ಮಂಗಳೂರಿನ ಕದ್ರಿ ಸಮೀಪದ ಬಟ್ಟಗುಡ್ಡೆ ಬಳಿ ಕಾರು ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಸುಮಾರು 12.30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸರ್ಕಿಟ್ ಹೌಸ್ ಕಡೆಯಿಂದ ಬಿಜೈ ಕಡೆಗೆ ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಮೇಲೇರಿ ವಿದ್ಯುತ್
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಡಾ.ಜಿ. ಸಂತೋಷ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಕೃಷ್ಣಮೂರ್ತಿ ಅವರು ನಗರಾಭಿವೃದ್ಧಿ ಇಲಾಖೆ ಉಪಕಾರ್ಯದರ್ಶಿ ಹುದ್ದೆಗೆ ವರ್ಗವಾದ ಬಳಿಕ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಎನ್.ಮಾಣಿಕ್ಯ ಅವರು ಪ್ರಭಾರ ನೆಲೆಯಲ್ಲಿ ಈ ಹೊಣೆ ನಿಭಾಯಿಸುತ್ತಿದ್ದರು.ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ
ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ 24ನೇ ಚಾತುರ್ಮಾಸ್ಯವು ಶ್ರೀವಜ್ರದೇಹಿ ಮಠದಲ್ಲಿ ಸಂಪನ್ನಗೊಂಡಿತು. ಪೂಜ್ಯ ಶ್ರೀಗಳು ಮೃತ್ತಿಕಾ ಪೂಜೆಯನ್ನು ನೆರವೇರಿಸಿದರು. ವ್ಯಾಸ ಪೂಜೆ ಮತ್ತು ಪಟ್ಟದ ದೇವರ ಮಹಾ ಪೂಜೆಯನ್ನು ನೆರವೇರಿಸಿದರು. ಅನಂತರ ಭಕ್ತರು ಈ ಸತ್ಕರ್ಮದಲ್ಲಿ ಪಾಲ್ಗೊಂಡಿದ್ದರು.
ಧರ್ಮದ ವಿಚಾರ, ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ರೀತಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಎಚ್ಚರಿಸಿದ್ದಾರೆ. ಈಗಾಗಲೇ ಕಳೆದ ಒಂದು ತಿಂಗಳಲ್ಲಿ ಈ ರೀತಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 21 ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಟ್ಸಪ್, ಫೇಸ್ಬುಕ್, ಇನ್ ಸ್ಟಾ ಗ್ರಾಮ್, ಟ್ವಿಟರ್ ಇನ್ನಿತರ ಜಾಲತಾಣದಲ್ಲಿ ಪೋಸ್ಟ್ ಹಾಕುವ ಬಗ್ಗೆ ಪೊಲೀಸ್ ಇಲಾಖೆ ನಿಗಾ ಇಡುತ್ತದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಯುತ್ತಿದೆ. ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಮಂಗಳೂರು ನಗರ ಸಮಿತಿಯ ನೇತೃತ್ವದಲ್ಲಿ ನಗರದ ಪುರಭವನದ ಎದುರಿನ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಮಾಜಿ ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ನಡೆಯುತ್ತಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಹಾರಾರ್ಪಣೆ ಮಾಡುವ ಮೂಲಕ
ಕಿನ್ನಿಗೋಳಿ ಸಮೀಪದ ಕಿಲೆಂಜೂರು ನಿವಾಸಿ ದನಂಜಯ ದೇವಾಡಿಗ ಅವರ ಪತ್ನಿ ಮಮತ ಅವರು ಕಳೆದ ಕೆಲ ತಿಂಗಳಿಂದ ಮೈಲೋಯ್ಡ್ ಲ್ಯುಕೇಮಿಯಾ ಕಾಯಿಲೆಯಿಂದ ಬಲಳುತ್ತಿದ್ದಾರೆ. ಮುಂಬೈಯಲ್ಲಿ ಬದುಕು ಸಾಗಿಸುತ್ತಿರುವ ಇವರು ಚಿಕಿತ್ಸೆಗಾಗಿ ಹಣವಿಲ್ಲದೆ ಪರದಾಡುವಂತಾಗಿದೆ. ಮುಂಬೈಯ ಅಸ್ಪತ್ರೆಯಲ್ಲಿ ದಾಖಲಾಗಿದ್ದು ಚಿಕಿತ್ಸೆಗಾಗಿ ತನ್ನಲ್ಲಿರುವ ಸರ್ವಸ್ವವನ್ನೂ ತ್ಯಾಗ ಮಾಡಿದ್ದಾರೆ. ಇದುವರೆಗೆ ಸುಮಾರು 65 ಲಕ್ಷ ರೂಪಾಯಿ ಖರ್ಚು ಮಾಡಿದ್ದು, ದಾನಿಗಳ, ಮಹರಾಷ್ಟ್ರ ಸರಕಾರ ಅಲ್ಲದೆ
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಬಗ್ಗೆ ಇರುವ ಸಾಧಕ-ಭಾದಕಗಳ ಬಗ್ಗೆ ಮಂಗಳೂರು ಧರ್ಮಕೇಂದ್ರ ಕೈಸ್ತ ಮುಖಂಡರು ಸಭೆ ಸೇರಿ ಚರ್ಚಿಸಿದರು.ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಡಿಕುನ್ಹಾ ರವರು ಸವಿಸ್ತಾರವಾಗಿ ವಿಷಯವನ್ನು ಸಭೆಗೆ ಮಂಡಿಸಿದರು. ಹಿರಿಯ ಬರಹಗಾರಾ ಹಾಗೂ ಸೆವಕ್ ವಾಡಿಚಿ ಪತ್ರಿಕೆಯ ಸಂಪಾದಕ ವಂದನೀಯ ಚೇತನ್ ಲೋಬೊ ಪ್ರತಿಕ್ರಿಯೆ ನೀಡಿದರು. ಸಭಾ ಪಾಲಕರಾದ ಖ್ಯಾತ ವಕೀಲರಾದ ಎಂ. ಪಿ. ನೊರೊನ್ಹಾರವರು ವಿವಿಧ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳಂಜದಲ್ಲಿ ಶನಿವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ 12.90 ಸೆಂ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲೇ ಅತ್ಯಧಿಕ. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ, 10.40 ಸೆಂ.ಮೀ., ಕುಕ್ಕೇಡಿಯಲ್ಲಿ 10.25 ಸೆಂ.ಮೀ. ಪಡಂಗಡಿ, ಮಾಲಾಡಿ ಮತ್ತು ಲಾಯಿಲದಲ್ಲಿ ತಲಾ 9.50 ಸೆಂ.ಮೀ.ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ ಬಾಳದಲ್ಲಿ 11.30 ಸೆಂಮೀ, ಕಿನ್ನಿಗೋಳಿಯಲ್ಲಿ 9.25, ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟುವಿನಲ್ಲಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ತೀವ್ರ ಮಳೆ ಬೀಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ ಶ್ರೀ ನಳಿನ್ ಕುಮಾರ್ ಕಟೀಲು ಅವರು ಇಂದು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾನ್ಯ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ
ಮಂಗಳೂರು, :- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ವ್ಯಾಪಕ ಮಳೆಯಾಗುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.7ರ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ