ಮೂಡುಬಿದಿರೆ: ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಮೇ.10ರಂದು ನಡೆಯುವ ವಿಧಾನಸಭೆಗೆ ಸಕಲ ಸಿದ್ಧತೆಯನ್ನು ಮಾಡಲಾಗಿದೆ. ಕ್ಷೇತ್ರದಲ್ಲಿ ಒಟ್ಟು 221 ಮತಗಟ್ಟೆಗಳಲ್ಲಿ 103 ಮತಗಟ್ಟೆಗಳಿಗೆ ವೆಬ್‌ಕಾಸ್ಟ್ ಅಳವಡಿಸಲಾಗಿದೆ. ಚುನಾವಣಾ ಸಿಬ್ಬಂದಿಗಳಿಗೆ ಸಹಿತ 62 ವಾಹನಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಹೇಳಿದರು. ಶನಿವಾರ ನಡೆಸಿದ
ಇದು ನಮ್ಮ ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಎಂದು ಜನರ ಬಳಿಕ ಕಾಂಗ್ರೆಸ್ ತೆರಳಿ ಮತಯಾಚನೆ ಮಾಡುತ್ತಿದೆ. ಆಂತಹ ಕಾಂಗ್ರೆಸ್ ನಾಯಕರನ್ನು ತಿರಸ್ಕರಿಸಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿನಲ್ಲಿ ಗುಡುಗಿದ್ದಾರೆ. ಅವರು ಮೂಲ್ಕಿಯ ಕೊಳ್ನಾಡುವಿನಲ್ಲಿ ನಡೆದ ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮ ನಾಯಕ ನಿವೃತ್ತಿಯಾಗುತ್ತಿದ್ದಾನೆ. ಅದಕ್ಕಾಗಿ ವೋಟ್ ಕೊಡಿ ಎಂದು ಕಾಂಗ್ರೆಸ್ ಕೇಳುತ್ತಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮಂಜೇಶ್ವರಂ ರೈಲು ನಿಲ್ದಾಣದಲ್ಲಿ ಹಳಿ ಮೇಲೆ ರೈಲಿಗೆ ಸಿಲುಕಿ 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಟಿಯಾನ್ ಬಗ್ಗೆ ಯಾವುದೇ ಮಾಹಿತಿ ಇದ್ದಲ್ಲಿ ಮಂಜೇಶ್ವರಂ ಪೊಲೀಸ್ ಠಾಣೆ ಅಥವಾ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ಮಂಜೇಶ್ವರಂ ಪೊಲೀಸ್ ಠಾಣೆ ದೂರವಾಣಿ: 9497 928800 SHO (ಮಂಜೇಶ್ವರಂ): 9497 947263 ದೂರವಾಣಿ : 9497 98 O92
ಮಂಗಳೂರಿನ ಕಾಂಗ್ರೆಸ್ ಮುಖಂಡನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ಮಾಡಿದ್ದಾರೆ. ಇಂದು ಮುಂಜಾನೆ ಕಾಂಗ್ರೆಸ್ ಮುಖಂಡ ವಿವೇಕ್ ರಾಜ್ ಪೂಜಾರಿ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ಬೆಳಗ್ಗೆ ಸುಮಾರು 7 ಗಂಟೆಗೆ ರಾಜ್ಯದ ಬೇರೆ ಬೇರೆ ಕಡೆಯ 14 ಮಂದಿ ಅಧಿಕಾರಿಗಳು ವಿವೇಕ್ ರಾಜ್ ಪೂಜಾರಿಗೆ ಸೇರಿದ ಅತ್ತಾವರ ಮತ್ತು ಮಣ್ಣಗುಡ್ಡೆಯಲ್ಲಿರುವ ಎರಡು ಮನೆಗೆ ಹಾಗೂ ವಿವೇಕನಗರದಲ್ಲಿರುವ ಕಚೇರಿಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ
ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ
ಬೆಳಪುವಿನಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತ್ರತ್ವದಲ್ಲಿ ಗ್ರಾಮೀಣ ಕಾಂಗ್ರೆಸ್ ಕಛೇರಿಯ ಉದ್ಘಾಟನೆಯನ್ನು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣಾ ಪೂರ್ವ ಬಾವಿಯಾಗಿ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಪಲಿಮಾರು, ಮುದರಂಗಡಿ, ಬೆಳಪು, ಕುತ್ಯಾರು, ಎಲ್ಲೂರು, ಶಿರ್ವ ಹಾಗೂ ಮೂಡಬೆಳ್ಳೆಗಳಲ್ಲಿ ಕಛೇರಿಯನ್ನು ಉದ್ಘಾಟಿಸಲಾಗಿದ್ದು, ಮುಂದಿನ 18ನೇ ತಾರೀಖು ಹತ್ತು ಗಂಟೆಗೆ ಕಾಪು ಜನಾರ್ದನ
ನವ ಮಂಗಳೂರು ಬಂದರಿನಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕಂಟೇನರ್ ಟರ್ಮಿನಲ್‍ಗೆ ಕಂಟೇನರ್‍ಗಳನ್ನು ಹೊತ್ತ ಹಡಗು `ಎಂವಿ ಹಾಂಗ್ ಎಎನ್’ ಶುಕ್ರವಾರ ಆಗಮಿಸಿದೆ.ಚಿತ್ತಗಾಂಗ್ – ಕೊಲಂಬೊ – ಮಂಗಳೂರು – ನವಾ ಶೇವಾ – ಮುಂದ್ರಾ ಮಾರ್ಗವಾಗಿ ಪೂರ್ವಕ್ಕೆ ಜೆಬೆಲ್ ಅಲಿ- ಖಲೀಫಾ ಬಂದರು ಮಾರ್ಗದಲ್ಲಿ ಈ ಹಡಗು ಸಂಚರಿಸುತ್ತಿದೆ. ಭಾರತದ ರಫ್ತುದಾರ ಜೆಬೆಲ್ ಅಲಿ, ಅಬುಧಾಬಿ ಗೆ ನೇರ ಸೇವೆಯನ್ನು ಒದಗಿಸಲಿದೆ. ಅಮೆರಿಕ
ಪಡುಬಿದ್ರಿ ರೋಟರಿ ಕ್ಲಬ್ ವತಿಯಿಂದ ನಡೆದ ಡಾ! ಬಿ ಅರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವು ಓಂಕಾರ್ ಕಲಾ ಸಂಗಮದಲ್ಲಿ ನಡೆಯಿತು.ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತೆ ಶಿಕ್ಷಕಿ ವಂದನಾ ರೈ ಅವರು ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಹಾರಾರ್ಪಣಿ ಮಾಡುವ ಮೂಲಕ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ದಲಿತ ಚಿಂತಕ, ಸಮಾಜಿಕ ಹೋರಾಟಗಾರ ಶೇಖರ್ ಹೆಜಮಾಡಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ , ಮಾತನಾಡಿ ಅಂಬೇಡ್ಕರ್ ರವರ ಆದರ್ಶ ವನ್ನು
ಮಂಗಳೂರು: ಮೋವಿನ್ ಫಿಲಂಸ್ ಲಾಂಛನದಲ್ಲಿ ತಯಾರಾದ “ಗೌಜಿಗಮ್ಮತ್” ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನ ಬಿಗ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ಖ್ಯಾತ ರಂಗಕರ್ಮಿ, ಚಲನ ಚಿತ್ರ ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಅವರು, “ನಿರ್ಮಾಪಕರಾದ ಮೋಹನ್ ಭಟ್ಕಳ್ ಹಾಗೂ ವಿನಾಯಕ ತೀರ್ಥಹಳ್ಳಿ ಅವರ ಶ್ರಮ ಗೌಜಿ ಗಮ್ಮತ್ ಸಿನಿಮಾ ಯಶಸ್ಸು ಕಾಣುವ ಮೂಲಕ ಇನ್ನಷ್ಟು ಮಂದಿಗೆ




























