ಮಳೆ ನೀರಿಗೆ ಬಿದ್ದು ಸಾವನ್ನಪ್ಪಿದ ಸೋಮೇಶ್ವರ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ (52) ಕುಟುಂಬಸ್ಥರಿಗೆ ಪ್ರಾಕೃತಿಕ ವಿಕೋಪದಡಿ ರೂ.5 ಲಕ್ಷ ಪರಿಹಾರವನ್ನು ಕಂದಾಯ ಇಲಾಖೆಯು ನೀಡಿದೆ. ಘಟನಾ ಸ್ಥಳಕ್ಕೆ ತಹಶೀಲ್ದಾರ್ ಪ್ರಭಾಕರ್ ಖರ್ಜುರೆ, ಕಂದಾಯ ನಿರೀಕ್ಷಕರು ಮಂಜುನಾಥ್ ಕೆ.ಹೆಚ್, ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಶವಮಹಜರು
ಮಂಗಳೂರಿನಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ. ಕೆಲವೆಡೆ ಮಳೆಯಿಂದಾಗಿ ಹಾನಿ ಸಂಭವಿಸುತ್ತಿದೆ. ಮಂಗಳೂರಿನ ಬಿಕರ್ನಕಟ್ಟೆಯಲ್ಲಿ ಕಟ್ಟಡದ ಮೇಲಿದ್ದ ಜಾಹೀರಾತು ಹೋರ್ಡಿಂಗ್ ಬಿದ್ದು 12ಕ್ಕೂ ಹೆಚ್ಚು ವಾಹನಗಳಿಗೆ ಹಾನಿಯಾಗಿರುವ ಘಟನೆ ನಡೆದಿದೆ. ಬಿಕರ್ನಕಟ್ಟೆಯಲ್ಲಿನ ಕಟ್ಟಡದಲ್ಲಿದ್ದ ಜಾಹೀರಾತು ಹೋರ್ಡಿಂಗ್ ಕಟ್ಟಡದ ಪಾರ್ಶ ಸಮೇತ ಬಿದ್ದಿದೆ. ಪರಿಣಾಮ ಕೆಳಗಡೆ ನಿಲ್ಲಿಸಿದ್ದ 12 ವಾಹನಗಳು ಜಖಂಗೊಂಡಿವೆ. ವಿದ್ಯುತ್ ಕಂಬ ಕೂಡ ಮುರಿದು ಬಿದ್ದಿದೆ.
ಕಳೆದು ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡಿದ್ದ ಗ್ರಾಮಸ್ಥರು ಇಂದು ಗುರುಪುರ ಗ್ರಾಮಸಭೆ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ. ಗುಡ್ಡ ಕುಸಿತದಿಂದ 11 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಪರಿಹಾರ ಒದಗಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ. ಪರಿಹಾರ ಒದಗಿಸುವ ದಿನಾಂಕ ಮತ್ತು ಎಲ್ಲಾ ಅಧಿಕಾರಿಗಳು ಬಂದರೆ ಮಾತ್ರ ಸಭೆ ನಡೆಸಬೇಕೆಂದು ಒತ್ತಾಯಿಸಿದರು. ಇಂದು ಸಭೆಗೆ 28 ಅಧಿಕಾರಿಗಳ
ಹಿರಿಯ ನಾಗರಿಕರಿಗೆ ಬಸ್‍ನಲ್ಲಿ ಸೀಟ್ ವ್ಯವಸ್ಥೆಯಿಲ್ಲ ಎಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಕೇಳಿ ಬಂದ ಬೆನ್ನಲ್ಲೇ ಎಎಸ್‍ಐ ಒಬ್ಬರು ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿ ಪೊಲೀಸ್ ಕಮಿಷನರ್ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರೊಬ್ಬರು ಕರೆ ಮಾಡಿ ನಮಗೆ ಬಸ್ ನಲ್ಲಿ ಸೀಟ್ ಮೀಸಲಾತಿ ಇದ್ದರೂ ಅದು ಪಾಲನೆಯಾಗುತ್ತಿಲ್ಲ ಎಂದು ದೂರಿದ್ದರು. ಅದರ ಬೆನ್ನಲ್ಲೇ ಪಾಂಡೇಶ್ವರ ಸಂಚಾರ
ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ
ಮಂಗಳೂರು ವಿಶ್ವವಿದ್ಯಾನಿಲಯದಿಂದ ಅಂಗೀಕೃತವಾದ ದೇಶದ ಮೊತ್ತ ಮೊದಲ ಕೇಶ ವಿನ್ಯಾಸ ಕಾಲೇಜು ಆಗಸ್ಟ್ ನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಶಿವಾ’ಸ್ ಕಾಲೇಜು ಹೆಸರಲ್ಲಿ ಕಾರ್ಯಾರಂಭಗೊಳ್ಳಲಿದೆ. ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಒಂದು ವರ್ಷದ ಡಿಪ್ಲೋಮಾ ಪೂರೈಸಿದ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪ್ರಮಾಣೀಕೃತ ಸರ್ಟಿಫಿಕೇಟ್ ಸಿಗಲಿದೆ. ಬಹು ಬೇಡಿಕೆಯಿರುವ ಕೇಶ ವಿನ್ಯಾಸ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಉದ್ಯೋಗವಕಾಶ ಒದಗಿಸುವ
ಮಂಗಳೂರಿನ ಪ್ರಾದೇಶಿಕ ಸಾರಿಗೆ ಆಯುಕ್ತರ ಕಚೇರಿಯಲ್ಲಿ ಜನಸ್ಪಂದನೆ ಸಭೆ ನಡೆಯಿತು. ಮಂಗಳೂರಿನ ಪ್ರಮುಖ ಸಮಸ್ಯೆಗಳ ಬಗ್ಗೆ ಜನರು ಮತ್ತು ಸಂಘಟನೆಗಳ ಪ್ರಮುಖರು ಸಭೆಯ ಮುಂದಿಟ್ಟರು.ಉಪಸಾರಿಗೆ ಆಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಜೋನ್ ಬಿ, ಮಿಸ್ಥಿತ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ವಿವಿಧ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದಿದ್ದು, ಯಾವುದೇ ವಿಚಾರದ ದೂರು ಇದ್ದರೆ ಸಾರ್ವಜನಿಕರು ಆರ್‍ಟಿಒ ಕಚೇರಿ ಸಂಪರ್ಕಿಸಿ ದೂರು
ಮಂಗಳೂರು: ನಗರದ ಮೇರಿಹಿಲ್ ವಿಕಾಸ್ ಕಾಲೇಜಿನ ಬಳಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಮೃತರನ್ನು ಸ್ಥಳೀಯ ನಿವಾಸಿಗಳಾದ ಪವನ್ ( 16) ಹಾಗೂ ಚಿರಾಗ್ ( 15) ಎಂದು ಗುರುತಿಸಲಾಗಿದೆ. ಅಪಘಾತದಿಂದ ಒಬ್ಬ ಬಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ. ಗಾಯಗೊಂಡ ಇನ್ನೊಬ್ಬ ಬಾಲಕನನ್ನು ರಾಜಲಕ್ಷ್ಮೀ ಬಸ್ಸಿನಲ್ಲಿ ತಕ್ಷಣವೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆ ತಲುಪುವಷ್ಟರಲ್ಲಿ ಆತನೂ
ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋ ರಕ್ಷಣೆಗಾಗಿ ಬಿಜೆಪಿ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೈ ಬಿಡುವ ನಿರ್ಧಾರ ಮಾಡುತ್ತಿದೆ. ರಾಜ್ಯದಲ್ಲಿ ಗೋ
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಡ್ರಗ್ಸ್ ವಿಚಾರವಾಗಿ ಅರಿವು ಮೂಡಿಸುವ ಕಾರ್ಯಕ್ರಮಗಳನು ಹಮ್ಮಿಕೊಳ್ಳಲಿದ್ದೇವೆ. ಅದಕ್ಕಾಗಿ 288 ಶಾಲೆ ಮತ್ತು ಕಾಲೇಜುಗಳನ್ನು ಪಟ್ಟಿ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದರು. ಅವರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ ಕೆಲವು ವೈದ್ಯರು ಮತ್ತು ಎಫ್‍ಎಸ್ ಎಲ್ ಅಧಿಕಾರಿಗಳು ಸಹ