ಉಳ್ಳಾಲ ಕ್ಷೇತ್ರವನ್ನು ಮುಂದಿನ 30-40 ವರ್ಷಗಳ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಡಿಯುವ ನೀರು, ರಸ್ತೆ, ವಿದ್ಯುತ್ ಮೂಲಭೂತ ಸೌಕರ್ಯವನ್ನು ಒದಗಿಸುವ ಮೂಲಕ, ಮಂಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಸಿದ್ಧಪಡಿಸಲಾಗುವುದು ಎಂದು ವಿಧಾನ ಸಭೆಯ ಸ್ಪೀಕರ್, ಸ್ಥಳೀಯ ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ನಗರದ ಸರ್ಕ್ಯೂಟ್
ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಬ್ಯಾನರ್ ಅಡಿಯಲ್ಲಿ ತಯಾರಾದ “ಅಸ್ಮಿತಾಯ್” ಚಲನಚಿತ್ರವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ ಎಂದು ಚಿತ್ರ ಬರಹಗಾರ ಎರಿಕ್ ಒಝೆರಿಯೊ ತಿಳಿಸಿದಿದ್ದಾರೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆಯ, ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ
ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯು ಸಂಭ್ರಮ-ಸಡಗರದೊಂದಿಗೆ ಸಂಪನ್ನಗೊಂಡಿತು. ಭಕ್ತರು ಇಸ್ಕಾನ್ ಮಂದಿರಕ್ಕೆ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶ್ರೀಕೃಷ್ಣ ದೇವರಿಗೆ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಸಿಹಿ ನೀರು ಮತ್ತು ತಾಜಾ ರಸಗಳಂತಹ ಮಂಗಳಕರ ಪದಾರ್ಥಗಳೊಂದಿಗೆ ವಿದ್ಯುಕ್ತವಾಗಿ ಅಭಿಷೇಕವನ್ನು ಮಾಡಲಾಯಿತು.
ಸುರತ್ಕಲ್: ಅನುದಾನ ಸಿಗದೇ ಆಶ್ರಯ ಮನೆ ಪೂರ್ಣಗೊಂಡಿಲ್ಲ. ಆರ್ಥಿಕ ಸಂಕಷ್ಟದಿಂದಾಗಿ ಬಾಡಿಗೆ ಮನೆಯಲ್ಲಿ ಇರುವುದೂ ಸಾಧ್ಯವಾಗುತ್ತಿಲ್ಲ. ಹೃದಯ ಖಾಯಿಲೆಯಿಂದ ಬಳಲುತ್ತಿದ್ದು ಕೆಲಸ ಮಾಡಲೂ ಆಗುತ್ತಿಲ್ಲ. ನಮಗೆ ಎಪಿಎಲ್ ಕಾರ್ಡು ಬದಲು ಬಿಪಿಎಲ್ ಮಾಡಿ ಕೊಡಿ ಎಂದು ಕೆಲ ಮಹಿಳೆಯರು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮನವಿಗಳನ್ನು ಸ್ವೀಕರಿಸಿ ಮಾತನಾಡಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ
ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ವರನ್ನು ವರ್ಗಾವಣೆ ಮಾಡಲಾಗಿದ್ದು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕುಲದೀಪ್ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದು ಜನರ
ಮಂಗಳೂರು, : ‘ರಂಗ್’ ತುಳು ಚಲಚಿತ್ರದ ನಿರ್ಮಾಪಕರಾದ ದೇವದಾಸ್ (ದೇವು ) ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.
ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ. ಹೌದು.,.ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸೆ.5ರಿಂದ 12ರವರೆಗೆ ಚಿನ್ನಾಭರಣಗಳ ಮೇಲೆ ಪ್ರತಿ ಗ್ರಾಂ ಮೇಲೆ ರೂ 100 ವಿಶೇಷ ರಿಯಾಯಿತಿ
ಮಂಗಳೂರಿನ ಗರೋಡಿ ಸಮೀಪದಲ್ಲಿ ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಶುಭಾರಂಭಗೊಂಡಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಅನ್ನು ಉದ್ಘಾಟಿಸಿದರು. ತದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಿಕಾಸ ಪ್ಲೈಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕರು.ಮಂಗಳೂರು ನಗರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಹಾಗಾಗಿ ಇಂತಹ ಉದ್ದಿಮೆಗಳು ನಗರಕ್ಕೆ ಇನ್ನಷ್ಟು
ಮಂಗಳೂರಿನ ಮೆರಿಹಿಲ್‍ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ. ಇದೀಗ ಮಕ್ಕಳಿಗಾಗಿ ಆನ್ಲೈನ್
ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ವತಿಯಿಂದ ಸಾಮೂಹಿಕ ಸಮುದ್ರ ಪೂಜೆಯು ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ನಡೆಯಿತು.ಪ್ರತೀ ಗ್ರಾಮದಿಂದ ಸಂಗ್ರಹಿಸಿದ ಹಾಲು, ತೆಂಗಿನಕಾಯಿಗಳನ್ನು ಶ್ರೀ ಬ್ರಹ್ಮ ಬೊಬ್ಬರ್ಯ ದೈವಸ್ಥಾನದಲ್ಲಿರಿಸಿ, ಪ್ರಾರ್ಥನೆ ಸಲ್ಲಿಸಿ ನಂತರ ಭಜನೆಯೊಂದಿಗೆ ಕಡಲ ಕಿನಾರೆಗೆ ಆಗಮಿಸಿ ಗಂಗಾ ಮಾತೆಗೆ ಸಮರ್ಪಣೆ ಮಾಡಲಾಯಿತು. ಮುಂದಿನ ಮೀನುಗಾರಿಕೆಯ ಅವಧಿಯಲ್ಲಿ ಮೀನುಗಾರರಿಗೆ ಒಳಿತಾಗಲಿ ಎಂದು ಕದ್ರಿ ಜೋಗಿ ಮಠದ ಶ್ರೀ ರಾಜಯೋಗಿ ನಿರ್ಮಲನಾಥ್ ಜೀ ಮಹರಾಜ್