Home Posts tagged #mangalore (Page 383)

ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ಲೀಗಲ್ ಫಾರಂ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಹಮ್ಮಿಕೊಂಡರು. ನಗರದ ಮ್ಯಾಪ್ಸ್ ಕಾಲೇಜಿನ ಅಡಿಟೋರಿಯಂನಲ್ಲಿ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ ಅವರು ದೀಪ ಬೆಳಗಿಸಿ

ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನಲ್ಲಿ : ಡಾ. ಎಂ.ಎಮ್ ಧಾವಲೆ ಸ್ಮರಣಾರ್ಥ ಉಪಾನ್ಯಾಸ

ದೇರಳಕಟ್ಟೆ: ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಮೆಡಿಕಲ್ ಕಾಲೇಜಿನಲ್ಲಿ ಡಾ.ಎಂ.ಎಲ್. ಧಾವಲೆ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮ ನಡೆಯಿತು.ಮುಂಬಾಯಿ ಡಾ.ಎಂ.ಎಲ್. ಧವಲೇ ಮೆಮೋರಿಯಲ್ ಹೋಮಿಯೋಪಥಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಡಾ.ಬಿಪಿನ್ ಜೈನ್ ಒಂದು ದಿನದ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ವೈದ್ಯಕೀಯ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ನಮ್ಮ ದೇಶದ ಸಾಧನೆ ಮಹತ್ತರವಾದುದು. ಇಂದಿನ ಆಧುನಿಕತೆಯ ಕಾಲಘಟ್ಟದಲ್ಲಿ

ಕೆ.ಎಸ್. ಹೆಗ್ಡೆ ಮಾದಕ ದ್ರವ್ಯ ಸೇವನೆ, ಅಕ್ರಮ ಸಾಗಾಟದ ವಿರುದ್ಧ ಜಾಗೃತಿ

ದೇರಳಕಟ್ಟೆ: ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಅಸ್ಪತ್ರೆಯ ಮಾನಸಿಕ ಚಿಕಿತ್ಸಾ ವಿಭಾಗ ಮತ್ತು ಆಳ್ವಾಸ್ ಕಾಲೇಜಿನ ಪದವಿ ಕಾಲೇಜಿನ ಸಮಾಜಕಾರ್ಯ ವಿಭಾಗದ ಆಶ್ರಯದಲ್ಲಿ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟದ ವಿರುದ್ದ ಅಂತರಾಷ್ಟ್ರೀಯ ದಿನಾಚರಣೆಯ ಮತ್ತು ಜಾಗೃತಿ ಕಾರ್ಯಕ್ರಮ ಅಸ್ಪತ್ರೆ ಗ್ಲಾಸ್ ಹೌಸ್ ನಲ್ಲಿ ನಡೆಯಿತು.ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ಪದವಿ ವಿಭಾಗದ ಮುಖ್ಯಸ್ಥ ಡಾ.ಮಧುಮಾಲ ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಸಾಗಾಟದ ವಿರುದ್ದ

ಪುತ್ತೂರು : ಬೀದಿ ನಾಯಿ ನೆರವಿಗೆ ಬರುವಿರಾ

ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಪೇಪರ್ ಏಜೆಂಟ್ ಆಗಿಯೂ, ಜನಪ್ರತಿನಿಧಿಯೂ ಆಗಿದ್ದ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ. ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ

ಕಡಬ : ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ

ಕಡಬ: ಇನ್ನೋವಾ ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ಪಂಜ – ಕಡಬ ರಸ್ತೆಯ ಕೋಡಿಂಬಾಳದಲ್ಲಿ ನಡೆದಿದೆ.ಧರ್ಮಸ್ಥಳ ಮೂಲದವರಿದ್ದ ಇನ್ನೋವಾ ಕಾರು ಹಾಗೂ ಬೆಂಗಳೂರಿನಿಂದ ಪಂಜ ಮಾರ್ಗವಾಗಿ ಕಡಬಕ್ಕೆ ಬರುತ್ತಿದ್ದ ಸುಗಮ ಸಂಸ್ಥೆಗೆ ಸೇರಿದ ಖಾಸಗಿ ಬಸ್ ನಡುವೆ ಕೋಡಿಂಬಾಳ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಇನ್ನೋವಾ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಪವಾಡಸದೃಶ ಅಪಾಯದಿಂದ ಪಾರಾಗಿದ್ದಾರೆ.

ಸರಕಾರಿ ಕಚೇರಿಯಲ್ಲಿ ಫೋಟೋ ನಿರ್ಬಂಧ ಆದೇಶ ವಾಪಾಸು

ಸರ್ಕಾರಿ ಕಚೇರಿಗಳಲ್ಲಿ ಫೋಟೊ, ವಿಡಿಯೊ ಮಾಡದಂತೆ ಹೊರಡಿಸಿದ್ದ ಆದೇಶದ ಬಗ್ಗೆ ನನ್ನ ಗಮನಕ್ಕೆ ಬಂದಿರಲಿಲ್ಲ.ಯಾವುದೇ ರೀತಿಯ ನಿಷೇಧ ಆಗಬಾರದು, ಮೊದಲು ಇದ್ದಂತೆ ಇರಲಿ ಎಂಬ ಕಾರಣಕ್ಕೆ ಈ ಆದೇಶವನ್ನು ವಾಪಸು ಪಡೆಯುವ ತಾತ್ವಿಕ ತೀರ್ಮಾನ ತೆಗೆದುಕೊಂಡಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಲ್ಗುಣಿ ತೀರದಲ್ಲಿ ತೇಲಿ ಬಂದ ಟನ್‍ಗಟ್ಟಳೆ ತ್ಯಾಜ್ಯ : ಸಂಘಸಂಸ್ಥೆ, ಸ್ವಯಂಸೇವಕರಿಂದ ಸ್ವಚ್ಛತಾ ಕಾರ್ಯ

ಕೂಳೂರಿನ ನದಿ ತೀರದಲ್ಲಿ ಶೇಖರಣೆಗೊಂಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪಲ್ಗುಣಿ ನದಿ ತೀರದಲ್ಲಿ ರಾಶಿ ಬಿದ್ದಿದ್ದ ಪ್ಲಾಸ್ಟಿಕ್, ನದಿಯಲ್ಲಿ ತೇಲಿ ಬಂದ ಟನ್‍ಗಟ್ಟಲೆ ತ್ಯಾಜ್ಯವನ್ನು ಸಂಘ ಸಂಸ್ಥೆ ಸ್ವಯಂ ಸೇವಕರು ಸ್ವಚ್ಚತಾ ಕಾರ್ಯ ನಡೆಸಿದರು. ಎಲ್ಲಾ ತ್ಯಾಜ್ಯಗಳನ್ನು ಸ್ವಯಂ ಸೇವಕರು ಹೆಕ್ಕಿ ಸ್ವಚ್ಛಗೊಳಿಸಿದರು. ಮಂಗಳೂರಿನ ರೇಂಜ್ ಅರಣ್ಯ ಇಲಾಖೆ, ಸಿಒಡಿಪಿ, ಎನ್‍ಇಸಿಎಫ್ ಮೊದಲಾದ ಸಂಘಟನೆಗಳುವರು ಸಹಕಾರ ನೀಡಿದ್ದಾರೆ.

ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ

ಮಂಗಳೂರಿನ ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭ್ರಷ್ಟಾಚಾರ ನಿಗ್ರಹ ದಳ ಪಶ್ಚಿಮ ವಲಯದ ಎಸ್ ಪಿ. ಶ್ರೀ ಸೈಮನ್ ಸಿ.ಎ ಅವರು ಮಾತನಾಡಿ ನಿಜವಾದ ನಾಯಕತ್ವ ಎಂದರೆ ಮುನ್ನೆಲೆಯಲ್ಲಿ ಮುನ್ನಡೆಸುವುದಲ್ಲ. ದೊರೆತ ಅವಕಾಶವನ್ನು ವಿಶ್ಲೇಷಿಸಿ ಹಿಂಜರಿಯದೆ ಸವಾಲುಗಳನ್ನು ಎದುರಿಸುವುದು ಎಂದು ಹೇಳಿದರು” . ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಪ್ರಾಂಶುಪಾಲರಾದ ರೆ.ಫಾ ಮೆಲ್ವಿನ್

ಸವಣೂರಿನಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ : ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ

ಕಡಬ,ಸವಣೂರು : ಮಾತೃಭೂಮಿ ಸಾವಯವ ಕೃಷಿ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ.) ಕಡಬ ,ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ,ಅರಣ್ಯ ಇಲಾಖೆ ಪುತ್ತೂರು ,ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಇದರ ವತಿಯಿಂದ ಸವಣೂರು ಯುವಕ ಮಂಡಲದ ಯುವ ಸಭಾಭವನದಲ್ಲಿ ಸಸಿ ಮತ್ತು ತರಕಾರಿ ಬೀಜ ವಿತರಣೆ ಹಾಗೂ ಕೃಷಿ ಅರಣ್ಯ ರೈತ ಸಹಾಯಧನದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ ಮಾತನಾಡಿ,

ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ.

ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಕೆಸರುಡೊಂಜಿ ದಿನ ನೇಜಿ ನಡುವ ಸಂಭ್ರಮ ಮನೆಮಾತಾಗಿತ್ತು.ಮಕ್ಕಳಿಗೆ ಹಳ್ಳಿಯ ವಾತಾವರಣ ಕಲ್ಪಿಸಿಕೊಡಲಾಗಿತ್ತು.ಶಾಲಾ ಮಕ್ಕಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ರತ್ನಮಾನಸ ಇಲ್ಲಿನ ಮೇಲ್ವಿಚಾರಕರಾಗಿರುವ ಶ್ರೀ. ಯತೀಶ್ ಬಳಂಜ ಮಾತನಾಡುತ್ತಾ,ಪ್ರಕೃತಿಯ ವಿಸ್ಮಯ,ಅದರಿಂದಾಗುವ ಪ್ರಯೋಜನ,ಅದನ್ನು ಉಳಿಸುವ ಪ್ರಯತ್ನ ವಿದ್ಯಾರ್ಥಿಗಳು