ಸರಕಾರಿ ಶಾಲೆಗಳೆಂದರೆ ಅಸಡ್ಡೆಯೇ ಜಾಸ್ತಿ. ಯಾಕೆಂದರೆ ಆ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಸಹಿತ ಹೆಚ್ಚಿನ ವ್ಯವಸ್ಥೆಗಳು ಸರಿಯಾಗಿರುವುದಿಲ್ಲ. ಆದರೆ ಈ ಮಾತನ್ನು ಸುಳ್ಳಾಗಿಸುತ್ತಿದೆ ಮಂಗಳೂರು ಹೊರ ವಲಯದ ಈ ಶಾಲೆ. ಅಷ್ಟಕ್ಕೂ ಆ ಶಾಲೆ ಯಾವುದು? ಅಲ್ಲಿನ ವಿಶೇಷತೆಗಳೇನು? ಈ ಸ್ಟೋರಿ ನೋಡಿ… ಸುಸಜ್ಜಿತ ಕಟ್ಟಡ. ಗುಣಮಟ್ಟದ ಪೀಠೋಪಕರಣಗಳು. ಆಕರ್ಷಣೀಯ ಕ್ಲಾಸ್ ರೂಂ…..
“ನಾವೆಲ್ಲರೂ ಕಾನಾಟಿ (ಅರ್ಥಾತ್ ದಪ್ಪ ಕನ್ನಡಕ ಧರಿಸುವ) ಅಜ್ಜ ಎಂದೇ ಕರೆಯುತಿದ್ದ ನಮ್ಮಜ್ಜ ಲೂವಿಸ್ ಕಣ್ಣಪ್ಪನವರಿಂದಲೇ ನನ್ನ ಬರವಣಿಗೆಗೆ ಮೊದಲ ಪ್ರೇರಣೆ ದೊರೆಯಿತು. ಸ್ವಾತಂತ್ರ್ಯ ಪೂರ್ವದಲ್ಲಿ ಮದ್ರಾಸ್‌ವಿದ್ಯಾನಿಲಯದಿಂದ ಇಂಗ್ಲಿಷ್ ಸಾಹಿತ್ಯದಲ್ಲಿ ಎಮ್.ಎ. ಮತ್ತು ಎಲ್. ಟಿ. ಪದವಿ ಪಡೆದಿದ್ದ ಲೂವಿಸ್ ಕಣ್ಣಪ್ಪನವರು ಮಂಗಳೂರು ಹಂಪನಕಟ್ಟೆಯ ಸರಕಾರಿ ಕಾಲೇಜಿನಲ್ಲಿ (ಇಂದಿನ ವಿಶ್ವವಿದ್ಯಾನಿಲಯ ಕಾಲೇಜು) ಪ್ರಾಂಶುಪಾಲರಾಗಿ, ನಂತರ ದಕ್ಷಿಣ ಕನ್ನಡ
ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ.ಶಂಸುಲ್ ಇಸ್ಲಾಂ ಅವರ ಉಪನ್ಯಾಸ ಕಾರ್ಯಕ್ರಮವನ್ನು ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜು ವಿದ್ಯಾರ್ಥಿಗಳ ಹೊರತಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಕಾರ್ಯಕ್ರಮದ ವಿರುದ್ಧ ಘೋಷಣೆ ಕೂಗಿದ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವ ಸಾಕ್ಷರತಾ ದಿನಾಚರಣೆ ಕಾರ್ಯಕ್ರಮವು ನಗರದ ಡಾ. ಬಿ.ಆರ್ ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು. ತದ ಬಳಿಕ ಮಾತನಾಡಿ ಅವರು, ಮಕ್ಕಳಿಗೆ ಶಿಕ್ಷಣದ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಕೆಲಸ ಸಾಕ್ಷರತೆಯ ಮೂಲಕ ನಡೆಯುತ್ತಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಡಯೆಟ್‍ನಾ ಪ್ರಾಂಶುಪಾಲಾರದ ರಾಜಲಕ್ಷ್ಮಿ, ಜನ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಶೀನ ಶೆಟ್ಟಿ, ವಯಸ್ಕರ ಶಿಕ್ಷಣಧಿಕಾರಿ
ಉಳ್ಳಾಲ ಕ್ಷೇತ್ರವನ್ನು ಮುಂದಿನ 30-40 ವರ್ಷಗಳ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕುಡಿಯುವ ನೀರು, ರಸ್ತೆ, ವಿದ್ಯುತ್ ಮೂಲಭೂತ ಸೌಕರ್ಯವನ್ನು ಒದಗಿಸುವ ಮೂಲಕ, ಮಂಗಳೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರೋಡ್ ಮ್ಯಾಪ್ ಸಿದ್ಧಪಡಿಸಲಾಗುವುದು ಎಂದು ವಿಧಾನ ಸಭೆಯ ಸ್ಪೀಕರ್, ಸ್ಥಳೀಯ ಶಾಸಕ ಯು.ಟಿ. ಖಾದರ್ ತಿಳಿಸಿದ್ದಾರೆ. ಅವರು ನಗರದ ಸರ್ಕ್ಯೂಟ್ ಹೌಸ್‍ನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಮಂಗಳೂರು ಕ್ಷೇತ್ರದಲ್ಲಿ ವಿದ್ಯುತ್
ಕೊಂಕಣಿಯ ಕಲೆ, ಸಾಹಿತ್ಯ, ಸಂಸ್ಕೃತಿಯ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆ ಮಾಡಿದ, ಗಿನ್ನೆಸ್ ದಾಖಲೆ ಬರೆದ ಪ್ರಮುಖ ಸಾಂಸ್ಕೃತಿಕ ಸಂಘಟನೆ ಮಾಂಡ್ ಸೊಭಾಣ್ ಬ್ಯಾನರ್ ಅಡಿಯಲ್ಲಿ ತಯಾರಾದ “ಅಸ್ಮಿತಾಯ್” ಚಲನಚಿತ್ರವು ಸೆಪ್ಟೆಂಬರ್ 15 ರಂದು ತೆರೆ ಕಾಣಲಿದೆ ಎಂದು ಚಿತ್ರ ಬರಹಗಾರ ಎರಿಕ್ ಒಝೆರಿಯೊ ತಿಳಿಸಿದಿದ್ದಾರೆ. ಎರಿಕ್ ಒಝೇರಿಯೊ ಬರೆದ ಮೂಲಕತೆಗೆ ಜೊಯೆಲ್ ಪಿರೇರಾ ಚಿತ್ರಕತೆ ಮತ್ತು ಸಂಭಾಷಣೆಯ, ಯುವ ನಿರ್ದೇಶಕ ವಿಲಾಸ್ ರತ್ನಾಕರ್ ಕ್ಷತ್ರಿಯ
ಮಂಗಳೂರಿನ ಪಿವಿಎಸ್ ಕಲಾಕುಂಜದಲ್ಲಿರುವ ಇಸ್ಕಾನ್ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯು ಸಂಭ್ರಮ-ಸಡಗರದೊಂದಿಗೆ ಸಂಪನ್ನಗೊಂಡಿತು. ಭಕ್ತರು ಇಸ್ಕಾನ್ ಮಂದಿರಕ್ಕೆ ಭೇಟಿ ನೀಡಿ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಶ್ರೀಕೃಷ್ಣ ದೇವರಿಗೆ ಹಾಲು, ಮೊಸರು, ತುಪ್ಪ, ಜೇನುತುಪ್ಪ, ಸಿಹಿ ನೀರು ಮತ್ತು ತಾಜಾ ರಸಗಳಂತಹ ಮಂಗಳಕರ ಪದಾರ್ಥಗಳೊಂದಿಗೆ ವಿದ್ಯುಕ್ತವಾಗಿ ಅಭಿಷೇಕವನ್ನು ಮಾಡಲಾಯಿತು.
ಸುರತ್ಕಲ್: ಅನುದಾನ ಸಿಗದೇ ಆಶ್ರಯ ಮನೆ ಪೂರ್ಣಗೊಂಡಿಲ್ಲ. ಆರ್ಥಿಕ ಸಂಕಷ್ಟದಿಂದಾಗಿ ಬಾಡಿಗೆ ಮನೆಯಲ್ಲಿ ಇರುವುದೂ ಸಾಧ್ಯವಾಗುತ್ತಿಲ್ಲ. ಹೃದಯ ಖಾಯಿಲೆಯಿಂದ ಬಳಲುತ್ತಿದ್ದು ಕೆಲಸ ಮಾಡಲೂ ಆಗುತ್ತಿಲ್ಲ. ನಮಗೆ ಎಪಿಎಲ್ ಕಾರ್ಡು ಬದಲು ಬಿಪಿಎಲ್ ಮಾಡಿ ಕೊಡಿ ಎಂದು ಕೆಲ ಮಹಿಳೆಯರು ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮನವಿಗಳನ್ನು ಸ್ವೀಕರಿಸಿ ಮಾತನಾಡಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ
ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ವರನ್ನು ವರ್ಗಾವಣೆ ಮಾಡಲಾಗಿದ್ದು ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕುಲದೀಪ್ ಅವರು ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದು ಜನರ
ಮಂಗಳೂರು, : ‘ರಂಗ್’ ತುಳು ಚಲಚಿತ್ರದ ನಿರ್ಮಾಪಕರಾದ ದೇವದಾಸ್ (ದೇವು ) ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.




























