Home Posts tagged #mangalore (Page 9)

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರ ಕಾರ್ಯಕರ್ತರ ಸಮಾವೇಶ

ಪುತ್ತೂರು: ಭಾರತವನ್ನು ಜಗತ್ತಿಗೇ ನಾಯಕತ್ವ ಸ್ಥಾನದಲ್ಲಿ ನಿಲ್ಲಿಸಿರುವ ನರೇಂದ್ರ ಮೋದಿಯವರ ವಿಚಾರದಲ್ಲಿ ಮೈಮರೆವು ಬೇಡ. ನಮ್ಮ ಗುರಿ, ಉದ್ದೇಶ, ಸಂಕಲ್ಪ, ಶ್ರಮ ಮೋದಿಯವರನ್ನು ಮತ್ತಷ್ಟು ವರ್ಷಗಳ ಕಾಲ ಪ್ರಧಾನಿಯಾಗಿಸುವುದೇ ಆಗಿರಬೇಕು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದ್ದಾರೆ. ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಇಂದು ನಾಮಪತ್ರ ಸಲ್ಲಿಸಿದ್ದು, ಅದಕ್ಕೂ ಮುಂಚಿತವಾಗಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾಮಪತ್ರಕ್ಕೆ ಪೂಜೆಯನ್ನು ಸಲ್ಲಿಸಿದರು. ನಂತರ ನಗರದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಿ ಬಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯ

ಉಡುಪಿ: ಏ.3ರಂದು ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಏಪ್ರಿಲ್ 3ರಂದು ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಲೋಕಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಕೆ.ಜೆ. ಜಾರ್ಜ್ ನಾಮಪತ್ರ ಸಲ್ಲಿಕೆಯ ನೇತೃತ್ವ ವಹಿಸಲಿದ್ದಾರೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರಾದ ಹೆಚ್. ಡಿ ತಮ್ಮಯ್ಯ, ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಟಿಡಿ ರಾಜೇಗೌಡ, ತರೀಕೆರೆ ಶಾಸಕ ಜಿ.ಹೆಚ್ ಶ್ರೀನಿವಾಸ್, ಎರಡು ಜಿಲ್ಲೆಯ ಜಿಲ್ಲಾಧ್ಯಕ್ಷರುಗಳು , ಸ್ಥಳೀಯ

ಉಡುಪಿ: ಏ.3ರಂದು ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಏ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕೇಂದ್ರ ಮಾಜಿ ಸಚಿವ, ಹಿಂದೂ ಫೈರ್ ಬ್ರಾಂಡ್‌ ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ, ಸುನೀಲ್ ಕುಮಾರ್ ಈ ಸಂದರ್ಭದಲ್ಲಿ ಭಾಗಿಯಾಗಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಗುರುರಾಜ್ ಗಂಟಿಹೊಳೆ, ಚಿಕ್ಕಮಗಳೂರಿನ ನಾಲ್ವರು ಮಾಜಿ ಶಾಸಕರು ಕಾರ್ಯಕರ್ತರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಾಮಪತ್ರ

ಪದ್ಮನಾಭ ಸಾವಂತ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯಲಿ: ಕಾಂಗ್ರೆಸ್ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್‌ಟಿಐ

ಮೂಡುಬಿದಿರೆ: ಎ.2ರಿಂದ 5ರವರೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಶ್ರೀ ಕ್ಷೇತ್ರ ಬನ್ನಡ್ಕ

ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ತಾಲೂಕಿನ ವಿಶೇಷವಾದ ಕ್ಷೇತ್ರ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ನೇಮೋತ್ಸವವು ಸಂಭ್ರಮದಿಂದ ನಡೆಯಲಿದೆ.ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರ ನೇತ್ರತ್ವದಲ್ಲಿ ಏ.2 ರಂದು ಬೆಳಿಗ್ಗೆ ನೂತನ ಧ್ವಜಸ್ತಂಭ ಪ್ರತಿಷ್ಠೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಯ ಗಣಹೋಮ ನಡೆಯಲಿದೆ ಎಂದು ಸಮಿತಿಯ

ಕಾಂಗ್ರೆಸ್ ನ ಪದ್ಮರಾಜ್ ಗೆ ಮತ ಹಾಕಿ ಬಿಜೆಪಿಯನ್ನು ಸೋಲಿಸಿ: ಸಿಪಿಐಎಂನ ಯಾದವ ಶೆಟ್ಟಿ ಕರೆ

ಮೂಡುಬಿದಿರೆ: ದ.ಕ.ಜಿಲ್ಲೆಯಲ್ಲಿ ಕಳೆದ 32 ವರ್ಷಗಳಿಂದ ಬಿಜೆಪಿಯ ಸಂಸದರಿದ್ದರು. ಆದರೆ ಜಿಲ್ಲೆಯಲ್ಲಿ ಏನು ಅಭಿವೃದ್ಧಿ ಆಗಿದೆ. ಮನು ಸಂಸ್ಕೃತಿಯನ್ನು ಪ್ರತಿಪಾದಿಸುವ ಬಿಜೆಪಿಯು ಅಧಿಕಾರಕ್ಕೆ ಬರಬಾರದು ಆದ್ದರಿಂದ ನಾವು ಕಾಂಗ್ರೆಸ್ ನ ಪದ್ಮರಾಜ್ ಗೆ ಮತವನ್ನು ಹಾಕಿ ಬಿಜೆಪಿಯನ್ನು ಸೋಲಿಸಬೇಕು ಎಂದು ಸಿಪಿಐಎಂನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ ಕರೆ ನೀಡಿದರು. ಅವರು ಸಮಾಜ ಮಂದಿರದಲ್ಲಿ ನಡೆದ ಸಿಪಿಐಎಂ ಪಕ್ಷದ ಮೂಡುಬಿದಿರೆ ತಾಲೂಕು ಮಟ್ಟದ ರಾಜಕೀಯ

ಪುತ್ತೂರಿನ ಹರ್ಷ ಶೋರೂಂನ ಗೋದಾಮಿನಲ್ಲಿ ಅಗ್ನಿ ಅವಘಡ

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.ಪುತ್ತೂರು ನಗರ ಪೊಲೀಸರು ಸಹಕರಿಸುತ್ತಿದ್ದಾರೆ.

ರಾಜಕೀಯ ಬಿಟ್ಟು ಸಮುದಾಯದ ಗೆಲುವಿಗೆ ಆದ್ಯತೆ : ಸತ್ಯಜಿತ್ ಸುರತ್ಕಲ್

ಲೋಕಸಭಾ ಚುನಾವಣೆಯಲ್ಲಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ಸಭೆಯಲ್ಲಿ ಕೈಗೊಳ್ಳಲಾದ ನಿರ್ಣಯದಂತೆ ಬಿಲ್ಲವ ಸಮಾಜಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ದ.ಕ., ಉಡುಪಿ- ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಬಿಲ್ಲವ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಎಸ್‌ಎನ್‌ಜಿವಿ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ. ಅವರು ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ, ಟೀಂ ಸತ್ಯಜಿತ್ ಸುರತ್ಕಲ್‌ನಲ್ಲಿ

ಪದ್ಮರಾಜ್ ಅವರು ಕಾಂಗ್ರೆಸ್ ಪಕ್ಷದ ಎಲ್ಲರ ಒಮ್ಮತದ ಅಭ್ಯರ್ಥಿ : ಮಾಜಿ ಸಚಿವ ರಮಾನಾಥ ರೈ

ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಎ.3ರಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಉಸ್ತುವಾರಿ ಬಿ.ರಮಾನಾಥ ರೈ ತಿಳಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಮಪತ್ರ ಸಲ್ಲಿಸುವ ಮೊದಲು ಚರ್ಚ್, ಮಸೀದಿ, ದೇವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿ