ಮೂಡುಬಿದಿರೆ: ಇಲ್ಲಿನ ಪುರಭಾಧ್ಯಕ್ಷ ಪ್ರಸಾದ್ ಕುಮಾರ್ ಅಧ್ಯಕ್ಷತೆಯಲ್ಲಿ ಸರಕಾರದಿಂದ ರೂ 1 ಕೋಟಿ ಅನುದಾನ ಬಂದಿದ್ದು ಈ ಕಾಮಗಾರಿಯಲ್ಲಿ ಶೇ. 20ರಷ್ಟು ಕಮೀಷನ್ ವ್ಯವಹಾರ ನಡೆದಿದೆ ಎಂದು ವಿಪಕ್ಷೀಯ ಸದಸ್ಯ ಸುರೇಶ್ ಕೋಟ್ಯಾನ್, ಶಂಕ ವ್ಯಕ್ತಪಡಿಸಿ, ಆರೋಪಿಸಿದ ಘಟನೆ ನಡೆದಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಆಡಳಿತ ಪಕ್ಷದ ಸದಸ್ಯರು ಆರೋಪಕ್ಕೆ ಸಾಕ್ಷಿ
ಮೂಡುಬಿದಿರೆಯ ತಾಲೂಕು ಆಡಳಿತ ಸೌಧದಲ್ಲಿ ಲೋಕಾಯುಕ್ತ ಅಧಿಕಾರಿಗಳು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವ ಕಾರ್ಯಕ್ರಮ ನಡೆಯಿತು. ನಂತರ ಲೋಕಾಯುಕ್ತ ಡಿವೈಎಸ್‍ಪಿ ಕಲಾವತಿ ಮಾಧ್ಯಮದವರಿಗೆ ಮಾಹಿತಿ ನೀಡಿ ತಾಲೂಕಿನಲ್ಲಿ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ 8 ದೂರುಗಳು ಸಾರ್ವಜನಿಕರಿಂದ ಬಂದಿದ್ದು, ಆರ್ ಟಿಸಿ ಸಂಬಂಧಪಟ್ಟಂತೆ ಒಂದು ಪ್ರಕರಣವನ್ನು ಮಂಗಳವಾರ ಇತ್ಯರ್ಥ ಮಾಡಲಾಗಿದೆ. ಮೂರು ದೂರುಗಳಿಗೆ ಸೂಕ್ತ ನಮೂನೆ `ಸಲ್ಲಿಸುವಂತೆ ದೂರುದಾರರಿಗೆ ಸೂಚಿಸಲಾಗಿದೆ,
ನವದೆಹಲಿ; ದೇಶಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಪಿಎಫ್ ಐ ಯನ್ನು ಕೇಂದ್ರ ಗೃಹ ಇಲಾಖೆ ಘೋಷಿಸಿದ ಬಗ್ಗೆ ANI ಟ್ವೀಟ್ ಮಾಡಿದೆ.ಕುರಿತು ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರವು ಪಿಎಫ್ಐ (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್ಥೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಐದು ವರ್ಷಗಳ ಅವಧಿಗೆ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ ಎಂದು
ಮಂಗಳೂರು: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠದ ವಠಾರದಲ್ಲಿ ಪೂಜಿಸಲ್ಪಡುವ ಮಂಗಳೂರು ಶಾರದಾ ಮಹೋತ್ಸವದ ಶತಮಾನೋತ್ಸವ ಸವಿನೆನಪಿಗಾಗಿ ಸೋಮವಾರ ಕ್ಷೇತ್ರದ ಸರಸ್ವತಿ ಕಲಾ ಮಂಟಪದಲ್ಲಿ ನಡೆದ ಸಮಾರಂಭದಲ್ಲಿ ವಿಶೇಷ ಅಂಚೆ ಲಕೋಟೆ ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಲಾಯಿತು. ಅಂಚೆ ಇಲಾಖೆಯ ಹಿರಿಯ ಅಂಚೆ ಅಧೀಕ್ಷಕ ಹರ್ಷ, ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಎನ್. ಡಾ.ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಕೋಶಾಧಿಕಾರಿ ಪಂಡಿತ ವಿಠಲ
ಪುತ್ತೂರು: ಪುತ್ತೂರಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರಾವಳಿಯ ಆಯ್ದ ತಂಡಗಳ ಹುಲಿವೇಷ ಸ್ಪರ್ಧೆ “ಪುತ್ತೂರ್ದ ಪಿಲಿ ರಂಗ್’ ಅಕ್ಟೋಬರ್ 1ರಂದು ಶನಿವಾರ ನಗರದ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವರಾತ್ರಿ ಸಂದರ್ಭದಲ್ಲಿ ಯುವ ಜನತೆಯನ್ನು ಸಾಂಪ್ರದಾಯಿಕ ಹುಲಿವೇಷ ಕುಣಿತಕ್ಕೆ ಪೆÇ್ರೀತ್ಸಾಹಿಸಲು ಮತ್ತು ಅಪ್ಪಟ ನಮ್ಮ ಮಣ್ಣಿನ ನೆಲದ ಜಾನಪದ ಕುಣಿತವನ್ನು
ಬೆಂಗಳೂರು, 27 ಸೆಪ್ಟೆಂಬರ್ 2022: ಕೋಮುವಾದಿ ಫಾಸಿಸ್ಟ್ ಬಿಜೆಪಿ ಸರ್ಕಾರ ತನ್ನ ರಾಜಕೀಯ ಶತ್ರುಗಳನ್ನು ಗುರಿಯಾಗಿಸಿಕೊಂಡು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ವಿರುದ್ಧ ಆರಂಭಿಸಿದ ಅಸಂವಿಧಾನಿಕ ದಾಳಿ ಮತ್ತು ಕಾನೂನುಬಾಹಿರ ಬಂಧನಗಳ ಮುಂದುವರಿದ ಭಾಗವಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷ ಮತ್ತು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿ.ಎಫ್.ಐ) ಕಾರ್ಯಕರ್ತರನ್ನು ಕೂಡ ಕಾನೂನುಬಾಹಿರವಾಗಿ ಬಂಧಿಸುತ್ತಿದೆ. ಯಾವುದೇ
ಕಣ್ಣೂರು: ಕೋಝಿಕ್ಕೋಡ್‍ನಿಂದ ದೆಹಲಿಗೆ ಹೊರಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ ಹೊಡೆದ ಪರಿಣಾಮ, ವಿಮಾನವನ್ನು ಕಣ್ಣೂರು ವಿಮಾನ ನಿಲ್ದಾಣದಲ್ಲೇ ಲ್ಯಾಂಡಿಂಗ್ ಮಾಡಿದ ಘಟನೆ ಸೋಮವಾರ ನಡೆದಿದೆ. ವಿಮಾನ ಟೇಕಾಫ್ ಆದ ಸ್ವಲ್ಪ ಸಮಯದಲ್ಲೇ ಹಕ್ಕಿ ಢಿಕ್ಕಿ ಹೊಡೆಯಿತು. ಇದರ ಪರಿಣಾಮ ವಿಮಾನವನ್ನು ತಪಾಸಣೆ ಮತ್ತು ನಿರ್ವಹಣೆಗಾಗಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು ಎಂದು ಏರ್ ಇಂಡಿಯಾ ವಕ್ತಾರರು ಹೇಳಿದ್ದಾರೆ. 135 ಮಂದಿ ಪ್ರಯಾಣಿಕರೊಂದಿಗೆ ಕೋಝಿಕ್ಕೋಡ್
ಎಸ್‍ಎಲ್‍ವಿ ಕಲರ್ಸ್ ಬ್ಯಾನರ್‍ನಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅಪರಾಧಿ ನಾನಲ್ಲ ಚಿತ್ರದ ಫಸ್ಟ್ ಲುಕ್ “ಅಪರಾಧಿ ನಾನಲ್ಲ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಬಿಡುಗಡೆ ಕಾರ್ಯಕ್ರಮ ಮೈಸೂರಿನ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಾನದಲ್ಲಿ ನಡೆಯಿತು. ಮುತಾಲಮಡ ಸ್ನೇಹ ಚಾರಿಟೇಬಲ್ ಟ್ರಸ್ಟ್ ನ ಸುನಿಲ್ ದಾಸ್ ಸ್ವಾಮೀಜಿ ಪೆÇೀಸ್ಟರ್ ಬಿಡುಗಡೆಗೊಳಿಸಿ ಚಿತ್ರ ತಂಡಕ್ಕೆ ಶುಭ ಹಾರೈಸಿದರು. ಪ್ರಶಾಂತ್ ಆಳ್ವ
ಉಳ್ಳಾಲ: ವೆಲ್ಫೇರ್ ಅಸೋಸಿಯೇಷನ್ ರಾಣಿ ಪುರ (ರಿ)ಇದರ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಮುನ್ನೂರು ಗ್ರಾಮ ಪಂಚಾಯತ್ ಮುನ್ನೂರು ಮತ್ತು ಮಂಗಳೂರಿನ ಫಾದರ್ ಮುಲ್ಲರ್ ಅಸ್ಪತ್ರೆ ಇವರ ಸಹಯೋಗದಲ್ಲಿ ಉಚಿತ ವೈದ್ಯಕೀಯಾ ತಪಾಸಣಾ ಶಿಬಿರ ರಾಣಿ ಪುರ ಶಾಲಾ ವಠಾರದಲ್ಲಿ ನಡೆಯಿತು. ರಾಣಿಪುರ ಮೇರಿ ವಿಶ್ವ ಮಾತೆ ದೇವಾಲಯ ಧರ್ಮಗುರು ಫಾದರ್ ಜಯಪ್ರಕಾಶ್ ಡಿ ಸೋಜ ಉಚಿತ ವೈದ್ಯಕೀಯಾ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು ದೇಶದ ಜನರು ಪರಸ್ಪರ ಇತರರ
ಪುತ್ತೂರು: ಇಂದು ಮುಂಜಾನೆಯಿಂದಲೇ ರಾಜ್ಯದ ಹಲವೆಡೆ ಪೊಲೀಸರು ದಾಳಿ ನಡೆಸುತ್ತಿದ್ದು, ಪುತ್ತೂರು ಮೂಲದ ಪಿಎಫ್ಐ ಮುಖಂಡ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ಪಿಎಫ್ಐ ಪುತ್ತೂರು ಜಿಲ್ಲಾಧ್ಯಕ್ಷ ಜಾಬೀರ್ ಅರಿಯಡ್ಕ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.




























