Home Posts tagged #mangalore (Page 238)

ಉಳ್ಳಾಲ: ಪೊಲೀಸರಿಗೆ ತಲವಾರು ತೋರಿಸಿದ ರೌಡಿಶೀಟರ್

ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ

ಪಿಎಂ ಕೇರ್ಸ್ ಯೋಜನೆ ಪಾರದರ್ಶಕತೆ ಹೊಂದಿರಲಿಲ್ಲ: ಕಾಂಗ್ರೆಸ್ ಮುಖಂಡ ವೀರಪ್ಪ ಮೊಯ್ಲಿ

ಕಾರ್ಕಳ: ಕೋವಿಡ್ ಸಂದರ್ಭ ದೇಣಿಗೆ ಸಂಗ್ರಹಕ್ಕೆ ಬಳಸಿದ ವೇದಿಕೆ ಪಿಎಂ ಕೆರ್ಸ್ ಯೋಜನೆಯು ಪಾರದರ್ಶಕತೆಯನ್ನು ಹೊಂದಿರಲಿಲ್ಲ. ಹಣ ಸಂಗ್ರಹ ಹಾಗೂ ಖರ್ಚುಗಳ ಲೆಕ್ಕ ವಿ ಡದ ಈ ನಿಧಿಯ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಪ್ರತಿಬಿಂಬಿಸುತ್ತದೆ. ಕೇಂದ್ರದ ಮಾಜಿ ಸಚಿವ ಮಾಜಿ ಮುಖ್ಯಮಂತ್ರಿ ಯಂ. ವೀರಪ್ಪ ಮೊಯ್ಲಿ ಟೀಕಿಸಿದರು   ಕಾರ್ಕಳ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆಡಳಿತದಲ್ಲಿರುವ ಸರಕಾರಗಳಿಗೆ

ಐವನ್ ಡಿಸೋಜಾ ನಿವಾಸಕ್ಕೆ ಬಜರಂಗದಳದಿಂದ ಮುತ್ತಿಗೆಗೆ ಯತ್ನ

ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾ ಅವರ ನಗರದ ವೆಲೆನ್ಸಿಯಾದಲ್ಲಿರುವ ಮನೆಗೆ ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಮನೆಗೆ ನುಗ್ಗಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಸರಿ ಬಣ್ಣ ಮತ್ತು ಕೇಸರಿ ಶಾಲಿನ ಬಗ್ಗೆ ಐವನ್ ಡಿಸೋಜ ಅವಹೇಳನಕಾರಿಯಾಗಿ ಮಾತಾಡಿದ್ದಾರೆ ಎಂದು ಬಜರಂಗದಳ ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿವಿ ಮಾಧ್ಯಮದ ಚರ್ಚೆಯ ಸಂದರ್ಭದಲ್ಲಿ ಐವಾನ್ ಡಿಸೋಜ, ಕೇಸರಿ ಶಾಲು ಹಾಕಿದವರು

ಪ್ರಾಮಾಣಿಕತೆ ಮೆರೆದ ಆಟೋ ರಿಕ್ಷಾ ಚಾಲಕ

ರಸ್ತೆ ಬದಿಯಲ್ಲಿ ಸಿಕ್ಕಿದ್ದ ಪರ್ಸ್‌ನ್ನು ಪೊಲೀಸರಿಗೆ ಒಪ್ಪಿಸಿ, ತನ್ಮೂಲಕ ಸೊತ್ತಿನ ಮಾಲಕರಿಗೆ ತಲುಪಿಸಿ ಇಲ್ಲಿನ ರಿಕ್ಷಾ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಇಂತಹ ಪ್ರಾಮಾಣಿಕತೆಗೆ ಮಂಗಳೂರು ಮತ್ತೊಮ್ಮೆ ಸಾಕ್ಷಿಯಾಗಿದೆ. ಆಟೊರಿಕ್ಷಾ ಚಾಲಕ ಮುಹಮ್ಮದ್ ಹನೀಫ್ ಎಂಬವರೇ ಪರ್ಸ್‌ನ್ನು ಮರಳಿಸಿದವರು ಮುಹಮ್ಮದ್ ಹನೀಫ್ ಸುಮಾರು 15 ವರ್ಷಗಳಿಂದ ನಗರದಲ್ಲಿ ಆಟೊ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಂದಿನಂತೆ ತನ್ನ ಕಾಯಕದಲ್ಲಿ ನಿರತನಾಗಿದ್ದ ಹನೀಫ್, ಶುಕ್ರವಾರ

ದಸರಾ ಪಾರ್ಟಿ ಮಾಡುವಾಗ ಯುವಕರ ನಡುವೆ ಕಲಹ

ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೈಸನ್, ಕಾರ್ತಿಕ್, ಧನುಷ್, ದುರ್ಗೇಶ್ ಮತ್ತು ಪ್ರಜ್ವಲ್

ಮಂಗಳೂರು ದಸರಾ ಮಹೋತ್ಸವ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು

ಸುರತ್ಕಲ್‌ ನಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಅಧಿಕೃತ ಕಚೇರಿ ಶುಭಾರಂಭ

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರ ದ್ವಿತೀಯ ಅಧಿಕೃತ ಕಚೇರಿ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಕಾಳಪ್ಪ ಗೌಡ ಉದ್ಘಾಟಿಸಿದರು. ಈ ಸಂದರ್ಭ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ಡಾ. ಭರತ್ ಶೆಟ್ಟಿ ಅವರು ಕಳೆದ ನಾಲ್ಕು

ಪತ್ರಕರ್ತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಿಎಂ ಗೆ ಮನವಿ

ಮಂಗಳೂರು: ಕೋರೋನಾ ಸೋಂಕಿನಿಂದ ಮೃತಪಟ್ಟ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು.‌ ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಪ್ರೆಸ್

ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣ ಪತ್ರದಲ್ಲಿ ಎಡವಟ್ಟು, ಸೂಕ್ತ ತುರ್ತು ಕ್ರಮಕ್ಕಾಗಿ ಮನವಿ

ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪದವಿ/ಸ್ನಾತಕೋತ್ತರ ಪದವಿಯ ಖಾಸಗಿ ಕೋಟಾದ ಸೀಟುಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು‌ ತಾಲೂಕು ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ (ಅನುಬಂಧ 4ಎ) ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣಪತ್ರ ಪಡೆದು, ಆನ್‍ಲೈನ್ ಕೌನ್ಸಿಲಿಂಗ್’ನ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಹಾಜರು ಪಡಿಸಬೇಕೆಂಬುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮ. ಆದರೆ, ನಿಗದಿತ ನಮೂನೆ (ಅನುಬಂಧ 4ಎ)ಯಲ್ಲಿ ಧಾರ್ಮಿಕ

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು

ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ.