Home Posts tagged #mangalore (Page 411)

ಕಲಾವಿದರ ಉಚಿತ ಲಸಿಕಾ ಶಿಬಿರಕ್ಕೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

ಮಂಗಳೂರು : ಜಿಲ್ಲೆಯ ಜನರು ಗಾಬರಿ ಪಡುವ ಅಗತ್ಯವಿಲ್ಲ.  18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಹಂತ ಹಂತವಾಗಿ ಎರಡು ಮೂರು ತಿಂಗಳ ಒಳಗೆ ಲಸಿಕೆ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮಾತ್ ಹೇಳಿದರು. ಅವರು ತುಳು ನಾಟಕ ಕಲಾವಿದರ ಒಕ್ಕೂಟ (ರಿ), ಮಂಗಳೂರು ಇವರ ಆಶ್ರಯದಲ್ಲಿ ಬುಧವಾರ ಕದ್ರಿ ಗೋಕುಲ್ ಸಭಾಂಗಣದಲ್ಲಿ

ದ.ಕ. ಜಿಲ್ಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕು

ದ.ಕ. ಜಿಲ್ಲೆಯಲ್ಲಿ ಇಂದಿನಿಂದ ಅನ್‍ಲಾಕ್ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7ರಿಂದ ಅಪರಾಹ್ನ 2ರವರೆಗೆ ಎಲ್ಲ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಅದರಂತೆ ಜಿಲ್ಲೆಯ ವಾಣಿಜ್ಯ ಚಟುವಟಿಕೆಗಳು ಸುಮಾರು ಎರಡು ತಿಂಗಳ ಬಳಿಕ ಪುನಾರಂಭಗೊಂಡಿದೆ. ಈ ನಡುವೆ ಬಸ್ ಗಳ ಓಡಾಟಕ್ಕೂ ಅವಕಾಶ ಕಲ್ಪಿಸಿದ್ದರಿಂದ ಸರಕಾರಿ ಬಸ್ ಗಳು ಬೆಳಗ್ಗೆಯಿಂದ ಸಂಚಾರ ಆರಂಭಿಸಿವೆ. ಆದರೆ ಬಸ್ಸಿನ ಒಟ್ಟು ಆಸನ ಸಾಮರ್ಥ್ಯದ ಶೇ.50ರಷ್ಟು ಪ್ರಯಾಣಿಕರನ್ನು ಮಾತ್ರ

ಕೋವಿಡ್ ಪ್ಯಾಕೇಜ್‌ಗೆ ಆಗ್ರಹಿಸಿ ಜನಾಗ್ರಹ ಆಂದೋಲನ

ಸಮಗ್ರ ಪ್ಯಾಕೇಜ್ ಮತ್ತು ತುರ್ತು ಕ್ರಮಗಳಿಗಾಗಿ ಒತ್ತಾಯಿಸಿ ಉಸ್ತುವಾರಿ ಮಂತ್ರಿ ಮತ್ತು ಶಾಸಕರುಗಳ ಕಛೇರಿ ಎದುರು ಖಾಲಿ ಚೀಲಗಳನ್ನು ಸುಟ್ಟು ಇಂದು ಜನಾಗ್ರಹ ಆಂದೋಲನವು ಹಮ್ಮಿಕೊಂಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಯ ಭಾಗವಾಗಿ ಮಂಗಳೂರಿನ ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಮಂಗಳೂರು ಪೋಲಿಸರು ಮೊದಲಿಗೆ ಅನುಮತಿ ನಿರಾಕರಿಸಿದರೂ, ಸಂಸದರು ಮತ್ತು ಶಾಸಕರನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿಸುವ ವ್ಯವಸ್ಥೆ

ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು- ಮುನೀರ್ ಕಾಟಿಪಳ್ಳ

 ಮಂಗಳೂರು: ಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ , ನೀರಿನ ಬಿಲ್ಲನ್ನಾದರೂ ಮನ್ನ ಮಾಡಬೇಕೆಂದು ಡಿವೈಎಫ್ಐ ರಾಜ್ಯಾದ್ಯಕ್ಷರಾದ ಮುನೀರ್ ಕಾಟಿಪಳ್ಳ ನಿನ್ನೆ ಡಿವೈಎಫ್ಐ ರಾಜ್ಯಾದ್ಯಂತ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಹಾಗೂ ಮೂರು ತಿಂಗಳ

ಜಪ್ಪಿನಮೊಗರು : ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

ಜಪ್ಪಿನಮೊಗರು ಗ್ರಾಮದ ಕೊಪ್ಪರಿಗುತ್ತು ಎಂಬಲ್ಲಿ ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಎನ್ನುವ ಘಟನೆ ನಡೆದಿದೆ. ಕೊಪ್ಪರಿಗೆಗುತ್ತು ನಿವಾಸಿ ಆರೋಪಿ ವಿಶ್ವನಾಥ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಾಮೀತ್ ಶೆಟ್ಟಿ (25) ಸುಟ್ಟ ಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸಾಕುದನಗಳನ್ನು ಹೊರಗಡೆ ಕಟ್ಟಿಹಾಕಿದ್ದ ಬಗ್ಗೆ

ವಿ4 ನ್ಯೂಸ್‌ಗೆ 16ರ ಸಂಭ್ರಮ: ಕೋವಿಡ್ ವಾರಿಯರ್ಸ್‌ಗಳಿಗೆ ಗೌರವಾರ್ಪಣೆ

ಕರಾವಳಿ ಕರ್ನಾಟಕದಲ್ಲಿ ಮನೆ ಮಾತಾಗಿರುವ ವಿ4ನ್ಯೂಸ್ ವಾಹಿನಿಗೆ 16ರ ಸಂಭ್ರಮ. ಈ ಸಂಭ್ರಮವನ್ನು ಕೋವಿಡ್ ವಾರಿಯರ್ಸ್‌ಗಳಿಗೆ ಗೌರವಾರ್ಪಣೆ ಸಲ್ಲಿಸುವ ಮೂಲಕ ವಿನೂತನವಾಗಿ ಆಚರಿಸಲಾಯಿತು. ಕರಾವಳಿಯಲ್ಲಿ ನಡೆಯುವ ಕ್ಷಿಪ್ರ ಬೆಳವಣಿಗೆಗಳನ್ನು ನೇರಪ್ರಸಾರದಲ್ಲೇ ಅತ್ಯಂತ ವೇಗವಾಗಿ ಪ್ರಸಾರ ಮಾಡುವ ನ್ಯೂಸ್ ಬುಲೆಟಿನ್‌ಗಳು, ಸಮಸ್ಯೆಗಳಿಗೆ ಬೆಳಕು ಚೆಲ್ಲುವ ಡಿಬೇಟ್ ಶೋಗಳು, ಮನರಂಜನಾ ಕಾರ್ಯಕ್ರಮಗಳು, ಕಾಮಿಡಿ ರಿಯಾಲಿಟಿ ಶೋ, ಹೆಲ್ತ್ ಶೋಗಳು, ಶೈಕ್ಷಣಿಕ ಕಾರ್ಯಕ್ರಮಗಳು,

ಡಾ. ಎನ್‌ ಎಸ್‌ ಎಎಂ ಪಿಯು ಕಾಲೇಜಿನಲ್ಲಿ ಯೋಗ ದಿನಾಚರಣೆ

 ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಮಂಗಳೂರಿನ ಡಾ. ಎನ್‌ಎಸ್‌ಎಎಂ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.  ಕಾಲೇಜು ಮತ್ತು ಕಾಲೇಜಿನ ಎನ್‌ಎಸ್‌ಎಸ್ ವತಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಹಲವಾರು ಮಂದಿ ಯೋಗ ಪ್ರದರ್ಶನ ನಡೆಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಮುಖ್ಯ ಶಿಕ್ಷಕ ಜನಾರ್ದನ್, ಪ್ರಧಾನಿ ನರೇಂದ್ರ ಮೋದಿಯ ಆಶಯದಂತೆ ಪ್ರತೀ ವರ್ಷವೂ ಯೋಗ

ದ.ಕ. ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮಧಾಹ್ನ 1ರ ವರೆಗೆ ಅವಕಾಶ: ಜಿಲ್ಲಾಧಿಕಾರಿ

ದ.ಕ.ಜಿಲ್ಲೆಯಲ್ಲಿ ಸೋಮವಾರದಿಂದ ಲಾಕ್‌ಡೌನ್ ಸಡಿಲಿಕೆ ಮಾಡಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ನಾಳೆಯಿಂದ ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ದ.ಕ ಜಿಲ್ಲೆಯಲ್ಲಿ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿದ್ದು, ಅನ್‍ಲಾಕ್ 1.0 ಭಾಗವಾಗಿ ಅಗತ್ಯವಸ್ತುಗಳ ಖರೀದಿಗೆ ಅವಧಿ ವಿಸ್ತರಣೆ

ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದುವೆ: ಎಸಿ ಮದನ್ ಮೋಹನ್ ನೇತೃತ್ವದಲ್ಲಿ ದಾಳಿ

ನಗರದ ಮಂಗಳಾದೇವಿ ದೇವಸ್ಥಾನದ ಸಮೀಪದ ವೇದಿಕೆಯಲ್ಲಿ ಏಕಕಾಲದಲ್ಲಿ ನಾಲ್ಕು ಮದುವೆ ಕಾರ್ಯಕ್ರಮಗಳು ನಡೆಸುತ್ತಿದ್ದ ಸಂದರ್ಭ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ, ಕೇಸು ದಾಖಲಿಸಿದೆ. ನಿಯಮಬಾಹಿರವಾಗಿ ಮದುವೆ ಸಮಾರಂಭ ಆಯೋಜಿಸಿರುವುದಾಗಿ ಬಂದ ದೂರಿನ ಹಿನ್ನೆಲೆ ಈ ದಾಳಿ ನಡೆದಿದೆ. ಪಕ್ಷದ ನಾಯಕರೊಬ್ಬರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು ನಡೆಯುತ್ತಿದ್ದವೆನ್ನಲಾಗಿದೆ. ಮದುವೆ ನೂರಕ್ಕೂ ಹೆಚ್ಚು ಜನರ ಗುಂಪುಗೂಡಿದ್ದರು ಎಂದು

ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಧಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನೀಡಲ್ಪಡುವ ಉಚಿತ ಲಸಿಕಾ ಶಿಬಿರ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಅಶಕ್ತರಿಗೂ ಉಚಿತ ಲಸಿಕೆ ನೀಡಲು ಜಿಲ್ಲಾಡಳಿತ ನಿರ್ಧರಿಸಿದೆ.ಈ ಹಿನ್ನಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ