Home Posts tagged #mangalore (Page 237)

ಮಡಪ್ಪಾಡಿ,ಕೊಂಬಾರು ಶಾಲಾ ಮಕ್ಕಳಿಗೆ ವಿತರಿಸಲು ಪುಸ್ತಕ ಹಸ್ತಾಂತರ 

ಮಂಗಳೂರು: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಿದ ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ ಮತ್ತು ಕಡಬ ತಾಲೂಕಿನ ಕೊಂಬಾರು ಸರಕಾರಿ ಶಾಲೆಯ ಮಕ್ಕಳಿಗೆ ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆ ತನ್ನ ಸಿಎಸ್‍ಆರ್ ಯೋಜನೆಯಡಿ ನೋಟ್ ಪುಸ್ತಕಗಳನ್ನು ಒದಗಿಸಲಾಗಿದೆ. ಶಾಲಾ ಮಕ್ಕಳಿಗೆ ವಿತರಿಸಲು ನೋಟ್ ಪುಸ್ತಕಗಳನ್ನು ಮಂಗಳೂರು

ಪತ್ರಕರ್ತರ ನಗರ ವಾಸ್ತವ್ಯಕ್ಕೆ ಪಾಲಿಕೆಯಿಂದ ಸಹಕಾರ: ಅಕ್ಷಿ ಶ್ರೀಧರ್

ಮಂಗಳೂರು:  ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರು ನಡೆಸುತ್ತಿರುವ ಗ್ರಾಮ ವಾಸ್ತವ್ಯ ಮಾದರಿ ಕಾರ್ಯಕ್ರಮ. ಇದು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿದ್ದು, ಪತ್ರಕರ್ತರು ನಗರದಲ್ಲಿ ವಾಸ್ತವ್ಯ ಕಾರ್ಯಕ್ರಮ ಮಾಡುವುದಾದರೆ ಪಾಲಿಕೆ ವತಿಯಿಂದ ಸಹಕಾರ ನೀಡುವುದಾಗಿ ಪಾಲಿಕೆ ಆಯುಕ್ತ ಅಕ್ಷಿ ಶ್ರೀಧರ್ ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಗ್ರಾಮ ವಾಸ್ತವ್ಯ ಮಾಡಲಾದ ಕಡಬ ತಾಲೂಕಿನ ಕೊಂಬಾರು, ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಶಾಲೆಯ

ಮಂಗಳೂರಿನಲ್ಲಿ ಕಾರುಣ್ಯ ಸಮಾವೇಶ

ಪ್ರವಾದಿ ಜನ್ಮ ಮಾಸಾಚರಣೆಯ ಭಾಗವಾಗಿ ಆರ್ಥಿಕವಾಗಿ ಬಹಳ ಸಂಕಷ್ಟದಲ್ಲಿರುವ ಈ ಭಾಗದ ಆಯ್ದ ಸಾವಿರ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳನ್ನು ಒದಗಿಸುವ ಸಲುವಾಗಿ ಸಂಸ್ಥೆಯು ಕರುಣೆಯ ಕೈ ಎಂಬ ವಿಶಿಷ್ಠ ಯೋಜನೆಯನ್ನು ಕೈಗೆತ್ತಿಗೊಂಡಿದ್ದು, ಇದರ ಪ್ರಚಾರಾರ್ಥ ಅ.26 ರಂದು ಕಾರುಣ್ಯ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಾವೇರಿಯ ಮುಈನುಸ್ಸುನ್ನ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಕೆಎಂ ಮುಸ್ತಫಾ ಹೇಳಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ

ಮಾಸಿಕ ವೇತನ ಪಾವತಿ ವಿಳಂಬ : ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರಿಂದ ಧರಣಿ

ಪುತ್ತೂರು: ಮಾಸಿಕ ವೇತನ ಪಾವತಿ ವಿಳಂಬ ಮತ್ತು ನಿವೃತ್ತ ನೌಕರರ ನಿವೃತ್ತಿ ಸೌಲಭ್ಯ ಬಿಡುಗಡೆ ವಿಳಂಬವನ್ನು ನಡೆಸುತ್ತಿರುವ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯ ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಪುತ್ತೂರು ವಿಭಾಗ ಕೆಎಸ್‌ಆರ್‌ಟಿಸಿ ಮಜ್ದೂರ್ ಸಂಘದ ಸದಸ್ಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಶುಕ್ರವಾರ ಎರಡನೇ ದಿನ ತಲುಪಿತು. ಸಂಘದ ಪುತ್ತೂರು ಘಟಕದ ಅಧ್ಯಕ್ಷ ಮಾಡಾವು ವಿಶ್ವನಾಥ್ ರೈ, ಹುತಾತ್ಮ ಸೈನಿಕರ ಸ್ಮಾರಕಕ್ಕೆ ಹೂಮಾಲೆ ಅರ್ಪಿಸಿ ಧರಣಿಯನ್ನು

ಕುಂದಾಪುರ: ತಲವಾರಿನಿಂದ ಹಲ್ಲೆ: ಗಾಯಾಳು ಯುವಕರು ಆಸ್ಪತ್ರೆಗೆ ದಾಖಲು

ಕುಂದಾಪುರ: ಬಾರ್ ಮ್ಯಾನೇಜರೋರ್ವರಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಜರಿಗಾಗಿ ಸ್ಥಳಕ್ಕೆ ತೆರಳಿದ್ದ ವೇಳೆ ಆರೋಪಿಗಳ ತಂಡ ಏಕಾಏಕಿಯಾಗಿ ತಲವಾರು ದಾಳಿ ನಡೆಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ.ತಲವಾರು ದಾಳಿಗೊಳಗೊಳಗಾದ ಕಾಲ್ತೋಡು ನಿವಾಸಿ ರವಿ ಶೆಟ್ಟಿ ಹಾಗೂ ಪ್ರಶಾಂತ್ ಶೆಟ್ಟಿ ಇದೀಗ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಶಿರೂರು ಗ್ರಾಮದ

ನಕ್ಸಲ್ ಸಂಬಂಧ ಆರೋಪ ಪ್ರಕರಣ: ವಿಠಲ ಮಲೆಕುಡಿಯ, ಲಿಂಗಣ್ಣ ಮಲೆಕುಡಿಯ ನಿರ್ದೋಷಿ

ವಿಠ್ಠಲ ಮಲೆಕುಡಿಯ ಮತ್ತು ಅವರ ತಂದೆಯವರ ಮೇಲೆ ನಕ್ಸಲೀಯರೆಂದು ಹೂಡಲಾಗಿದ್ದ ಮೊಕದ್ದಮೆಯಲ್ಲಿ ಅವರು ನಿರ್ದೋಷಿಗಳೆಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವು ಇಂದು ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿರುವ ಡಿವೈಎಫ್‌ಐ ಕರ್ನಾಟಕ ರಾಜ್ಯ ಸಮಿತಿ ”ಇದು ನ್ಯಾಯಯುತ ಹೋರಾಟಕ್ಕೆ, ಸತ್ಯಕ್ಕೆ ಸಂದ ಜಯ. ಈ ತೀರ್ಪು ಆಳುವ ಸರ್ಕಾರ ಮತ್ತು ಸ್ಥಾಪಿತ ಹಿತಾಸಕ್ತಿಗಳ ಕುತಂತ್ರವನ್ನು ಬಯಲಿಗೆಳೆದಿದೆ” ಎಂದು ತಿಳಿಸಿದೆ. ಹಾಗೂ ಸಂತ್ರಸ್ತರಾಗಿ

ಹದಗೆಟ್ಟ ಕಾನ-ಕುಳಾಯಿ ರೈಲ್ವೆ ಸೇತುವೆ ದುರಸ್ತಿಗೆ ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್‌ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಜನಪ್ರತಿನಿದಿನಗಳ ಮತ್ತು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ

ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ಬಗೆಗೆ ಕಾರ್ಯಾಗಾರ

ಪರಿಸರಸ್ನೇಹಿ ಮತ್ತು ರೈತಸ್ನೇಹಿ ಸಂಸ್ಥೆ ಮೀರಾ ಕ್ಲೀನ್ ಪ್ಯೂಯಲ್ ಲಿಮಿಡೆಟ್ ( ಎಂ.ಸಿ.ಎಲ್) ಘಟಕವನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪರಿಚಯಿಸುವ ಉದ್ದೇಶದಿಂದ ಸ್ವರ್ಣಮಂದಿರದಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮೂಡುಬಿದಿರೆ ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರು ಕಾರ್ಯಾಗಾರವನ್ನು ಉದ್ಘಾಟಿಸಿ, ಪ್ರಕೃತಿ ವಿರುದ್ಧವಾಗಿ ಬದುಕುದನ್ನು ನಾವು ನಿಲ್ಲಿಸಬೇಕು. ಪ್ರಕೃತಿಯನ್ನು ಆರಾಧಿಸುವ ಜೊತೆಗೆ

ವ್ಯಕ್ತಿ ಕಾನೂನಿನ ಬಗ್ಗೆ ಸಾಮಾನ್ಯ ತಿಳುವಳಿಕೆ ಹೊಂದಿರಬೇಕು: ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಜಿ ತಿಮ್ಮಾಪುರ ಹೇಳಿಕೆ

ಬಂಟ್ವಾಳ: ಕಾನೂನಿನ ಅರಿವಿಲ್ಲದೆ ಮಾಡಿದ ತಪ್ಪುಗಳಿಗೆ ಶಿಕ್ಷೆಯಿಂದ ವಿನಾಯಿತಿ ಇರುವುದಿಲ್ಲ. ಆದ್ದರಿಂದ ಪ್ರತಿಯೊಬ್ಬ ವ್ಯಕ್ತಿಯೂ ಕಾನೂನಿನ ಬಗ್ಗೆ ಸಾಮಾನ್ಯ ತಿಳುವಳಿಕೆಯನ್ನು ಹೊಂದಿರಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಜಿ ತಿಮ್ಮಾಪುರ ಹೇಳಿದರು. ಅವರು ತುಂಬೆ ಗ್ರಾಮ ಪಂಚಾಯತಿ, ತಾಲೂಕು ಕಾನೂನುಗಳ ಸೇವಾ ಸಮಿತಿ ಬಂಟ್ವಾಳ, ಶಿಶು ಅಭಿವೃದ್ಧಿ ಯೋಜನೆ ಬಂಟ್ವಾಳ ಇದರ ಸಂಯುಕ್ತ ಆಶ್ರಯದಲ್ಲಿ ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ತುಂಬೆ ಗ್ರಾಮ

ಪ್ಯಾಸೆಂಜರ್ ರೈಲುಗಳನ್ನು ಪುನಃರಾರಂಭಿಸಬೇಕು : ಎಐಟಿಯುಸಿ ಮಂಜೇಶ್ವರ ಮಂಡಲ ಸಮಿತಿಯಿಂದ ಪ್ರತಿಭಟನೆ

ಮಂಜೇಶ್ವರ: ಕೇಂದ್ರ ಸರಕಾರವು ರೈಲ್ವೆ ಇಲಾಖೆಯನ್ನು ಖಾಸಗಿಕರಣಗೊಳಿಸುವುದನ್ನು ನಿಲ್ಲಿಸಿ, ಪ್ಯಾಸಂಜರ್ ರೈಲುಗಳನ್ನು ಪುನಃರಾರಂಬಿಸಬೇಕು. ಹೆಚ್ಚಿಸಿದ ರೈಲ್ವೆ ಪ್ಲಾಟ್ ಫಾರ್ಮ್ ಶುಲ್ಕ ರದ್ದುಗೊಳಿಸಬೇಕು, ಸೀಸನ್ ಟಿಕೆಟ್ ಮತ್ತು ಯಾತ್ರಾ ಸೌಲಭ್ಯಗಳನ್ನು ಪುನಃ ಸ್ಥಾಪಿಸಬೇಕು ಮೊದಲಾದ ಬೇಡಿಕೆಗಳನ್ನು ಒತ್ತಾಯಿಸಿ ಎಐಟಿಯುಸಿ ಮಂಜೇಶ್ವರ ಮಂಡಲ ಸಮಿತಿ ವತಿಯಿಂದ ಮಂಜೇಶ್ವರ ರೈಲ್ವೆ ಸ್ಟೇಷನ್‌ಗೆ ಮಾರ್ಚ್ ಮತ್ತು ಧರಣಿ ನಡೆಯಿತು. ಎಐಟಿಯುಸಿ ಜಿಲ್ಲಾ ಕೋಶಾಧಿಕಾರಿ ಬಿ.ವಿ