Home Posts tagged #mangalore (Page 245)

ಮಂಗಳೂರಿನಲ್ಲಿ ವಿಶ್ವಹಿಂದು ಪರಿಷತ್, ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿ ಲೈಂಗಿಕ ಹಲ್ಲೆ ನಡೆಸಿದ್ದ ಆರೋಪಿಗಳನ್ನು ಬಂಧಿಸಿದ್ದು ಉಳಿದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಅವರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕು ಹಾಗೂ ಮಹಿಳೆಯರಿಗೆ ರಕ್ಷಣೆಯನ್ನು ನೀಡಬೇಕೆಂದು ಸರಕಾರವನ್ನು ಒತ್ತಾಯಿಸಿ ದುರ್ಗಾವಾಹಿನಿ ವತಿಯಿಂದ ಪ್ರತಿಭಟನೆ ನಡೆಸಿದರು.

ದ.ಕ. ಜಿಲ್ಲಾಡಳಿತ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶ್ರೀಕೃಷ್ಣ ಜಯಂತಿಯನ್ನು ಆಚರಿಸಲಾಯ್ತು.ಇನ್ನು ಕಾರ್ಯಕ್ರಮ ವನ್ನ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. ತದ ಬಳಿಕ ಮಾತನಾಡಿದ ಅವರು, ಈ ಬಾರಿ ಕೋವಿಡ್ ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ನಡೆಯಲಿ, ದೇವರ ಅನುಗ್ರಹದಿಂದ

ಮಂಗಳೂರಿನಲ್ಲಿ ಅನಧಿಕೃತ ಗೂಡಂಗಡಿಗಳ ತೆರವು

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆಯಿತು.   ನಗರದ ಕೆಪಿಟಿಯಿಂದ ಮೇರಿಹಿಲ್ ತನಕ ಮನಪಾ ಅಧಿಕಾರಿಗಳು ಅನಧಿಕೃತ ಗೂಡಂಗಡಿಗಳ ತೆರವು ಕಾರ್ಯಾಚರಣೆಗೆ ಇಳಿದಿದ್ದಾರೆ.ರಸ್ತೆಯ ಬದಿಯಲ್ಲಿದ್ದಂತಹ ಅನಧಿಕೃತ ಗೂಡಂಗಡಿಗಳನ್ನು ತೆರವು ಮಾಡಲಾಯಿತು.  

ಸಾಮೂಹಿಕ ಅತ್ಯಾಚಾರ ಪ್ರಕರಣ : ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಆತ್ಯಚಾರವೆಸಗಿದವರನ್ನು ಶೀಘ್ರದಲ್ಲಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ನಾಯಕಿ ಶಾಲೆಟ್ ಪಿಂಟೋ ಅವರು, ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ತೀವ್ರ ಖಂಡನೀಯ. ಕೂಡಲೇ

ಬಾಕಿ ಪ್ರಕರಣಗಳ ವಿಚಾರಣೆ ಶೀಘ್ರದಲ್ಲೇ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ

ಮಂಗಳೂರು: ಬಾಲನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ವಿಚಾರಣೆಯನ್ನು ಶೀಘ್ರದಲ್ಲೇ ಇತ್ಯರ್ಥಪಡಿಸುವಂತೆ ಮಕ್ಕಳ ರಕ್ಷಣಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸಭೆ ಹಾಗೂ ಚೈಲ್ಡ್‍ಲೈನ್ ಸಲಹಾ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ 2 ಬಾಲನ್ಯಾಯಮಂಡಳಿಯಲ್ಲಿ ಬಾಕಿ ಇರುವ ಒಟ್ಟು 165

ಬೆಳೆ ಸಮೀಕ್ಷೆ ವಿನೂತನ ಕೃಷಿ ಆ್ಯಪ್ ಬಿಡುಗಡೆಗೊಳಿಸಿದ ಡಾ.ಭರತ್ ಶೆಟ್ಟಿ ವೈ

ಸುರತ್ಕಲ್: ರೈತರಿಗೆ ಮಾಹಿತಿ ನೀಡುವ ಸಲುವಾಗಿ, ಬೆಳೆ ಸಮೀಕ್ಷೆ, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಹೊಸ ತಂತ್ರಜ್ಞಾನ ಬಳಸಿ ಕೃಷಿ ಆಪ್ ಹೊರ ತಂದಿದ್ದು ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಆಗಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದರು. ಅವರು ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ಆಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ತಾನು ಬೆಳೆಯುವ ಬೆಳೆಯ

ವ್ಯಕ್ತಿಯೋರ್ವನಿಂದ ಮಂಗಳೂರಿನ ಹೊಟೇಲ್ ಗಳಿಗೆ ಪಂಗನಾಮ: ಬಂಧನ

ವ್ಯಕ್ತಿಯೊಬ್ಬ ನಗರದ ವಿವಿಧ ಹೊಟೇಲ್ ಗಳಲ್ಲಿ ಉಳಿದುಕೊಂಡು ಮೋಸ ಎಸಗಿರುವ ಆರೋಪಿಯನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ಶ್ರೀನಿವಾಸ್ ಬಂಧಿತ ಆರೋಪಿಯಾಗಿದ್ದಾನೆ. ಈತ ದೆಹಲಿ ಏಮ್ಸ್ ಆಸ್ಪತ್ರೆಯ ಡಾಕ್ಟರ್ ಅಂತ ಹೇಳಿಕೊಂಡು , ಪ್ರೊಫೆಸರ್ ಮತ್ತು ಸರ್ಜನ್ ಆಗಿರುವ ಐಡಿ ತೋರಿಸಿದ್ದ.  ನಗರದ ಸ್ಟೇಟ್ ಬ್ಯಾಂಕ್ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಹೊಟೇಲ್ ಸಿಟಿ ವಾಕ್ ರೆಸಿಡೆನ್ಸಿಯಲ್ಲಿ ರೂಮ್ ಪಡೆದು ಕೊನೆಗೆ ಚೆಕ್ ಔಟ್ ವೇಳೆ, ಹಣ ಕೊಡದೆ ಪರಾರಿಯಾಗಿದ್ದ. ಹೊಟೇಲ್

ಮಂಗಳೂರಿನಲ್ಲಿ ಎನ್.ಐ.ಎ ಕಚೇರಿ ಸ್ಥಾಪಿಸುವ ಬಗ್ಗೆ ಕೇಂದ್ರದ ಜತೆ ಚರ್ಚೆ: ಗೃಹ ಸಚಿವ ಅರಗ ಜ್ಞಾನೇಂದ್ರ

ಕರಾವಳಿಯಲ್ಲಿ ಕೆಲವು ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆ ನಡೆಯುತ್ತಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ಚಟುವಟಿಕೆಗಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕೆಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಎನ್‍ಐಎ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಸರ್ಕಾರ ಜೊತೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಅಪ್ಘಾನಿಸ್ತಾನದಲ್ಲಿ

ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್‌ಗೆ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದಿಂದ ಮನವಿ

ಬಿಐಎಸ್ ಹಾಲ್‌ಮಾರ್ಕ್ ಕಡ್ಡಾಯದ ನಂತರದ ನಿಯಮಗಳಿಂದ ಚಿನ್ನದ ಕುಶಲಕರ್ಮಿಗಳು ಹಾಗೂ ಸಣ್ಣ ವ್ಯಾಪಾರಿಗಳ ಜೀವನದಲ್ಲಿ ಉಂಟಾದ ಸಂಕಷ್ಟವನ್ನು ಮಂಗಳೂರಿನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಕೇಂದ್ರ ಸರಕಾರದ ಸಚಿವರಾಗಿರುವ ಶ್ರೀ ರಾಜೀವ ಚಂದ್ರಶೇಖರ ಅವರಲ್ಲಿ ದ.ಕ. ಚಿನ್ನದ ಕೆಲಸಗಾರರ ಸಂಘ ಹಾಗೂ ದೈವಜ್ಞ ಬ್ರಾಹ್ಮಣರ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಮುಖೇನ ಮನವಿಯನ್ನು ಸಲ್ಲಿಸಲಾಯಿತು.ಸಭೆಯಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಚಿನ್ನಾಭರಣ

ಹಡಗು ಮುಳುಗಡೆಯಾಗಿರುವ ಜಾಗದಲ್ಲಿ ಎಚ್ಚರಿಕೆ ಗುರುತು: ಸಚಿವ ಎಸ್. ಅಂಗಾರ

ಸಮುದ್ರದಲ್ಲಿ ಹಡಗು ಮುಳುಗಡೆಯಾಗಿರುವ ಜಾಗದಲ್ಲಿ ಎಚ್ಚರಿಕೆ ಗುರುತು ಮಾಡುವ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ಕೊಟ್ಟಿದ್ದೇನೆ ಎಂದು ಮೀನುಗಾರಿಕಾ ಸಚಿವ ಎಸ್. ಅಂಗಾರ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗಾರ ಪ್ರಶ್ನೆಯೊಂದಕ್ಕೆ ಉತ್ತರಿಸಿ ಮಾತನಾಡಿದ್ರು, ಸಮುದ್ರದಲ್ಲಿ ಹಡಗು ಮುಳಗಡೆಯಾಗಿರುವ ಜಾಗದಲ್ಲಿ ಯಾವುದೇ ಗುರುತು ಇಲ್ಲದ ಕಾರಣ ಮತ್ತೆ ಅವಘಾತಯಾಗುತ್ತೆ ಎಂಬ ದೂರು ಬಂದಿದೆ. ಈ ನಿಟ್ಟಿನಲ್ಲಿ ಮುಳುಗಡೆಯಾಗಿರುವ ಜಾಗದಲ್ಲಿ