Home Posts tagged #mangalore (Page 332)

ಕೇರಳದಲ್ಲಿ ರೈಲಿನಿಂದ ಬಿದ್ದು ವಿಟ್ಲದ ಯುವಕ ಮೃತ್ಯು

ವಿಟ್ಲ: ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ವಿಟ್ಲ ಸಮೀಪದ ಕಡಂಬು ಎಂಬಲ್ಲಿಯ ಯುವಕ ಮೃತಪಟ್ಟಿದ್ದಾರೆ.ವಿಟ್ಲ ಸಮೀಪದ ಕಡಂಬು ನಿವಾಸಿ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ ಉಸ್ಮಾನ್ ಅವರ ಪುತ್ರ ಮಹಮ್ಮದ್ ಅನಾಸ್(19) ಮೃತಪಟ್ಟ ಯುವಕ. ಈತ ಎಸಿ ಮೆಕಾನಿಕ್ ಆಗಿದ್ದು, ಎಸಿ ಟ್ರೈನಿಂಗ್ ಗಾಗಿ ಕೇರಳದ ಕೊಚ್ಚಿಗೆ ತೆರಳಿದ್ದರು. ತನ್ನ ಕೆಲಸ ಕಾರ್ಯ ಮುಗಿಸಿ, ಊರಿಗೆ ಟೈನ್

16 ದಿನದ ಅವಳಿ ಶಿಶುಗಳನ್ನು ಕತ್ತು ಹಿಸುಕಿ ಕೊಂದ ತಾಯಿ

ಭೋಪಾಲ್: ಅತ್ತೆಯೊಂದಿಗೆ ಜಗಳ ಮಾಡಿಕೊಂಡು ಮಹಿಳೆಯೊಬ್ಬರು ತನ್ನ 16 ದಿನಗಳ ಅವಳಿ ಮಕ್ಕಳನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಸಪ್ನಾ ಧಾಕಡ್ ತನ್ನ ಮಕ್ಕಳನ್ನು ಕೊಂದ ಆರೋಪಿ. ಮಕ್ಕಳನ್ನು ಹತ್ಯೆ ಮಾಡಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈಕೆಯ ಪತಿ ಮದ್ಯವ್ಯಸನಿ ಹಾಗೂ ಕೆಲಸವಿಲ್ಲದವನೆಂದು ಅತ್ತೆ ನಿಂದಿಸುತ್ತಿದ್ದರು ಎನ್ನಲಾಗಿದೆ. ಮನೆಯಲ್ಲಿ ಮಕ್ಕಳು ಇಲ್ಲದಿರುವ ಬಗ್ಗೆ ಸಪ್ನಾಳ ಪತಿ ಪೊಲೀಸ್‌

ಪ್ರವಾಸೋದ್ಯಮ ಉತ್ತೇಜನಕ್ಕೆ ಹಲವು ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು : ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ದೃಷ್ಟಿಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು. ಅವರು ಸೆ.27ರ ಮಂಗಳವಾರ ಜಿಲ್ಲಾಡಳಿತ, ಮಂಗಳೂರು ಸ್ಮಾರ್ಟ್ ಸಿಟಿ, ಕೇಂದ್ರ ಸರ್ಕಾರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಮಂತ್ರಾಲಯ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ನಗರದ

ಹೋಟೆಲ್ ಓಶಿಯನ್ ಪರ್ಲ್ ಸೆ. 30 ರಂದು ಉಜಿರೆಯಲ್ಲಿ ಶುಭಾರಂಭ

ಅಥಿತಿ ಸೇವೆಗೆ ಮತ್ತು ಉತ್ತಮ ಗುಣ ಮಟ್ಟದ ಆಹಾರ ಕ್ರಮಕ್ಕೆ ಹೆಸರು ವಾಸಿಯಾದ ಹೋಟೆಲ್ ಓಷನ್ ಪರ್ಲ್, ಉಜಿರೆ 30 ಸೆಪ್ಟೆಂಬರ್ 2022 ರಂದು ತನ್ನ 4ಶಾಖೆಯನ್ನು ತೆರೆಯಲಿದೆ. ಓಷನ್ ಪರ್ಲ್ ಹೋಟೆಲ್ಸ್ ಪ್ರೈ. ಲಿಮಿಟೆಡ್ ಸಂಸ್ಥೆ, ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಮೂರು ಶಾಖೆಗಳನ್ನು ಹೊಂದಿದ್ದು, ಅವುಗಳೆಂದರೆ ದಿ ಓಷನ್ ಪರ್ಲ್, ಮಂಗಳೂರು, ದಿ ಓಷನ್ ಪರ್ಲ್, ಉಡುಪಿ ಮತ್ತು ದಿ ಓಷಿಯನ್ ಪರ್ಲ್ ಇನ್, ಮಂಗಳೂರು ತಮ್ಮ 4 ನೇ ಶಾಖೆಯನ್ನು ಆರಂಭಿಸಲು ಹೆಮ್ಮೆಪಡುತ್ತಿದೆ.

ಕುಂಭಾಶಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ : ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

ಕುಂದಾಪುರ: ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣ ಶೃಂಗೇರಿ ಶ್ರೀ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಶ್ರೀ ಶ್ರೀ ನಾಗಾಚಲ ಅಯ್ಯಪ್ಪಸ್ವಾಮಿ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ. ಶ್ರೀ ಶಾರದಾ ಪೀಠ ಶೃಂಗೇರಿಯ ಪ್ರಾಂತೀಯ ಧರ್ಮಾಧಿಕಾರಿಗಳು, ವೇದಮೂರ್ತಿ ಲೋಕೇಶ್ ಅಡಿಗ ಅವರು ಮಾತನಾಡಿ, ಇಂದು ನಡೆಯುವ ದೇವಳದ ಎಲ್ಲಾ ಕಾರ್ಯಕ್ರಮಕ್ಕೂ ಚಾಲನೆ ನೀಡಿ ನವರಾತ್ರಿಯ

ಶಾಂತಿ ಸಾಮರಸ್ಯ ಹದಗೆಡುವ ಸಂಘಟನೆಗಳ ವಿರುದ್ದ ಕ್ರಮಕೈಗೊಳ್ಳಲಿ : ಯು.ಟಿ.ಖಾದರ್

ದೇಶದಲ್ಲಿ ಶಾಂತಿ ಸಾಮರಸ್ಯ ಹದಗೆಡಿಸುವ ಯಾವುದೇ ಸಂಘಟನೆ ವಿರುದ್ಧ ಕ್ರಮ ಆಗಬೇಕು. ಇದು ಸರ್ಕಾರದ ಜವಾಬ್ದಾರಿ, ಹಾಗಾಗಿ ಎಲ್ಲಾ ಸಂಘ ಸಂಸ್ಥೆಗಳ ಮೇಲೆ ಕ್ರಮ ಆಗಲಿ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು. ಹಲ್ಲೆ, ಅಶಾಂತಿ, ಕೋಮುದ್ವೇಷದ ಸಂಘಟನೆ ವಿರುದ್ದ ಕ್ರಮ ಕೈಗೊಳ್ಳಲಿ. ತಾರತಮ್ಯ ಮಾಡದೇ ಸದುದ್ದೇಶದಿಂದ ಕ್ರಮ ವಹಿಸಲಿ. ಒಂದು ಕ್ರಮದ ಮೂಲಕ ಸಮಾಜದಲ್ಲಿ ಅಶಾಂತಿ ಕಡಿಮೆಯಾಗಬೇಕು. ಉತ್ತಮ ಸಮಾಜ

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

ಉಡುಪಿ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ 30ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ 24, 2022 ರ ಶನಿವಾರದಂದು ಸಂಘದ ಕೋಟೇಶ್ವರ ಗೋವಿಂದ್ರಾಯ ವಿಠ್ಠಲ ಕಾಮತ್ ಸಭಾಂಗಣದಲ್ಲಿ ಜರುಗಿತ್ತು. ಶ್ರೀ ಕೆ ಪ್ರಶಾಂತ್ ಬಾಳಿಗಾ, ಕೆ.ಕೆ. ಫಿಶ್ ನೆಟ್ ಕೋ, ನೇಜಾರ್ ಇವರು 2022-23 ನೇ ಸಾಲಿನ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಯಾದರು. ಉಪಾಧ್ಯಕ್ಷರಾಗಿ, ಶ್ರೀ ಹರೀಶ್ ಕುಂದರ್, ಶ್ರೀ ಯು ಅಜಿತ್ ಕುಮಾರ್ ಶೆಣೈ, ಶ್ರೀ ಎಂ ವಸಂತ ಕಿಣಿ, ಕಾರ್ಯದರ್ಶಿಯಾಗಿ ಶ್ರೀ ಎಂ

ಕಾರ್ಕಳ ಪುರಸಭೆ : ಬೀದಿ ನಾಯಿಗಳ ಉಪಟಳಕ್ಕೆ ಕಡಿವಾನ ಹಾಕುವಂತೆ ಆಗ್ರಹ

ಕಾರ್ಕಳ: ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಕಾಟ ಎಲ್ಲೆಮೀರಿದೆ. ಅದಕ್ಕೆ ಕಡಿವಾಣ ಹಾಕುವುದಕ್ಕೆ ಇನ್ನೂ ಸಾಧ್ಯವಾಗಿಲ್ಲ. ಒಂದೊಂದು ಕಾರಣಗಳನ್ನು ಅಧಿಕಾರಿಗಳು ಸಭೆಗೆ ನೀಡುತ್ತಿರುವುದರಿಂದ ಸಮಸ್ಯೆ ಶಾಶ್ವತವಾಗಿ ಉಳಿದಿದೆ. ಕೂಡಲೇ ಕ್ರಮಕೈಗೊಳ್ಳಿ ಎಂದು ಪುರಸಭಾ ಪ್ರತಿಪಕ್ಷ ಮುಖಂಡ ಅಶ್ಪಕ್ ಅಹಮ್ಮದ್ ಆಗ್ರಹಿಸಿದಾರೆ.ಕಾರ್ಕಳ ಪುರಸಭೆಯ ಅಧ್ಯಕ್ಷೆ ಸುಮಾ ಅಧ್ಯಕ್ಷತೆಯಲ್ಲಿ ಬಿ.ಮಂಜುನಾಥ ಪೈ ಸಭಾಂಗಣದಲ್ಲಿ ಜರುಗಿದ್ದ ಸಾಮಾನ್ಯ ಸಭೆಯಲ್ಲಿ ಮೇಲಿನ

7 is Not Even ಕಿರುಚಿತ್ರದ ಪೋಸ್ಟರ್ ಬಿಡುಗಡೆ

ವಾಗ್ಮಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ಕೆ. ನಂದಿಕೇಶ ಹೆಗ್ಡೆಯವರು ನಿರ್ಮಿಸಿ ಜಗದೀಶ್ ಶೆಟ್ಟಿಯವರು ನಿರ್ದೇಶಿಸಿರುವ 7 is Not Even ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಿರುಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಮಂಗಳೂರು ಪೊಲೀಸ್ ಆಯುಕ್ತರಾದ ಎನ್ ಶಶಿಕುಮಾರ್ ಅವರು ಪೋಸ್ಟರ್ ಬಿಡುಗಡೆ ಗೊಳಿಸಿ ಸಿನಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಿರುಚಿತ್ರದ ತಂಡ ಉಪಸ್ಥಿತರಿದ್ದರು.

PFI ಪರ ಮಾತನಾಡಿದರೆ ಕಠಿಣ ಕ್ರಮ: ಡಿಜಿಪಿ ಪ್ರವೀಣ್ ಸೂದ್

ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ನಿಷೇಧವನ್ನು ಹೊರಡಿಸಿರುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಪ್ರವೀಣ್ ಸೂದ್ ತಿಳಿಸಿದ್ದಾರೆ.ರಾಜ್ಯದಲ್ಲಿ ಪಿಎಫ್ ಐ ಚಟುವಟಿಕೆಗಳನ್ನು ನಡೆಸುವುದಾಗಲಿ, ಆ ಸಂಘಟನೆ ಪರವಾಗಿ ಮಾತನಾಡುವುದಾಗಲೀ ಮಾಡಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ರಾಜ್ಯದ ನಾನಾ