Home Posts tagged #mangaluru (Page 16)

ಮಂಗಳೂರು:ರೋಗಿಗಳಲ್ಲಿ ಧನಾತ್ಮಕ ಚಿಂತನೆಗೆ ಓದುವ ಹವ್ಯಾಸ ಪೂರಕ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಮಂಗಳೂರು ,ಅ.18:-ರೋಗಿಗಳಲ್ಲಿ ಧನಾತ್ಮಕ ಚಿಂತನೆಗೆ ಓದುವ ಹವ್ಯಾಸ ಪೂರಕವಾಗಿದೆ ಎಂಬುದಾಗಿ ದ.ಕ ಜಿಲ್ಲಾ ಉಸ್ತುವಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳೂರಿನ ಜಿಲ್ಲಾ ವೆನ್ಲಾಕ್ ಸರಕಾರಿ ಆಸ್ಪತ್ರೆ ಯಲ್ಲಿ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕ ,ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆ ಹಾಗೂ ಯೂತ್

ದಿ.ವೇಣುಗೋಪಾಲರಿಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ ಸಭೆ

ಮಂಗಳೂರು :ಇತ್ತೀಚೆಗೆ ನಿಧನರಾದ ಮೂಡುಬಿದಿರೆ ಪ್ರೆಸ್‌ಕ್ಲಬ್‌ನ ಮಾಜಿ ಅಧ್ಯಕ್ಷ ವೇಣುಗೋಪಾಲ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಬುಧವಾರ ನಗರದ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ನುಡಿನಮನ ಸಲ್ಲಿಸಿದ ಮೂಡುಬಿದಿರೆಯ ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ‘ ಜನಪರ ಕಾಳಜಿಯ ಯುವ ಪತ್ರಕರ್ತ ವೇಣುಗೋಪಾಲ್ ಅವರು ಮೂಡುಬಿದಿರೆ ಪ್ರೆಸ್‌ಕ್ಲಬ್ ಅಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದರು. ಪ್ರೆಸ್‌ಕ್ಲಬ್‌ಗೆ ಸ್ವಂತ ನಿವೇಶನ

ಮಂಗಳೂರು: ಹಿಂದೂಗಳ ಅಂಗಡಿಗೆ ಕೇಸರಿ ಧ್ವಜ ಕಟ್ಟಿದ ವಿಚಾರ: ಬೀದಿ ಬದಿ ವ್ಯಾಪಾರಸ್ಥರ ಸಮನ್ವಯ ಸಮಿತಿಯಿಂದ ಸಚಿವ ದಿನೇಶ್ ಗುಂಡೂರಾವ್‍ಗೆ ದೂರು

ದೇವಸ್ಥಾನದಲ್ಲಿ ದಸರಾ ಉತ್ಸವದ ಸಂದರ್ಭ ವ್ಯಾಪಾರಕ್ಕೆ ಸಂಬಂಧಿಸಿ ಸೌಹಾರ್ದ ಕದಡಲು ಯತ್ನಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಸಹಚರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸೌಹಾರ್ದ ಕದಡದಂತೆ ಕ್ರಮ ಕಾರ್ಯಕ್ರಮ ರೂಪಿಸಬೇಕು ಎಂದು ಒತ್ತಾಯಿಸಿ ದ.ಕ. ಜಿಲ್ಲಾ ಜಾತ್ಯತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆಯು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‍ರಿಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ಸರ್ಕ್ಯೂಟ್ ಹೌಸ್

ಮಂಗಳೂರು: ಅ.21ರಂದು ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದಿಂದ ಪಿಲಿಪರ್ಬ-2023

ಕುಡ್ಲ ಸಾಂಸ್ಕøತಿಕ ಪ್ರತಿಷ್ಠಾನದ ವತಿಯಿಂದ ತುಳು ನಾಡಿನ ಸಂಪ್ರದಾಯುಕ ಕಲೆ ಹುಲಿವೇಷ ಸ್ಪರ್ಧಾ ಕೂಡ ಕುಡ್ಲದ ಪಿಲಿಪರ್ಬ-2023 ಕಾರ್ಯಕ್ರಮ ಅಕ್ಟೋಬರ್ 21ರಂದು ನಗರದ ಕೇಂದ್ರ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದರು.ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಮತ್ತು ತನ್ನ ನೇತೃತ್ವದಲ್ಲಿ ಕಳೆದ ವರ್ಷ ಯಶಸ್ವಿಯಾಗಿ ಕುಡ್ಲದ ಪಿಲಿಪರ್ಬ ಆಯೋಜಿಸಿದ್ದು, ಅದರ ಮುಂದುವರಿದ

ಮಂಗಳೂರು: ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ಪಿಲಿತ ರಾಪಟ

ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೋಡಕ್ಷನ್ ವತಿಯಿಂದ ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 24ರಂದು ಪಿಲಿತ ರಾಪಟವನ್ನು ಹಮ್ಮಿಕೊಂಡಿದ್ದಾರೆ. ಯುವ ಸಂಗಮ ಕುದ್ರೋಳಿ ಮತ್ತು ಶಿವ ಫ್ರೆಂಡ್ಸ್ ಬರ್ಕೆ ಪಿಲಿತ ರಾಪಟ ನಡೆಯಲಿದೆ. ಮಂಗಳೂರಿನ ಬಿಜೈ ಕಾಪಿಕಾಡ್‍ನ ಕೊಟ್ಟಾರ 2ನೇ ಅಡ್ಡರಸ್ತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಮಂಗಳೂರು: ಹಿಂದೂ ವ್ಯಾಪಾರಸ್ಥರ ಅಂಗಡಿಗಳಿಗೆ ಕೇಸರಿ ಪತಾಕೆ ಕಟ್ಟಿದ ವಿಹಿಂಪ ಕಾರ್ಯಕರ್ತರು

ಮಂಗಳೂರಿನ ದೇವಸ್ಥಾನದಲ್ಲಿ ಸಂತೆ ವ್ಯಾಪಾರಕ್ಕೆ ಜಿಲ್ಲಾಡಳಿತ ಸೂಚನೆಯಂತೆ ಎರಡನೇ ಬಾರಿ ಹರಾಜು ನಡೆಸಿ ಅನ್ಯ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ನೀಡಿದ್ದನ್ನು ಹಿಂದೂ ಸಂಘಟನೆಗಳು ಖಂಡನೆ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ನೇತೃತ್ವದಲ್ಲಿ ಸ್ಥಳಕ್ಕೆ ಬಂದ ಕಾರ್ಯಕರ್ತರು, ಹಿಂದು ವ್ಯಾಪಾರಸ್ಥರು ನಡೆಸುವ ಅಂಗಡಿಗಳಿಗೆ ಕೇಸರಿ ಪತಾಕೆಯನ್ನು ಹಾಕಿದ್ದಾರೆ. ಇದೇ ವೇಳೆ ಮಾತನಾಡಿದ ಶರಣ್ ಪಂಪ್ವೆಲ್, ಇವತ್ತು ಎಲ್ಲಾ ಅಂಗಡಿಗಳಿಗೆ

ವಾಮಂಜೂರು: ಸಿಡಿಲು ಬಡಿದು ಮನೆಗೆ ಹಾನಿ

ಮಂಗಳೂರು: ನಗರ ಹೊರವಲಯದ ವಾಮಂಜೂರು ಅಮೃತ ನಗರದಲ್ಲಿ ಸಿಡಿಲು ಬಡಿದು ಮನೆಗೆ ಹಾನಿಯಾದ ಘಟನೆ ನಡೆದಿದೆ.ಗೋಪಾಲ ಪೂಜಾರಿ ಎಂಬವರ ಮನೆಗೆ ಸಿಡಿಲು ಬಡಿದಿದೆ ಎಂದು ತಿಳಿದು ಬಂದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ಶಾರ್ಟ್ ಸರ್ಕ್ಯುಟ್‍ನಿಂದ ಸ್ವಿಚ್ ಬೋರ್ಡ್ ಹಾಗೂ ಮೀಟರ್ ಬಾಕ್ಸ್ ಗೆ ಹಾನಿಯಾಗಿದೆ. ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ ಮಗುವಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂದರ್ಭ ಮನೆಯಲ್ಲಿ

Mangaluru – 3D Tiger Face Mode ಹುಲಿವೇಷಕ್ಕೆ ಹೈಲೆಟ್ ಆಯ್ತು 3ಡಿ ಟೈಗರ್ ಫೇಸ್ ಮೌಲ್ಡ್

ದಸರಾ ಬಂತೆಂದರೆ ಎಲ್ಲೆಡೆ ಸಂಭ್ರಮದ ವಾತಾವರಣ…. ಅದರಲ್ಲೂ ಕರಾವಳಿಯಲ್ಲಿ ಹುಲಿವೇಷದ್ದೇ ಕಾರುಬಾರು, ಹುಲಿವೇಷಕ್ಕೆ ಹೈಲೆಟ್ ಆಗಿರುವುದು ಹುಲಿಮುಖದ ಆಕಾರ….ಅದಕ್ಕಾಗಿಯೇ ಮಂಗಳೂರಿನ ಯುವಕನೋರ್ವ 3ಡಿ ಟೈಗರ್ ಫೇಸ್ ಮೌಲ್ಡ್ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹಾಗಾದ್ರೆ ಆತ ಯಾರು ಎನ್ನುವ ಕುತೂಹಲ ನಿಮ್ಮಲ್ಲಿದ್ರೆ. ಈ ಸ್ಟೋರಿ ನೋಡಿ.. ಇವ್ರ ಹೆಸರು ಅನಿಲ್ ಕುಮಾರ್, ಮಂಗಳೂರಿನ ಕೋಡಿಕಲ್ ನಿವಾಸಿಯಾಗಿರುವ ಇವರು ಬೈಕಂಪಾಡಿಯ ಪ್ರೈಮಸಿ ಕಂಪನಿಯಲ್ಲಿ ಗ್ರಾಫಿಕ್ಸ್

ಸಾಮರಸ್ಯ ಸಾರಿದ ಮಂಗಳೂರು ದಸರಾ : ಬಿಷಪ್ ಲಾರೆನ್ಸ್ ಮುಕುಝಿ

ಒಂದೇ ಜಾತಿ ಒಂದೇ ಮತ ಒಂದೇ ದೇವರು ಜಗತ್ತಿಗೆ ಪರಿಚಯಿಸಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಐತಿಹಾಸಿಕ ದಸರಾ ಮಹೋತ್ಸವದಲ್ಲಿ ಸೋಮವಾರ

ಮಂಗಳೂರಿನಲ್ಲಿ ದಸರಾ ನೈಟ್ ಮ್ಯಾರಥಾನ್ ಸ್ಪರ್ಧೆ

ಮಂಗಳೂರು ದಸರಾ ಮಹೋತ್ಸವ ಪ್ರಯುಕ್ತ ಝೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ಕುದ್ರೋಳಿ ಕ್ಷೇತ್ರದ ಸಹಯೋಗದಲ್ಲಿ ಆಯೋಜಿಸಲಾದ ನೈಟ್ ಮ್ಯಾರಥಾನ್ ಸ್ಪರ್ಧೆ ನಡೆಯಿತು. ಸ್ಪರ್ಧೆಗೆ ಸಹಾಯಕ ಪೊಲೀಸ್ ಆಯುಕ್ತರಾದ ಮಹೇಶ್ ಕುಮಾರ್ ಅವರು ಚಾಲನೆ ನೀಡಿದರು. ಕುದ್ರೋಳಿ ಕ್ಷೇತ್ರ ದ ಪ್ರಧಾನ ದ್ವಾರದಿಂದ ಮಣ್ಣಗುಡ್ಡ, ನಾರಾಯಣಗುರು ಸರ್ಕಲ್, ಎಂ.ಜಿ. ರಸ್ತೆ, ಪಿವಿಎಸ್, ಕೆ.ಎಸ್.ರಾವ್ ರಸ್ತೆ, ಹಂಪನಕಟ್ಟೆ, ಕ್ಲಾಕ್ ಟವರ್, ಅಳಕೆ ಯಾಗಿ ಮರಳಿ ಕುದ್ರೋಳಿ ಕ್ಷೇತ್ರಕ್ಕೆ ಆಗಮಿಸುವ