ಉಳ್ಳಾಲ: ಮಂಗಳೂರಿನ ನಂತೂರಿನಲ್ಲಿ ಕಾರ್ಯಚರಿಸುತ್ತಿರುವ ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಸೋಮೇಶ್ವರ ಕಡಲ ಕಿನಾರೆಯ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಶಾಸಕ ಯು.ಟಿ ಖಾದರ್ ಸ್ವಚ್ಛ ಭಾರತ ಅಭಿಯಾನ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾಲೇಜಿನಲ್ಲಿ ಕಲಿತ ಪಾಠಗಳು ಆತನ ವ್ಯಕ್ತಿತ್ವ
ದಕ್ಷಿಣ ಕನ್ನಡ ಜಿಲ್ಲೆಯ ತುಳು ಅಧಿಕೃತ ಭಾಷೆ ಪೊರಂಬಾಟ್ ಸಮಿತಿ ವತಿಯಿಂದ ತುಳು ಭಾಷೆಗೆ ಮಾನ್ಯತೆ ಸಿಗಬೇಕೆಂದು ಪ್ರತಿಭಟನೆ ಹಮ್ಮಿಕೊಂಡಿದ್ದೇವು. ಆದರೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರಿಂದ ಪ್ರತಿಭಟನೆಯನ್ನು ರದ್ದುಮಾಡಬೇಕಿತ್ತು. ರಾಜಕೀಯ ಕಾರ್ಯಕ್ರಮ, ರಾಜಕೀಯ ಪ್ರತಿಭಟನೆಗೆ ಅವಕಾಶ ಕೊಡುತ್ತಾರೆ. ಆದರೆ ನಮ್ಮ ತುಳುವರ ಶಾಂತಿಯುತ ಪ್ರತಿಭಟನೆಗೆ ಯಾಕೆ ಅವಕಾಶ ನೀಡಿಲ್ಲ ಎಂದು ಯೋಗೀಶ್ ಶೆಟ್ಟಿ ಜೆಪ್ಪು ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ
ಮಂಗಳೂರಿನ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಅಕ್ಟೋಬರ್ 7 ರಿಂದ ಅಕ್ಟೋಬರ್ 16ರ ವರೆಗೆ ನಡೆಯಲಿದೆ. ನವರಾತ್ರಿಯ ಸಂದರ್ಭ ಪ್ರತಿದಿನ ವಿಶೇಷ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಜರುಗಲಿರುವುದು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ,ಸುದ್ದಿಗೋಷ್ಟಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರಾದ ಪಿ ರಾಮನಾಥ ಹೆಗ್ಡೆ ರಘುರಾಮ ಉಪಾದ್ಯಾಯ, ಅರುಣ ಐತಾಳ್ ರಾಮನಾಯ್ಕ ಉಪಸ್ಥಿತರಿದ್ದರು.
ಇ ಕಾಮರ್ಸ್ ಸಂಸ್ಥೆಯಾದ ಅಮೆಝಾನ್‌ನ ಕಾನೂನು ಸಲಹೆಗಾರರು ಭಾರತದ ಸರಕಾರದ ಅಧಿಕಾರಿಗಳಿಗೆ ನೀಡಿದ್ದಾರೆನ್ನುವ ೮,೫೪೬ ಕೋಟಿ ರೂ.ಗಳು ಲಂಚ ಪ್ರಕರಣವಾಗಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸ್ಪಷ್ಟ ಪಡಿಸಬೇಕು ಎಂದು ಎಐಸಿಸಿ ವಕ್ತಾರೆ, ರಾಜ್ಯಸಭಾ ಸದಸ್ಯೆ ಡಾ. ಅಮೀ ಯಜ್ಞಿಕ್ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇದೊಂದು ಬಹುದೊಡ್ಡ ಹಗರಣವಾಗಿದೆ. ಈ ಹಣ ಎಲ್ಲಿಗೆ ಹೋಗುತ್ತಿದೆ.
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್‍ಯಾಲಿಗೆ ಚಾಲನೆ ನೀಡಲಾಯಿತು. ಮೇಯರ್ ಪ್ರೇಮಾನಂದ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ರ್‍ಯಾಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಚಾಲನೆ ನೀಡಿದರು. ಮ್ಯಾರಥಾನ್ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪು ಮಾಡಲು ಇದೊಂದು ಉತ್ತಮ ಕಾರ್ಯಕ್ರಮ. ಬಹಳ ಅದ್ಭುತವಾಗಿ ಸ್ಮಾರ್ಟ್ ಸಿಟಿಯಿಂದ
ಮಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು. ಅವರು
ಮಂಗಳೂರು:ಮಂಗಳೂರಿನ ಸುರತ್ಕಲ್ ನಲ್ಲಿ ನಡೆದ ವೈದ್ಯ ವಿದ್ಯಾರ್ಥಿಗಳ ಮೇಲಿನ ದಾಳಿ ಪ್ರಕರಣವನ್ನು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಖಂಡಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ವಿರುದ್ಧ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದರು. ರಸ್ತೆಯಲ್ಲಿ ಯಾವನೋ ಒಬ್ಬ ರೌಡಿ ಹೊಡಿತಾನೆ ಅಂದರೆ ಏನೆನ್ನಬೇಕು..? ಹಾಡಹಗಲೇ ಇಂತಹ ಘಟನೆ ನಡೆದರೆ ಏನೆನ್ನಬೇಕು. ಪೊಲೀಸ್ ಇಲಾಖೆ ಧೈರ್ಯ, ರಕ್ಷಣೆ ಕೊಡುವ ಕೆಲಸ
ಮಂಗಳೂರಿನಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿಯ ಪ್ರಕರಣ ಬೆಳಕಿಗೆ ಬಂದಿದ್ದು, . ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು ಅನೈತಿಕಗಿರಿ ತೋರಿಸಿದೆ ಎಂದು ಆರೋಪಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಸುರತ್ಕಲ್ ಬಳಿ ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮಂಗಳೂರಿನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಉಡುಪಿಗೆ ಪ್ರವಾಸ ಹೋಗಿ ವಾಪಾಸ್ ಬರುವಾಗ ಅವರ ವಾಹನವನ್ನು ತಡೆದು ಗುಂಪೊಂದು
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಗರದ ಓಷಿಯನ್ ಪರ್ಲ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ ರವಿಶಂಕರ್ ಮಿಜಾರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗಡೆ
ಕೊರೊನಾದ ಮೊದಲ ಮತ್ತು ಎರಡನೇ ಅಲೆಗಳ ಸಮಯದಲ್ಲಿ ಸ್ಥಗಿತಗೊಂಡಿದ್ದ ಪ್ರವಾಸೋದ್ಯಮಕ್ಕೆ ಇದೀಗ ಖಾಸಗಿ ವಿಮಾನಗಳ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ರವಿವಾರದಂದು ಪುಣೆಯಲ್ಲಿರುವ13 ಮಂದಿಯನ್ನು ಹೊಂದಿರುವ ಕುಟುಂಬವೊಂದು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಜಿಲ್ಲೆಯ ವಿವಿಧ ಪ್ರವಾಸೋದ್ಯಮ ತಾಣಗಳಿಗೆ ಭೇಟಿ ನೀಡಿದ್ದಾರೆ. ಜೆಟ್ ಬಂದಿಳಿದಿದ್ದು, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಪ್ರವಾಸಿಗರನ್ನು ಸ್ವಾಗತಿಸಿದರು.


















