ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್‍ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ
ವಿಟ್ಲ: ವಿಟ್ಲ ಸಮೀಪದ ಒಕ್ಕೆತ್ತೂರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ, ಕದಳಿ ಮಹಿಳಾ ಸಂಘ ದಕ್ಷಿಣ ಕನ್ನಡ, ವಿಟ್ಲ ಲಯನ್ಸ್ ಕ್ಲಬ್ ಇದರ ಸಹಯೋಗದಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಮಂಗಳೂರು ಇಲ್ಲಿನ ನುರಿತ ವೈದ್ಯರ ತಂಡದಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಒಕ್ಕೆತ್ತೂರು ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೆತ್ತೂರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಮಹಮ್ಮದ್ ಹಾರೀಶ್ ಸಿಎಚ್ ಅವರು
ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು. ದಾನಿ ಕೃಷ್ಣ ಶೆಟ್ಟಿ ಶ್ರೀದ್ವಾರ ಅವರು ನಿರ್ಮಿಸಿದ ಹೆದ್ದಾರಿ ಬದಿಯ ರಾಜಗೋಪುರದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ, ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಚಿತ್ರಾಪುರ
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಭಾನುವಾರ ನಡೆಯಿತು.ಭಾನುವಾರ ಬೆಳಿಗ್ಗೆ 48 ನಾರಿಕೇಳ ಮಹಾಗಣಪತಿ ಹೋಮ ನಡೆಯಿತು. ಮಧ್ಯಾಹ್ನ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಯನ್ನು ವಿಟ್ಲ ಅರಮನೆಯ ಅನುವಂಶಿಕ ಆಡಳಿತದಾರ ಬಂಗಾರು ಅರಸರು ಉದ್ಘಾಟಿಸಿದರು. ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆ ವಿಟ್ಲದಿಂದ ಕುದ್ದುಪದವು-
ಮೂಡುಬಿದಿರೆ: ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ (ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸಂಸ್ಥೆಯ ಮೂಲಕ ಪ್ರವರ್ತಿಸಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ 23ನೇ ವಾರ್ಷಿಕ ಹಾಗೂ ಸ್ವಾವಲಂಬನಾ ದಿನಾಚರಣೆಯು ವಿಜಯನಗರದ ಆದರ್ಶಧಾಮದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇದರ ನಿರ್ದೇಶಕಿ ಭಾರತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಬದುಕಲು ಉತ್ತಮವಾದ ಆರೋಗ್ಯ
ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತ
ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ
ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ಕುಡ್ಲ ಕುದ್ರು ಪ್ಯಾರಡೈಸ್ ಐಲ್ಯಾಂಡ್ ನಲ್ಲಿ ಭಾನುವಾರದಂದು ನಡೆದ ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಖ್ಯಾತ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಅವರು ಕಡಬ ಪ್ರೆಸ್ ಕ್ಲಬ್ ಗೆ ಇಸಿಜಿ ಯಂತ್ರವನ್ನು ಹಸ್ತಾಂತರ ಮಾಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಕಾರ್ಯದರ್ಶಿ ವಿಜಯ ಕುಮಾರ್ ಇಸಿಜಿ ಯಂತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಖ್ಯಾತ ಚಿತ್ರನಟ, ಬಿಗ್ ಬಾಸ್ ವಿನ್ನರ್ ರೂಪೇಶ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ್ದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಎನ್‌ಐಎ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು
ಮೂಡುಬಿದಿರೆ : ಕಡಂದಲೆ ಗ್ರಾಮದ ಸರ್ವೆ ನಂಬ್ರ 308/ಪಿ1ರ 27 ಎಕ್ರೆ ಸರ್ಕಾರಿ ಭೂಮಿಯಲ್ಲಿ 400/220 ಕೆಪಿ ವಿದ್ಯುತ್ ಕೇಂದ್ರವನ್ನು ಸ್ಥಾಪಿಸಲುದ್ದೇಶಿಸಿದ್ದು ಈ ಸ್ಥಳದಲ್ಲಿರುವ 2229 ಮರಗಳನ್ನು ಕಡಿಯುವ ಹಿನ್ನಲೆಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯು ಮೂಡುಬಿದಿರೆ ಅರಣ್ಯ ಇಲಾಖೆಯ ಸಭಾಭವನದಲ್ಲಿ ಶನಿವಾರ ನಡೆಯಿತು.. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಎನ್ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ದೇಶಿತ ಯೋಜನೆಗಾಗಿ ಮರಗಳ ನ್ನು ತೆರವುಗೊಳಿಸಲಿದ್ದು




























