪರನ್ನು ಪಡುಬಿದ್ರಿ ಪಿಎಸ್ ಐ
ಮೊಂಟ್ರಾ ಇಲೆಕ್ಟ್ರಿಕ್ ಅಧಿಕೃತ ಡೀಲರ್‌ನ ತನಿಯ ಮೋಟಾರ್ಸ್ ಸೂಪರ್ ಆಟೋ ಶೋರೂಂ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ಶುಭಾರಂಭಗೊಂಡಿತು. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹಾಗೂ ಉತ್ಪಾದನೆ ಹೆಚ್ಚಾಗಿದೆ. ಕಾರು, ಸ್ಕೂಟರ್, ಬೈಕ್ ಹಾಗೂ ತ್ರಿಚಕ್ರ ವಾಹನಗಳ ಎಲೆಕ್ಟ್ರಿಕ್ ರೂಪದಲ್ಲಿ ಬಿಡುಗಡೆಯಾಗಿದೆ. ಅಂತೆಯೇ ಕಾಪು ವ್ಯಾಪ್ತಿಯ ಗ್ರಾಹಕರಿಗೆ ಸಿಹಿ ಸುದ್ದಿ ಎಂಬಂತೆ ಕಾಪುವಿನ ಕೊಪ್ಪಲಂಗಡಿಯ ಸ್ವಸ್ತಿಕ್ ಎನ್‌ಕ್ಲೇವ್‌ನಲ್ಲಿ ತನಿಯ
ಮೂಡುಬಿದಿರೆ: ಜಿಲ್ಲೆಯ ಜನರಿಗೆ ಉತ್ತಮ ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲ ಸೌಕರ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಸಿಪಿಐ(ಎಂ)ವತಿಯಿಂದ ಡಿ. 19ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರಿನಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಚಲೋ ಹೋರಾಟ ನಡೆಯಲಿದೆ ಎಂದು ಸಿಪಿಐ(ಎಂ)ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ ಹೇಳಿದರು. ಅವರು ಮೂಡುಬಿದಿರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಿಕ್ಷಣ ಖಾಸಗೀಕರಣದಿಂದ ಜನಸಾಮಾನ್ಯರ ಮಕ್ಕಳು ಉನ್ನತ ಶಿಕ್ಷಣದಿಂದ
ಮಂಗಳೂರಿನ ಉಜ್ಜೋಡಿಯಲ್ಲಿರುವ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಲಾಸಿಕ್- ಸ್ಮೈಲ್ ಮತ್ತು ಪಿಆರ್‌ಕೆ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಡಿ.17 ರಂದು ನಡೆಯಲಿದೆ. ಈ ಉಚಿತ ಕಣ್ಣಿನ ತಪಾಸಣಾ ಶಿಬಿರವು ಡಿ.17 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ನಡೆಯಲಿದೆ. 18 ವರ್ಷ ಪ್ರಾಯದಿಂದ ಸುಮಾರು 50 ವರ್ಷ ಪ್ರಾಯದವರೆಗಿನವರಿಗೆ ಮಾಡಬಹುದಾದ ಅತ್ಯಾಧುನಿಕ ಲೇಸರ್ ಚಿಕಿತ್ಸೆಯ ಮೂಲಕ ಕನ್ನಡಕ ಮತ್ತು ಕಾಂಟಾಕ್ಟ್




























