ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ
ಈ-ಮಣ್ಣು ಚಲನ ಚಿತ್ರವನ್ನು ದುಬೈನ ಗಲೇರಿಯಾ ಚಿತ್ರಮಂದಿರದಲ್ಲಿ ವಿಶೇಷ ಅತಿಥಿಗಳನ್ನು ಆಹ್ವಾನಿಸಿ ಪ್ರದರ್ಶಿಸಿದ್ದು, ಯು.ಎ.ಇ.ಕನ್ನಡಿಗರಲ್ಲಿ ಸಡಗರ ಮೂಡಿಸಿತ್ತು. ಹೃದಯ ಸ್ವರ್ಶಿ ಮತ್ತು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಈ ಚಲನಚಿತ್ರವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಶಿವಧ್ವಜ್ ಶೆಟ್ಟಿ ನಿರ್ದೇಶಿಸಿದ್ದು, ದುಬೈನ ಅನಿವಾಸಿ ಕನ್ನಡಿಗ ಈಶ್ವರಿದಾಸ್ ಶೆಟ್ಟಿ ನಿರ್ಮಿಸಿದ್ದಾರೆ. ಈ ಚಲನಚಿತ್ರದ ಕನ್ನಡ ಭಾಷೆ ಮತ್ತು ಲಾಭ ರಹಿತ ಪ್ರದರ್ಶನಕ್ಕೆ
ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಧಾತ್ರಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ, ಸೆಪ್ಟೆಂಬರ್ 03, 2022 ರ ಶನಿವಾರದಂದು ಉಡುಪಿಯ ಕಿದಿಯೂರು ಹೋಟೆಲ್‍ನ ಅನಂತ ಶಯನ ಹಾಲ್‍ನಲ್ಲಿ, ಲೇಖಕ ಎಸ್. ಉಮೇಶ್ ರವರ “ಕಾಶ್ಮೀರ್ ಡೈರಿ” ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಜರುಗಿತ್ತು. ಈ ಸಮಾರಂಭದಲ್ಲಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ರವರು ಕೃತಿಯನ್ನು
ಕಂಟೇನರ್‍ಗಳು ಹಾಗೂ ಇತರೆ ಸರಕು ನಿರ್ವಹಣೆಗಾಗಿ ಬರ್ತ್ ಸಂಖ್ಯೆ 14ರ ಯಾಂತ್ರೀಕರಣ, ಬಿಎಸ್ 6 ಶ್ರೇಣಿ ಇಂಧನಗಳ ಉತ್ಪಾದನೆ, ಪರಿಸರ ಸಂರಕ್ಷಣೆ, ಮಾಲಿನ್ಯ ನಿಯಂತ್ರಣ, ಸಮುದ್ರ ಲವಣ ನೀರು ಶುದ್ಧೀಕರಣ ಘಟಕ. ಶುದ್ಧ ನೀರಿನ ಸಂರಕ್ಷಣೆ, 30 ಎಂಎಲ್‍ಡಿ ಲವಣ ನೀರು ಶುದ್ಧೀಕರಣ ಸಾಮಥ್ರ್ಯದೊಂದಿಗೆ ಸುಸ್ಥಿರತೆಗೆ ಉತ್ತೇಜನ. ಎನ್‍ಎಂಪಿಯಲ್ಲಿ ಸಮಗ್ರ ಎಲ್‍ಪಿಜಿ ಹಾಗೂ ಬೃಹತ್ ಪಿಒಎಲ್ ಸೌಲಭ್ಯ ಸ್ಥಾಪನೆ. 2,200 ಜನರಿಗೆ ಉದ್ಯೋಗವಕಾಶಗಳು,
ಪ್ರಧಾನಿ ನರೇಂದ್ರ ಮೋದಿಯವರಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಹಾಗೂ ಮತ್ಸ್ಯಾ ಸಂಪಾದನಾ ಯೋಜನೆಯ ಆಳ ಸಮುದ್ರ ಮೀನುಗಾರಿಕೆಯ ಬೋಟ್ ಫಲಾನುಭವಿಗಳಿಗೆ ಆದೇಶ ಪತ್ರವನ್ನು ವೇದಿಕೆಯಲ್ಲಿ ವಿತರಿಸಿದರು.
ಬಂಗ್ರಕೂಳೂರಿನಲ್ಲಿ ಕಾಯ್ದಿರಿಸಲಾದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೊನೊವಾಲ್ ಅವರು ಮೈಸೂರು ಪೇಟ ಹಾಗೂ ರತ್ನ ಮಾಲೆ ಮತ್ತು ಉಡುಪಿ ಶ್ರೀಕೃಷ್ಣನ ಸ್ಮರಣಿಕೆ ನೀಡಿ ಸ್ವಾಗತಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ಮಲ್ಲಿಗೆ ಮಾಲಾರ್ಪಣೆ ಮಾಡಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಪರಶುರಾಮನ ಸ್ಮರಣಿಕೆಯನ್ನು ನೀಡಿ
ಮೂಡುಬಿದಿರೆ: ತೆಂಕಮಿಜಾರು ಗ್ರಾ.ಪಂ.ವ್ಯಾಪ್ತಿಯ ಬಡಗ ಮಿಜಾರು ಗ್ರಾಮದ ಬೇರಿಂಜೆಯ ಮನೆಯೊಂದಕ್ಕೆ ಮುಸುಕುಧಾರಿ ವ್ಯಕ್ತಿಗಳಬ್ಬರು ನುಗ್ಗಿ ತಲವಾರು ಝಳಪಿಸಿ ಮಹಿಳೆಯ ಕತ್ತಿನಲ್ಲಿದ್ದ ಸುಮಾರು 5 ಪವನ್ ತೂಕದ ಚಿನ್ನದ ಕರಿಮಣಿ ಸರವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ನಡೆದಿದೆ. ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ದುಡಿಯುತ್ತಿರುವ ಕಮಲ ಶೆಟ್ಟಿ ದರೋಡೆಗೊಳಗಾದ ಮಹಿಳೆ ಇವರ ಇಬ್ಬರು ಗಂಡು ಮಕ್ಕಳು ಮೃತಪಟ್ಟಿದ್ದು, ಪತಿ ಕಳೆದ ವರ್ಷ ನಿಧನ ಹೊಂದಿದ್ದರು.
ಬಹಳ ಸಮಯದ ಬಳಿಕ ಪ್ರಧಾನಿ ಕರಾವಳಿಗೆ ಬರುತ್ತಿದ್ದಾರೆ. ಸುಮಾರು 3800ಕೋಟಿಯ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇಡೀ ಕರಾವಳಿಗೆ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ. ಉದ್ಯೋಗವಕಾಶಗಳನ್ನೂ ಇದು ನೀಡಬಲ್ಲದು. ಮೀನುಗಾರರಿಗೆ ಅನುಕೂಲ ಆಗುವ ಯೋಜನೆಗಳನ್ನು ನೀಡಲಾಗಿದೆ. ಕರಾವಳಿ ಅಭಿವೃದ್ಧಿಗೆ ಈ ಯೋಜನೆಗಳು ಪೂರಕ ಎಂದ ಸಿಎಂಮುರುಘ ಶ್ರೀಗಳ ಬಗ್ಗೆ ಮಾತಾನಾಡುವ ಪೂರಕ ಸಂದರ್ಭ ಇದಲ್ಲ. ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ತನಿಖೆ ನಡೆಸುತ್ತಿದ್ದಾರೆ.
ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ದ.ಕ.ಜಿಲ್ಲಾ ಪಂಚಾಯತ್ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಮೂಡುಬಿದಿರೆ ಮತ್ತು ಸಂತ ಥೋಮಸ್ ವಿದ್ಯಾ ಸಂಸ್ಥೆ ಆಲಂಗಾರು ಇವುಗಳ ಸಹಯೋಗದೊಂದಿಗೆ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಅಬಾಲ್ ಪಂದ್ಯಾಟವು ಆಲಂಗಾರು ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯಿತು. ಪುರಸಭಾ ಅಧ್ಯಕ್ಷ ಪ್ರಸಾದ್ ಕುಮಾರ್ ದೀಪ ಬೆಳಗಿಸಿ, ವಾಲಿಬಾಲ್‍ನ್ನು ರಿಬ್ಬನ್‍ನಿಂದ
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಅತ್ಯಂತ ಭೀಕರ ರೀತಿಯಲ್ಲಿ ಸಿಡಿಲು ಬಡಿದು ಲಕ್ಷಾಂತರ ಮೌಲ್ಯದ ಮನೆಯ ಸೊತ್ತುಗಳ ಜತೆಗೆ ಕ್ಯಾಟರಿಂಗ್ ಉದ್ಯಮ ಪಾತ್ರೆ ಪಗಡೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಆದರೆ ಮನೆಮಂದಿ ಪಕ್ಕದ ಮನೆಯಲ್ಲಿ ಮಲಗಿದ್ದ ಹಿನ್ನೆಲೆಯಲ್ಲಿ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಇಲ್ಲದೇ ಇದ್ದರೆ ಜೀವಕ್ಕೂ




























