ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಲಸೆ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಹಂಚಲು ಕರೆಯಲಾದ ಟೆಂಡರ್ ಪ್ರಕ್ರಿಯೆ, ಆಹಾರ ಕಿಟ್ ಗಳ ಕಳಪೆ ಗುಣಮಟ್ಟ ಮತ್ತು ಖರೀದಿಯಲ್ಲಿ ಅವ್ಯವಹಾರ, ರಾಜಕೀಯ ಮಧ್ಯಪ್ರವೇಶ ಕುರಿತು ಲೋಕಾಯುಕ್ತಕ್ಕೆ ದೂರು ಸಲ್ಲಿಸಲು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ಸಿಐಟಿಯು) ನಿರ್ಧರಿಸಿದೆ.
ಮಂಗಳೂರು: ಮಂಗಳೂರು ಕಮಿಷನರೇಟ್ ಹಾಗೂ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 354 ಕೆಜಿ ಮಾದಕ ದ್ರವ್ಯ ವಸ್ತುಗಳನ್ನು ಮುಲ್ಕಿ ಕೊಲನಾಡ್ ಜಂಕ್ಷನ್ ಸಮೀಪದ ಬಯೋ ಮೆಡಿಕಲ್ ವೇಸ್ಟ್ ಟ್ರೀಟ್‌ಮೆಂಟ್ ರೂಮ್‌ನಲ್ಲಿ ಶನಿವಾರ ನಾಶಪಡಿಸಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮಾದಕ ವಸ್ತು ವಿರೋಧಿ ದಿನದ ಪ್ರಯುಕ್ತ ನಡೆಸಿದ ಕಾರ್ಯಾಚರಣೆ ಹಾಗೂ ವಿವಿಧ ಪೊಲೀಸ್
ಮಂಗಳೂರು ಪೊಲೀಸ್ ಕಮೀಷನರ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಮಾದಕದ್ರವ್ಯಗಳಿಗೆ ಸಂಬಂಧಿಸಿ ಸಾಕಷ್ಟು ಪ್ರಕರಣಗಳನ್ನು ಪತ್ತೆಹಚ್ಚಿರುವುದಲ್ಲದೆ, ಪ್ರಮುಖ ಆರೋಪಿಗಳನ್ನೂ ಬಂಧಿಸಲಾಗಿದೆ. ಡ್ರಗ್ಸ್ ಮುಕ್ತ ಮಂಗಳೂರು ಮಾಡುವಲ್ಲಿ ಇಲಾಖೆ ತನ್ನೆಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದು, ಜನರು ಸಹಕರಿಸಬೇಕೆಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಅವರು ಮಂಗಳೂರಲ್ಲಿ ವಿಕೇಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಬಂದೋಬಸ್ತ್‌ಗಳ ವೀಕ್ಷಣೆ ಮಾಡಿ,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 8೦೦೦ ಎಕರೆ ಹಡೀಲು ಭೂಮಿಯಿದ್ದು, ಅಲ್ಲಿ ಕೃಷಿಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸುವುದು ಹಾಗೂ ಸಹಕಾರ ಸಂಸ್ಥೆಯ ಮೂಲಕ ಕೃಷಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಚಿಂತನೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಅವರು ಕುಂಜತ್‌ಬೈಲ್ ಪ್ರದೇಶದ ಮರಕಡ ವಾರ್ಡಿನ ದಿ. ಕಾಂತಣ್ಣ ಶೆಟ್ಟಿ ಕೊಂರ್ಗಿಬೈಲ್ ಅವರ ಹಡೀಲು ಬಿಟ್ಟ ಜಮೀನಿನಲ್ಲಿ ಯಾಂತ್ರೀಕೃತ ಭತ್ತದ ಕೃಷಿಯ ಉದ್ಘಾಟನೆಗೆ ಆಗಮಿಸಿದ
ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಎಂಬ ವಿಚಾರಕ್ಕೆ ಸಂಬಂಧಿಸಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ರಾಜೀನಾಮೆ ಮಾತು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಅವರೇ ಉತ್ತರ ಕೊಡಲಿ, ಅವರು ರಾಜೀನಾಮೆ ಕೊಡೋದು ಏನೂ ಆಗಿಲ್ಲ. ಅವರು ಕಾಂಗ್ರೆಸ್‌ನಲ್ಲಿ ಮೋಸ ಆಯ್ತು ಅಂತ ಬಿಜೆಪಿಗೆ ಬಂದವರು, ಸಿಡಿ ಜಾಲ ಸೇರಿ ಬೇರೆ ಬೇರೆ ಕಾರಣಕ್ಕೆ ಈ ವಿದ್ಯಮಾನ ನಡೀತಿದೆ ಎಂದು
ಕದ್ರಿ ಮಂಜುನಾಥ ಹಾಗೂ ಮಂಗಳಾದೇವಿ ದೇಗುಲದ ಸ್ಥಾಪನೆಗೆ ಮೂಲ ಕಾರಣಿಕರ್ತರು ಈ ಮಹಾನ್ ಯೋಗಿ ಗುರು ಮಚ್ಚೇಂದ್ರನಾಥರು. ಇವರ ಕಾಲ್ಪನಿಕ ಭಾವ ಚಿತ್ರವನ್ನು ಲೀಫ್ ಆರ್ಟ್ ಮುಖಾಂತರ ಯುವ ಕಲಾವಿದ ತಿಲಕ್ ಕುಲಾಲ್ ಮೂಡುಬಿದರೆ ಅವರು ಚಿತ್ರಿಸಿದ್ದಾರೆ. ಅವರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಮಂಗಳೂರು: ಸಮಾಜ ಸೇವೆಗೆ ವಿವಿಧ ಮುಖಗಳು. ಕಷ್ಟ ಕಾರ್ಪಣ್ಯಗಳಿಗೆ ಆಸರೆಯಾಗುವುದರೊಂದಿಗೆ ಸಂತ್ರಸ್ತರಾದವರಲ್ಲಿ ಆತ್ಮ ಸ್ಥೈರ್ಯ ಮೂಡಿಸುವುದೂ ಸಮಾಜಮುಖೀ ಕಾರ್ಯವೆನಿಸುತ್ತದೆ’ ಎಂದು ಕರ್ನಾಟಕ ಜಾನಪದ ಹಾಗೂ ಯಕ್ಷಗಾನ ಮತ್ತು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಹೇಳಿದ್ದಾರೆ. ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು ಅವರ ನೇತೃತ್ವದಲ್ಲಿ ಕೋವಿಡ್ ಸಂತ್ರಸ್ತರಿಗಾಗಿ ನಗರದ ವಿವಿಧ
ಸುರತ್ಕಲ್ ಸಮೀಪದ ಕುಳಾಯಿಯ (ಸದ್ಯ ಸೂರಿಂಜೆ ನಿವಾಸಿ) ಆಟೋ ಚಾಲಕ ಬಶೀರ್ ಮನೆ ಸಾಲದ ಮೇ ತಿಂಗಳ ಕಂತು ಕಟ್ಟಲು ಲಾಕ್ ಡೌನ್, ಕೊರೋನ ಬಿಕ್ಕಟ್ಟಿನಿಂದಾಗಿ ಅಸಾಧ್ಯವಾಗಿದ್ದು. ಸಾಲಕೊಟ್ಟ ಕೆನರಾ ಬ್ಯಾಂಕ್ ಬೈಕಂಪಾಡಿ ಬ್ರಾಂಚ್ ನ ಅಧಿಕಾರಿಗಳಲ್ಲಿ ಮೂರ್ನಾಲ್ಕು ತಿಂಗಳು ಕಂತು ಪಾವತಿಗೆ ವಿನಾಯತಿ ಕೇಳಿದ್ದು, ಅಲ್ಲಿ ಸಕಾರಾತ್ಮಕ ಸ್ಪಂದನೆ ಸಿಗದೆ ಅವರ ಖಾತೆಯಲ್ಲಿದ್ದ 27೦೦ ರೂಪಾಯಿಗಳನ್ನು ಹಾಗೂ ಆಟೋ ಚಾಲಕರಿಗೆ ಕೊರೋನ ಪರಿಹಾರವಾಗಿ ಸರಕಾರ ನೀಡಿದ 3೦೦೦ ರೂಪಾಯಿಗಳನ್ನು
ದಕ್ಷಿಣ ಕನ್ನಡ ಜಿಲ್ಲಾ ಕೋವಿಡ್ ಹೆಲ್ಪ್‌ಲೈನ್‌ನ ವತಿಯಿಂದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯ ಹತ್ತಿರ ಬಿಜೆಪಿ ಸರಕಾರದ ಎಲ್ಲರಿಗೂ ಉಚಿತ ಲಸಿಕೆ ಎಂಬ ಜಾಹೀರಾತು ಹಾಕಿದ ಹೋಲ್ಡಿಂಗ್ ನ ಮುಂಭಾಗ, ಬಿಜೆಪಿ ಸರಕಾರ ಲಸಿಕೆ ಮಾರಾಟ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ನಡೆಯಿತು. ನಗರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲಾ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾಡಳಿತದ ವತಿಯಿಂದ ಪತ್ರಕರ್ತರಿಗೆ ಮತ್ತು ಪತ್ರಕರ್ತರ ಕುಟುಂಬ ಸದಸ್ಯರಿಗೆ ಕೋವಿಶಿಲ್ಡ್ ಲಸಿಕೆ ನೀಡುವ ಶಿಬಿರ ಬುಧವಾರ ಉರ್ವದ ಪತ್ರಿಕಾ ಭವನದಲ್ಲಿ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕೋವಿಡ್ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಎಲ್ಲರೂ ಕೋವಿಡ್ ನಿರೋಧಕ ಲಸಿಕೆಯನ್ನು ಪಡೆದುಕೊಳ್ಳಬೇಕು. ಲಸಿಕೆ


















