ಪ್ರಧಾನಿ ಮೋದಿಯವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸಿಗರು ನೀಡಿದ ಅವಹೇಳನಕಾರಿ ಹೇಳಿಕೆಗಳಿಗೆಲ್ಲಾ ನಾವು ದೂರು ನೀಡುತ್ತಾ ಹೋಗಿದ್ದರೆ ಅವರೆಲ್ಲರ ವಿರುದ್ಧ ಹಲವು ಪ್ರಕರಣಗಳಿರುತ್ತಿದ್ದವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ
ಹಲವು ಸಮಯದಿಂದ ಬಾಕಿ ಇರುವ ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಗೃಹ ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ
ಮಂಗಳೂರು ಪಾಲಿಕೆ ವ್ಯಾಪ್ತಿಯ 66 ತಳ್ಳುಗಾಡಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲು ನಿರ್ಧರಿಸಿದ್ದು, ನ. 1ರಂದು ವಿತರಿಸಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಮಂಗಳೂರು ಪಾಲಿಕೆಯಲ್ಲಿ ನಡೆದ ಸಾರ್ವಜನಿಕ ಫೆÇೀನ್-ಇನ್ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ ಮೇಯರ್ ಅವರು, ಒಟ್ಟಾರೆ ಸುಮಾರು 900 ಅರ್ಜಿಗಳು ಬಂದಿದ್ದು, ಮೊದಲ ಹಂತದಲ್ಲಿ ಹೊಸತಾಗಿ 66 ಮಂದಿಗೆ ಗುರುತಿನ ಚೀಟಿ ನೀಡುತ್ತೇವೆ. ತಳ್ಳುಗಾಡಿ ಗುರುತಿನ ಚೀಟಿ ಹೊಂದಿದವರು ನಿಂತು
ಕಟೀಲು ದೇವಸ್ಥಾನ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಭಕ್ತರಿಗೆ ದೇವಿಯ ದರ್ಶನ ಸಮಯ ಬದಲಾವಣೆ ಇಲ್ಲ. ರಾತ್ರಿಯ ಮಹಾಪೂಜೆ ಸಾಯಂಕಾಲ ಆರೂವರೆ ಒಳಗೆ ಮುಗಿಯುತ್ತದೆ. ಗ್ರಹಣದ ಸಮಯ ವಿಶೇಷ ಅಭಿಷೇಕ, ಮಧ್ಯಕಾಲದಲ್ಲಿ ವಿಶೇಷ ಅಭಿಷೇಕ ಇರುತ್ತದೆ. ಗ್ರಹಣ ಸಮಯಕ್ಕೆ ದೇವಿಯ ದರ್ಶನಕ್ಕೆ ತುಪ್ಪ, ಎಣ್ಣೆ ಸಮರ್ಪಣೆಗೆ ಅವಕಾಶ ಇದೆ ಎಂದು ಕ್ಷೇತ್ರದ ಮೂಲಗಳು ತಿಳಿಸಿವೆ
ಬ್ರಾಂಡೆಡ್ ರೆಡಿಮೇಡ್ ವಸ್ತ್ರ ಪ್ರಿಯರಿಗೆ ಶುಭ ಸುದ್ದಿ. ನಗರದ ಟಿ.ಎಂ.ಎ ಪೈ ಕನ್ವೆನ್ಷನ್ ಸೆಂಟರ್‍ನಲ್ಲಿ 4 ದಿನಗಳ ಬ್ರಾಂಡೆಡ್ ಗಾರ್ಮೆಂಟ್ಸ್ ಪ್ರದರ್ಶನ ನಡೆಯುತ್ತಿದೆ. ಅ.27 ರಿಂದ ಅ.30ರವರೆಗೆ ಆಯೋಜಿಸಿದ್ದು, ವಿವಿಧ ಶೈಲಿಯ ಬ್ರಾಂಡೆಡ್ ವಸ್ತ್ರಗಳು ಅತೀ ಕಡಿಮೆ ದರದಲ್ಲಿ ಲಭ್ಯವಿದೆ. ನಗರದ ಟಿ.ಎಂ.ಎ ಪೈ ಕನ್ವೆನ್ಷನ್ ಸೆಂಟರ್‍ನಲ್ಲಿ ಬ್ರಾಂಡೆಡ್ ಗಾರ್ಮೆಂಟ್ಸ್ ಪ್ರದರ್ಶನವನ್ನು ಹಮ್ಮಿಕೊಂಡಿದ್ದಾರೆ. 4 ದಿನಗಳ ಕಾಲ ನಡೆಯಲಿರುವ ಈ
ಮಂಗಳೂರು: ಕುಂದಾಪುರದಿಂದ ಮೈಸೂರ್-ಮಂಡ್ಯ ತೆರಳುವ ದುರ್ಗಾಂಬಾ ಮೋಟಾರ್ಸ್ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್ನಿನಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ಯನ್ನು ತಿಳಿಗೊಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಸೃಷ್ಟಿಯಾದ ಮರಳಿನ ಅಭಾವಕ್ಕೆ ಅಧಿಕಾರಿಗಳೆ ಕಾರಣ ಎಂದು ಸಿವಿಲ್ ಕಾಂಟ್ರಾಕ್ಟರ್ಸ್ ಅಸೋಸಿಯೇಶನ್ ದ.ಕ.ಜಿಲ್ಲಾ ಸಮಿತಿ ಆರೋಪಿಸಿದೆ. ಈ ಸಮಸ್ಯೆಗೆ 10 ದಿನದೊಳಗೆ ಪರಿಹಾರ ಕಲ್ಪಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್‍ನ ಅಧ್ಯಕ್ಷ ಮಹಾಬಲ ಕೊಟ್ಟಾರಿ ದ.ಕ.ಜಿಲ್ಲೆಯಲ್ಲಿ ಮರಳಿನ ಕೊರತೆಯಿಲ್ಲ ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮರಳಿನ ಸಮಸ್ಯೆ
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು 2023 ರ ಅಕ್ಟೋಬರ್ 19 ರಿಂದ 22 ರವರೆಗೆ ಕರ್ನಾಟಕದ ಕಲಬುರಗಿಯಲ್ನಡೆದ ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿಸಿದರು. 6 ನೇ ತರಗತಿ ವಿದ್ಯಾರ್ಥಿನಿ ತಸ್ಮಯಿ ಶೆಟ್ಟಿ 1000 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನೂ, 6ನೇ ತರಗತಿ ವಿದ್ಯಾರ್ಥಿಯುವರಾಜ್ ಡಿ ಕುಂಡರ್ 300 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನು ಪಡೆದಿರುತ್ತಾರೆ.
ಮಂಗಳೂರು ಶಾರದೆ ಎಂದೇ ಪ್ರಸಿದ್ಧಿ ಪಡೆದಿರುವ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ಪೂಜಿಸಲ್ಪಟ್ಟ 101ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಬೃಹತ್ ವಿಸರ್ಜನಾ ಶೋಭಾಯಾತ್ರೆ ವೈಭವದಿಂದ ನಡೆಯಿತು. ಬುಧವಾರ ಸಂಜೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನಕ್ಕೆ ಭಕ್ತಾಧಿಗಳಿಗೆ ಅವಕಾಶ ನೀಡಲಾಗಿದ್ದು, ರಾತ್ರಿ ಮಹಾಮಂಗಳಾರತಿ ಬಳಿಕ ಶ್ರೀ ವೆಂಕಟರಮಣ ದೇವರ ಪ್ರದಕ್ಷಿಣೆ ಬಳಿಕ ಶ್ರೀ ಶಾರದಾ ಮಾತೆಯ ಬೃಹತ್ ವಿಸರ್ಜನಾ ಶೋಭಾಯಾತ್ರೆ
ಮಂಗಳೂರಿನ ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್‍ನ ವಾರದ ವಿಶೇಷ ಮೀಟಿಂಗ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದು, ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್‍ನಲ್ಲಿರುವ ಉದ್ಯಮಿಗಳಿಗೆ ಉತ್ಸಾಹ ತುಂಬಿಸಿದರು. ಮಂಗಳೂರಿನಲ್ಲಿ ಉದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಉದ್ಯಮಿಗಳಿಗಾಗಿಯೇ ಬಿಎನ್‍ಐ ಇನ್‍ಸ್ಪೈಯರ್ ಚಾಪ್ಟರ್ ಆರಂಭವಾಗಿದ್ದು,