Home Posts tagged #mangalore (Page 404)

ಪಚ್ಚನಾಡಿ ತ್ಯಾಜ್ಯ ಕುಸಿತ ಪುನರಾರ್ವತನೆಯಾಗದಂತೆ ನಿರ್ಣಯ :ಪಾಲನಾ ಸಭೆಯಲ್ಲಿ ಶಾಸಕ ಡಾ.ಭರತ್ ಶೆಟ್ಟಿ

ಮುಂಗಾರು ಮಳೆಯ ಅವಧಿಯಲ್ಲಿ ಪಚ್ಚನಾಡಿಯ ಘನತ್ಯಾಜ್ಯ ಲ್ಯಾಂಡ್ ಫೀಲ್ ಘಟಕದ ತ್ಯಾಜ್ಯ ಕುಸಿತ ದುರಂತ ಈ ಬಾರಿ ಪುನರಾವರ್ತನೆಗೊಳ್ಳದಂತೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಕಳೆದ ವಾರ ಈಗಾಗಲೇ ಸಭೆ ನಡೆದಿದ್ದು, ಆ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪಾಲನೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ

ಗಾಳಿ ಮಳೆಗೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ: ಧರೆಗುರುಳಿದ ವಿದ್ಯುತ್ ಕಂಬ

ಕರಾವಳಿಯಲ್ಲಿ ಬಿರುಸುಗೊಂಡ ಮಳೆಯಿಂದಾಗಿ ಅಲ್ಲಲ್ಲಿ ವ್ಯಾಪಕವಾಗಿ ಹಾನಿಯಾಗುತ್ತಿದ್ದು, ನಗರದ ಮಂಗಳಾದೇವಿ ಸಮೀಪದ ರಾಮಕೃಷ್ಣ ಮಿಷನ್ ಬಳಿಯಲ್ಲಿ ಗಾಳಿಮಳೆಗೆ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ. ಇಂದು ಬೆಳಗ್ಗೆ ಸುಮಾರು 5.30 ರ ವೇಳೆಗೆ ಈ ಘಟನೆ ನಡೆದಿದ್ದು, ೫ ವಿದ್ಯುತ್ ಕಂಬಗಳು ಧರೆಗುರಳಿದ್ದು, ವಾಹನ ಸಂಚಾರಕ್ಕೆ ತೊಡಕ್ಕುಂಟಾಗಿತ್ತು. ಇನ್ನು ಘಟನೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ದ್ವಿಚಕ್ರ

 ಅರ್ಕುಳ ಶ್ರೀ ವರದೇಶ್ವರ ದೇವಸ್ಥಾನದ ಡ್ರೈನೇಜ್ ಸಮಸ್ಯೆ: ಶಾಸಕ ಡಾ ವೈ ಭರತ್ ಶೆಟ್ಟಿ ಭೇಟಿ

ಇತಿಹಾಸ ಪ್ರಸಿದ್ಧ ಸುಮಾರು 800 ವರ್ಷಗಳಷ್ಟು ಪ್ರಾಚೀನ ಸ್ವಯಂಭೂ ಅರ್ಕುಳ  ಶ್ರೀವರದೇಶ್ವರ ದೇವಸ್ಥಾನ ಬಳಿ ರೈಲ್ವೆ ಇಲಾಖೆಯವರು ಗೋಡೆಕಟ್ಟುವ ಕಾಮಗಾರಿ ಸಂದರ್ಭದಲ್ಲಿ ದೇವಸ್ಥಾನದ ಡ್ರೈನೇಜ್ ವ್ಯವಸ್ಥೆಗೆ ಲೋಪವಾಗಿತ್ತು. ಇದರ ಪರಿಣಾಮ ದೇವಸ್ಥಾನದ ಅಂಗಣ ತುಂಬಾ ಮಳೆನೀರು ತುಂಬಿಕೊಂಡಿತ್ತು. ಈ ವಿಷಯವನ್ನು ಅರ್ಕುಳ  ಗ್ರಾಮಸ್ಥರು ಶಾಸಕರಾದ ಡಾ ವೈ ಭರತ್ ಶೆಟ್ಟಿಯವರಲ್ಲಿ ತಿಳಿಸಿದಾಗ  ಕೂಡಲೇ ಸ್ಪಂದಿಸಿ  ರೈಲ್ವೆ ಇಲಾಖೆಯವರೊಂದಿಗೆ ಮಾತನಾಡಿ ತ್ವರಿತ ವಾಗಿ

ಮಂಗಳೂರಿನಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆ

ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ. ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ

ಉಚಿತವಾಗಿ ಲಸಿಕೆ ನೀಡುವ ಯೋಜನೆ ರೂಪಿಸುವಂತೆ ದ.ಕ. ಜಿಲ್ಲಾಧಿಕಾರಿಯವರಿಗೆ ಮನವಿ

ಕೊವಿಡ್ ಲಸಿಕೆಯ ಕುರಿತಂತೆ ಎಷ್ಟೇ ತಾರ್ಕಿಕ ಚರ್ಚೆಗಳು ನಡೆಯುತ್ತಿದ್ದರೂ, ಕೊರೊನ ಸೋಂಕು ಹರಡದಂತೆ ತಡೆಯುವ ಸದ್ಯಕ್ಕಿರುವ ಏಕೈಕ ಉಪಾಯ ಲಭ್ಯವಿರುವ ಲಸಿಕೆಯನ್ನು ಹಾಕಿಸಿಕೊಳ್ಳುವುದೆಂಬುದು ಎಲ್ಲ ತಜ್ಞರ ಒಮ್ಮತದ ಸಲಹೆಯಾಗಿದೆ. ಆದ್ದರಿಂದಲೇ ನಮ್ಮ ಕೇಂದ್ರ ಮತ್ತು ರಾಜ್ಯ ಸರಕಾರಗಳೂ ವ್ಯಾಕ್ಸಿನೇಸನ್ ಅಭಿಯಾನವನ್ನ ಸಮರೋಪಾದಿಯಲ್ಲಿ ನಡೆಸುತ್ತಿವೆ. ಎಲ್ಲ ದೇಶಗಳೂ ಉಚಿತ ವ್ಯಾಕ್ಸಿನೇಸನ್ ಮಾಡುತ್ತಿದ್ದು, ನಮ್ಮ ದೇಶದಲ್ಲೂ ಉಚಿತ ಲಸಿಕೆ ಎಲ್ಲರಿಗೂ ಸಿಗಬೇಕೆಂಬುದು ಜನರ

ಕಾರ್ಮಿಕರ ಕೊರತೆಯ ನಡುವೆಯೂ ಕಾಮಗಾರಿಗೆ ವೇಗ – ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು ಮಹಾನಗರ ಪಾಲಿಕೆಯ ಕಂಬ್ಳ ವಾರ್ಡ್ ಹಾಗೂ ಡೊಂಗರಕೇರಿ ವಾರ್ಡಿಗೆ ಸಂಬಂಧಪಟ್ಟ ಶಾರದಾ ವಿದ್ಯಾಲಯ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್ ಪ್ರೇಮಾನಂದ ಶೆಟ್ಟಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಶಾಸಕ ಕಾಮತ್, ಕೋವಿಡ್ ಕಾರಣದಿಂದ ಕಾರ್ಮಿಕರು ಊರಿಗೆ ತೆರಳಿದರೂ ಕಾಮಗಾರಿ ಸ್ಥಗಿತಗೊಳಿಸದಂತೆ ಎಚ್ಚರವಹಿಸಲಾಗಿದೆ. ಒಳಚರಂಡಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಹಾಗೂ ಮಳೆ ನೀರು ಹಾದು ಹೋಗುವ ಚರಂಡಿಯ ಕಾಮಗಾರಿ, ರಸ್ತೆ

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪ ಇಬ್ಬರ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ತವ್ಯ ನಿರತ ವೈದ್ಯರ ಮೇಲೆ