ನಗರದ ಪಂಪ್‌ವೆಲ್ ಬಳಿ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಪಚ್ಚನಾಡಿ ನಿವಾಸಿ ಧನುಷ್ ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಶುಕ್ರವಾರ ತಡರಾತ್ರಿ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪ್‌ವೆಲ್
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಅವರ ದ್ವಿತೀಯ ಅಧಿಕೃತ ಕಚೇರಿ ಮಂಗಳೂರು ಮಹಾನಗರಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡದಲ್ಲಿ ಶುಕ್ರವಾರ ಶುಭಾರಂಭಗೊಂಡಿತು. ಬಿಜೆಪಿ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ಮಾನ್ಯ ನಳಿನ್ ಕುಮಾರ್ ಕಟೀಲ್ ಅವರ ಉಪಸ್ಥಿತಿಯಲ್ಲಿ ಬಿಜೆಪಿಯ ಹಿರಿಯ ಮುಖಂಡರಾದ ಕಾಳಪ್ಪ ಗೌಡ ಉದ್ಘಾಟಿಸಿದರು. ಈ ಸಂದರ್ಭ ನಳಿನ್ ಕುಮಾರ್ ಕಟೀಲ್ ಅವರು ಮಾತನಾಡಿ ಡಾ. ಭರತ್ ಶೆಟ್ಟಿ ಅವರು ಕಳೆದ ನಾಲ್ಕು
ಮಂಗಳೂರು: ಕೋರೋನಾ ಸೋಂಕಿನಿಂದ ಮೃತಪಟ್ಟ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು. ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಪ್ರೆಸ್
ಧಾರ್ಮಿಕ ಅಲ್ಪಸಂಖ್ಯಾತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಪದವಿ/ಸ್ನಾತಕೋತ್ತರ ಪದವಿಯ ಖಾಸಗಿ ಕೋಟಾದ ಸೀಟುಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಾಲೂಕು ತಹಶೀಲ್ದಾರರಿಂದ ನಿಗದಿತ ನಮೂನೆಯಲ್ಲಿ (ಅನುಬಂಧ 4ಎ) ಧಾರ್ಮಿಕ ಅಲ್ಪಸಂಖ್ಯಾತ ಪ್ರಮಾಣಪತ್ರ ಪಡೆದು, ಆನ್‍ಲೈನ್ ಕೌನ್ಸಿಲಿಂಗ್’ನ ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಹಾಜರು ಪಡಿಸಬೇಕೆಂಬುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮ. ಆದರೆ, ನಿಗದಿತ ನಮೂನೆ (ಅನುಬಂಧ 4ಎ)ಯಲ್ಲಿ ಧಾರ್ಮಿಕ
ಉಡುಪಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ಹಾಗೂ ಮಂಗಳೂರಿನ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಈ ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನೀಲ್ ಕುಮಾರ್, ಶಾಸಕರಾದ ಭರತ್ ಶೆಟ್ಟಿ, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ. ಕೆ.ವಿ.
ಮಂಗಳೂರಿನ ಕುಂಟಿಕಾನದ ಎಜೆ ಆಸ್ಪತ್ರೆಯ ಮುಂಭಾಗದಲ್ಲಿ ಖಾಸಗಿ ಬಸ್‌ನ ಹಿಂಬದಿಗೆ ಸ್ಕೂಟರ್ ವಾಹನ ಢಿಕ್ಕಿಯಾಗಿದ್ದು, ಸ್ಕೂಟರ್ ಸವಾರ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾಸಗಿ ಬಸ್‌ನ ಹಿಂಬದಿಗೆ ದ್ವಿಚಕ್ರ ವಾಹನ ಸವಾರ ಹಿಮ್ಮುಖವಾಗಿ ಢಿಕ್ಕಿಯಾಗಿದೆ. ಢಿಕ್ಕಿಯಾದ ರಭಸಕ್ಕೆ ದ್ವಿಚಕ್ರವಾಹನ ಸವಾರ ಬಸ್‌ನ ಅಡಿಗೆ ನುಗ್ಗಿದ್ದು, ಗಂಭೀರ ಗಾಯಗೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ವಾಟರ್ ಪ್ಯೂರಿಫೈಯರ್ ಕಂ ಹೀಟರ್ ನ್ನು ಭಾರತೀಯ ಜೀವ ವಿಮಾ ನಿಗಮವು ಕೊಡುಗೆಯಾಗಿ ನೀಡಿದೆ. ಈ ಕಾರ್ಯ ಮಾದರಿಯಾಗಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ದುರ್ಗಾ ಪ್ರಸಾದ್ ಅವರು ಹೇಳಿದರು. ಭಾರತೀಯ ಜೀವವಿಮಾ ನಿಗಮದ 65ನೇ ವರ್ಷಾಚರಣೆ ಸಂದರ್ಭದಲ್ಲಿ ಆಸ್ಪತ್ರೆಯ ಸುಪರಿಂಟೆಂಡೆಂಟ್ ಅವರು ವಾಟರ್ ಪ್ಯುರಿಫಯ್ಯರ್ ಕಂ ಹೀಟರ್ ಅನ್ನು ಸ್ವೀಕರಿಸಿ ಮಾತನಾಡಿದರು. ನಿಗಮದ ಮಂಗಳೂರು ಶಾಖೆಯ ಹಿರಿಯ ಪ್ರಬಂಧಕರಾದ ಶ್ರೀ ಎಚ್
ಗುರುಪುರ ಕೈಕಂಬ; ಪ್ರವಾದಿ ನಿಂದನೆ ಹಾಗೂ ಮುಸ್ಲಿಂ ಸಮುದಾಯದ ಮೇಲಾಗುತ್ತಿರುವ ನಿರಂತರ ದೌರ್ಜನ್ಯದ ವಿರುದ್ಧ ಎಸ್‌ಕೆಎಸ್‌ಎಸ್‌ಎಫ್ ಕೈಕಂಬ ವಲಯದಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಎಂ. ಇಸ್ಹಾಕ್ ಕೌಸರಿ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ನಿಮಗಿಂತಲೂ ಪ್ರವಾದಿಯನ್ನು ನಿಂದಿಸಿದ ಜನರು ಕಳೆದುಹೋಗಿದ್ದಾರೆ. ಅವರಲ್ಲಿ ಬಹಳಷ್ಟು ಜನರು ಪ್ರವಾದಿಯವರನ್ನು ಅರಿತಾಗ ಇಸ್ಲಾಂ ಸ್ವೀಕರಿಸಿದ ಚರಿತ್ರೆಯಿದೆ. ಪ್ರವಾದಿಯನ್ನು
ಕಳೆದ 2 ದಿನದ ಹಿಂದೆ ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿ(12), ಚಿಂತನ್(12), ರಾಯನ್(12) ಮಕ್ಕಳನ್ನು ಮಂಗಳೂರಿನಲ್ಲಿ ಅಟೋ ಚಾಲಕ ಪತ್ತೆ ಹಚ್ಚಿ ಪಾಂಡೇಶ್ವರ ಪೊಲೀಸ್ ಠಾಣೆಗೆ ತಿಳಿಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ದಿನಗಳ ಹಿಂದೆ ಈ ಮಕ್ಕಳು ಕಾಣೆಯಾಗಿದ್ದರು. ಈ ಬಗ್ಗೆ ಬೆಂಗಳೂರು ಪೊಲೀಸರು ವಿಶೇಷ ತಂಡ ರಚನೆ ಮಾಡಿ ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದರು. ಒಟ್ಟಾರೆ ಪ್ರಕರಣ ಸುಖ್ಯಾಂತ್ಯ ಕಂಡಿದೆ.



















