Home Posts tagged #mangalore (Page 276)

ಪತನವಾದ ನೇಪಾಳ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಐವರು ಭಾರತೀಯರು

ಇಂದು ಬೆಳಗ್ಗೆ ನೇಪಾಳದ ಪೋಖರಾದಲ್ಲಿ ಪತನಗೊಂಡ ಯೇತಿ ಏರ್‌ಲೈನ್ಸ್ ವಿಮಾನದಲ್ಲಿ ಕನಿಷ್ಠ ಐವರು ಭಾರತೀಯರು ಪ್ರಯಾಣಿಸುತ್ತಿದ್ದರು ಎಂದು ರಾಷ್ಟ್ರದ ನಾಗರಿಕ ವಿಮಾನಯಾನ ಪ್ರಾಧಿಕಾರ ಟ್ವೀಟ್‌ನಲ್ಲಿ ಖಚಿತಪಡಿಸಿದೆ. 15 ವಿದೇಶಿಯರು ಸೇರಿದಂತೆ 72 ಜನರನ್ನು ಹೊತ್ತೊಯ್ಯುತ್ತಿದ್ದ ನೇಪಾಳದ ಪ್ರಯಾಣಿಕ ವಿಮಾನವು ಪ್ರಮುಖ ಪ್ರವಾಸಿ ತಾಣವಾದ ಪೋಖರಾದ ವಿಮಾನ ನಿಲ್ದಾಣದಲ್ಲಿ

ಎಮ್.ಜಿ. ಹೆಗ್ಡೆ ಅವರು ಬರೆದಿರುವ ಮಿನುಗು ನೋಟ ಪುಸ್ತಕ ಬಿಡುಗಡೆ

ಗಾಂಧಿ ವಿಚಾರ ವೇದಿಕೆ ವತಿಯಿಂದ ಮಿನುಗು ನೋಟ ಎಮ್.ಜಿ. ಹೆಗ್ಡೆಯವರು ಬರೆದಿರುವ ಗಾಂಧೀಜಿಯವರ ಕುರಿತ ಪ್ರಶ್ನೆಗಳಿಗೆ ಉತ್ತರದ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಗರದ ಕದ್ರಿಯಲ್ಲಿರುವ ಲಯನ್ಸ್ ಭವನದಲ್ಲಿ ನಡೆಯಿತು. ಪುಸ್ತಕವನ್ನು ಪ್ರಸಿದ್ಧ ಅಂಕಣಕಾರರಾದ ಸುಧೀಂದ್ರ ಕುಲಕರ್ಣಿ ಅವರು ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಮಾನವತೆಗೆ ಬೇಕಾದ ವಿಚಾರ ಎಂದೂ ಸಾಯುವುದಿಲ್ಲ. ಮಹಾತ್ಮಾ ಗಾಂಧೀಜಿಯವರು ವಿಶ್ವಶಾಂತಿಗಾಗಿ ಇಡೀ ಜಗತ್ತಿನಲ್ಲಿ ಸಹಬಂಧುತ್ವಕ್ಕಾಗಿ,

ಕಾಠ್ಮಂಡು: 72 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನ ಪತನ

ನೇಪಾಳದ ಕಾಠ್ಮಂಡುವಿನಿಂದ ಹೊರಟ ವಿಮಾನವೊಂದು ಪೋಖರಾ ವಿಮಾನ ನಿಲ್ದಾಣದಲ್ಲಿ ಹೊತ್ತಿ ಉರಿದಿದ್ದು, ವಿಮಾನದಲ್ಲಿದ್ದ 45ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಯೇತಿ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನವು ಪೋಖರಾ ಏರ್ ಪೋರ್ಟ್ ನಲ್ಲಿ ಲ್ಯಾಂಡ್ ಆಗುವ ವೇಳೆ ಪತನವಾಗಿದೆ. ಇದುವರೆಗೆ 45 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ವಿಮಾನದಲ್ಲಿ 68 ಪ್ರಯಾಣಿಕರು ಮತ್ತು ನಾಲ್ಕು ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

ಕೋವಿಡ್ ಸಂದರ್ಭದಲ್ಲಿ ರೈತರಿಗೆ ನೆರವಾದ ಯು. ಸೋಮಶೇಖರ್ ಗೆ ಎನ್.ಎಸ್.ಎಸ್ ರಾಷ್ಟ್ರೀಯ ಸ್ವಯಂ ಸೇವಕ ಪುರಸ್ಕಾರ

ಧಾರವಾಡ, ಜ, 14: ಕೋವಿಡ್ ಸಾಂಕ್ರಾಮಿಕ ಲೆಕ್ಕಿಸದೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ, ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸೋಮಶೇಖರ್ ಯು ಅವರಿಗೆ 2019 – 20 ನೇ ಸಾಲಿನ ಎನ್.ಎಸ್.ಎಸ್ ರಾಷ್ಟ್ರೀಯ ಅತ್ಯುತ್ತಮ ಸ್ವಯಂ ಸೇವಕ [ರಾಷ್ಟ್ರೀಯ ಬೆಸ್ಟ್ ವಾಲೇಂಟರ್] ಪ್ರಶಸ್ತಿ ಸಂದಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ನಡೆಯುತ್ತಿರುವ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್

ಯುವ ಜನೋತ್ಸವದಲ್ಲಿ “ನೋ ಯುವರ್ ಆರ್ಮಿ” ವಿಶೇಷ ಮಳಿಗೆ

ಧಾರವಾಡ, ಜ, 13; ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ 26 ನೇ ರಾಷ್ಟ್ರೀಯ ಯುವ ಜನೋತ್ಸವದಲ್ಲಿ “ನಿಮ್ಮ ಸೇನೆ ಬಗ್ಗೆ ತಿಳಿದುಕೊಳ್ಳಿ” [ನೋ ಯುವರ್ ಆರ್ಮಿ] ಎಂಬ ವಿಶೇಷ ಮಳಿಗೆಗಳು ಗಮನ ಸೆಳೆಯಲಿವೆ. ಯುವ ಜನೋತ್ಸವದ ಅಂಗವಾಗಿ ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನದಲ್ಲಿ ‘ಭಾರತೀಯ ಸೈನ್ಯದ ಕುರಿತು ಒಂದು ಸ್ಟಾಲ್ ನಿರ್ಮಿಸಲಾಗಿದೆ’ ರಾಷ್ಟ್ರದ ಭದ್ರತೆ ಮತ್ತು ಸುರಕ್ಷತೆಗಾಗಿ ಈ ಪಡೆಗಳು ಬಳಸುವ

ಯುವ ಜನೋತ್ಸವದಲ್ಲಿ ಮುಂಜಾನೆ ಯೋಗ ಮತ್ತು ಧ್ಯಾನ ಶಿಬಿರ

ಧಾರವಾಡ, ಜ.13; ರಾಷ್ಟ್ರೀಯ ಯುವ ಜನೋತ್ಸವದಲ್ಲಿ ಪ್ರತಿದಿನ ಮುಂಜಾನೆ ಯೋಗ ಮತ್ತು ಧ್ಯಾನ ಕಾರ್ಯಕ್ರಮ ಯುವ ಸಮೂಹದಲ್ಲಿ ನವೋಲ್ಲಾಸ ಮೂಡಿಸುತ್ತಿದೆ. ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯ, ಕೃಷಿ ವಿಶ್ವವಿದ್ಯಾಲಯ, ಕೆ.ಸಿ.ಡಿ ಕಾಲೇಜು ಮೈದಾನದಲ್ಲಿ ಪ್ರತಿದಿನ ಬೆಳಿಗ್ಗೆ 6 ರಿಂದ 8 ಗಂಟೆವರೆಗೆ ಯೋಗ ಮತ್ತು ಧ್ಯಾನ ಶಿಬಿರ ಆಯೋಜಿಸಲಾಗಿದೆ. ಕರ್ನಾಟಕ ರಾಜ್ಯ ಯೋಗ ಸಂಸ್ಥೆಯ ಪರಿಣಿತರು ಯೋಗ ಮತ್ತು ಧ್ಯಾನದ ಮಹತ್ವ ಕುರಿತು ಯುವ ಸಮೂಹಕ್ಕೆ ಮಾರ್ಗದರ್ಶನ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ : ಕೆಪಿಸಿಸಿ ವಕ್ತಾರ ಅಮಲಾ ರಾಮಚಂದ್ರ

ಪುತ್ತೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾಮಗಾರಿಗಳು ಕುಸಿತವಾಗುತ್ತಿದೆ. ಬೆಂಗಳೂರಿನಲ್ಲಿ ಸರ್ಕಾರದ ನಿರ್ಲಕ್ಷ್ಯಕ್ಕೆ ಎರಡು ಜೀವ ಬಲಿಯಾಗಿದೆ. ರಸ್ತೆಯಲ್ಲಿ ಸಂಚರಿಸುವ ಸಮಯ ಎಲ್ಲಿ ಕುಸಿಯುತ್ತದೆ, ಮೇಲ್ಸೇತುವೆ ಎಲ್ಲಿ ತಲೆಗೆ ಬೀಳುತ್ತದೆ ಎಂದು ಭಯದಿಂದ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆ.ಪಿ.ಸಿ.ಸಿ. ವಕ್ತಾರ ಅಮಲಾ ರಾಮಚಂದ್ರ ಹೇಳಿದರು. ಈ ಹಿಂದೆ ಇದ್ದ ಯಾವ ಶಾಸಕರ ಅವಧಿಯಲ್ಲೂ ಇಷ್ಟು ಭ್ರಷ್ಟಾಚಾರ ಇರಲಿಲ್ಲ. ಅಕ್ರಮ ಸಕ್ರಮ ಮಂಜೂರಾತಿಯಲ್ಲಿ

ಬೈಂದೂರಿನ ಬಡಾಕೆರೆಯಲ್ಲಿ ಚಿರತೆ ಪ್ರತ್ಯಕ್ಷ, ಜಾನುವಾರುಗಳ ಮೇಲೆ ದಾಳಿ

ಬೈಂದೂರ: ಬೈಂದೂರು ತಾಲೂಕಿನ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಾಕೆರೆಯಲ್ಲಿ ಚಿರತೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ. ಬಡಾಕೆರೆ ಗ್ರಾಮದ ಆಚಾರಬೆಟ್ಟು ಎಂಬಲ್ಲಿ ನಿನ್ನೆ ರಾತ್ರಿ ಸುಮಾರು 8.30ರ ಹೊತ್ತಿಗೆ ಚಿರತೆ ರಸ್ತೆಯಲ್ಲಿ ಓಡಾಡುತ್ತಿರುವುದು ವಾಹನ ಸವಾರರು ಗಮನಿಸಿ ಚಿತ್ರ ಸಹಿತ ಸರೆಹಿಡಿದ್ದಾರೆ.ಕೆಲವು ದಿನಗಳಿಂದ ಆಚಾರಬೆಟ್ಟು ಪ್ರದೇಶದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ಮಾಹಿತಿ

ಜ.17ರಂದು ಪದವಿನಂಗಡಿಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

ಆಶ್ರಯ ಬಳಗ ಪದವಿನಂಗಡಿ ಕಟ್ಟೆ ಮಂಗಳೂರು ಹಾಗೂ ಊರ ಹತ್ತು ಸಮಸ್ತರು ಇವರ ಆಶ್ರಯದಲ್ಲಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರಿಂದ ಯಕ್ಷಧ್ರುವ ಶ್ರೀ ಪಟ್ಲ ಸತೀಶ್ ಶೆಟ್ಟಿವರ ಸಾರಥ್ಯದಲ್ಲಿ ಯಕ್ಷಗಾನ ಬಯಲಾಟ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ಆಡಿತೋರಿಸಲಿದ್ದಾರೆ. ಪದವಿನಂಗಡಿಯ ಬೆನಕಾ ಸಭಾಂಗಣದಲ್ಲಿ ಜನವರಿ 17ರಂದು ಮಂಗಳವಾರ ಸಂಜೆ 6.30ಕ್ಕೆ ಚೌಕಿ ಪೂಜೆ ರಾತ್ರಿ 8 ಗಂಟೆಗೆ

ತುಳು ಎಂ.ಎ. : ಚಂದ್ರಹಾಸ ಕಣಂತೂರು ಪ್ರಥಮ ರ್‍ಯಾಂಕ್

ಮಂಗಳೂರು ವಿಶ್ವವಿದ್ಯಾನಿಲಯ ನಡೆಸಿದ ತುಳು ಎಂ.ಎ. ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಚಂದ್ರಹಾಸ ಕಣಂತೂರು ಅವರು ಪ್ರಥಮ ರ್‍ಯಾಂಕ್ ಪಡೆದಿರುತ್ತಾರೆ. ಹಂಪನಕಟ್ಟೆಯ ಮಂಗಳೂರು ವಿ.ವಿ.ಸಂಧ್ಯಾ ಕಾಲೇಜಿನ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ವಿದ್ಯಾರ್ಥಿಯಾಗಿದ್ದ ಚಂದ್ರಹಾಸ ಕಣಂತೂರು ಅವರು ತುಳು ಬರಹಗಾರರಾಗಿ , ವಾಗ್ಮಿಯಾಗಿ ಖ್ಯಾತಿ ಪಡೆದವರು. ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಲ್ಲಿ ಲೆಕ್ಕಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಚಂದ್ರಹಾಸ ಕಣಂತೂರು ಅವರು