Home Posts tagged #mangaluru (Page 29)

ಮಂಗಳೂರು : ಕುರ್ಬಾನಿ ಹೆಸರಿನಲ್ಲಿ ಅಕ್ರಮ ಗೋಸಾಗಾಟ

ಕುರ್ಬಾನಿ ಹೆಸರಿನಲ್ಲಿ ಅಕ್ರಮ ಗೋಸಾಗಾಟ ಮತ್ತು ಗೋವಂಶ ಹತ್ಯೆ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಜರಂಗದಳದ ಪ್ರಾಂತ ಸಂಯೋಜಕ ಸುನೀಲ್ ಕೆ.ಆರ್. ಆಗ್ರಹಿಸಿದ್ದಾರೆ. ಅವರು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಗೋವು ಹಿಂದುಗಳ ಶ್ರದ್ಧಾ ಬಿಂದುವಾಗಿದ್ದು, ಆ ಗೋವಿಗೋಸ್ಕರ ನೂರಾರು ವರ್ಷಗಳ ಕಾಲ ಹಿಂದೂ ಸಮಾಜ ಹೋರಾಟ ಮಾಡಿದೆ. ಜೂನ್ 29ರಂದು ಬಕ್ರೀದ್

ಸರ್ಕಸ್ ತುಳು ಚಿತ್ರ ಇಂದು ವಿಶ್ವದಾದ್ಯಂತ ಬಿಡುಗಡೆ – circus tulu film

ರೂಪೇಶ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ “ಸರ್ಕಸ್” ತುಳು ಸಿನಿಮಾ ಭಾರತ್ ಮಾಲ್ ನ ಬಿಗ್ ಸಿನಿಮಾಸ್‍ನಲ್ಲಿ ಬಿಡುಗಡೆಗೊಂಡಿತು. ಸಿನಿಮಾ ಬಿಡುಗಡೆಗೂ ಮುನ್ನ ಅದ್ಧೂರಿ ಮೆರವಣಿಗೆ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಚಿತ್ರ ನಿರ್ದೇಶಕ, ನಟ ರೂಪೇಶ್ ಶೆಟ್ಟಿ ಅವರು, “ತುಳು ಸಿನಿಮಾಕ್ಕೆ ಸಣ್ಣ ಮಾರುಕಟ್ಟೆ ಇದ್ದರೂ ಇಷ್ಟು ದೊಡ್ಡ ರೀತಿಯಲ್ಲಿ ತುಳುವರು ಪೆÇ್ರೀತ್ಸಾಹ

ಗುರುಪುರ : ಬಸ್ ಢಿಕ್ಕಿಯಾಗಿ ಯುವಕ ಸಾವು- ಕೈಕಂಬ ಜಂಕ್ಷನ್‍ನಲ್ಲಿ ಪ್ರತಿಭಟನೆ

ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂನ್ 22ರಂದು ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್‍ನಲ್ಲಿ ಬಸ್‍ಗಳನ್ನು ತಡೆದು ಪ್ರತಿಭಟನೆ ನಡೆಸಿದರು. ಬಸ್ ಢಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ಮೃತಪಟ್ಟಿದ್ದು ಈ ಘಟನೆಯನ್ನು ಖಂಡಿಸಿ ನೂರಾರು ಮಂದಿ ಪ್ರತಿಭಟನೆ ಸೇರಿ ವ್ಯವಸ್ಥೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಿಂದಾಗಿ ಕೈಕಂಬ ಜಂಕ್ಷನ್

ಮೂಡುಬಿದಿರೆ : ಮುರುಕು ಮನೆಯಲ್ಲಿ ಜೀವಿಸುತ್ತಿರುವ ಅಸಹಾಯಕ ಕುಟುಂಬಕ್ಕೆ ಬೇಕಾಗಿದೆ ನೆರವು

ಮೂಡುಬಿದಿರೆ: ಮಳೆಗಾಲ ಬಂತೆಂದರೆ ಸಾಕು “ಉಳ್ಳವರು” ತಮಗೆ ಮನೆಗೆ ಬೇಕಾದ ವ್ಯವಸ್ಥೆಯನ್ನು ಬೇಗನೇ ಮಾಡಿ ಮುಗಿಸುತ್ತಾರೆ. ಆದರೆ ಒಂದು ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿಯಲ್ಲಿರುವ ಬಡವರು ಮಾತ್ರ ಹೊಟ್ಟೆ ತುಂಬಿಸುವುದು ಹೇಗೆ ಎಂಬುದೇ ಚಿಂತೆ ಇರುವಾಗ ಮನೆಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳಲು ಕಷ್ಟ ಸಾಧ್ಯವಾಗುತ್ತದೆ. ಇಂತಹ ಸ್ಥಿತಿಯಲ್ಲಿ ಇರುವೈಲಿನಲ್ಲೊಂದು ಅಸಹಾಯಕ ಕುಟುಂಬವು ಇಂದೋ, ನಾಳೆಯೋ ಬಿದ್ದು ಹೋಗಲಿರುವ ಮನೆಯಲ್ಲಿ ಜೀವನ

ದ.ಕ ಎಸ್ಪಿಯಾಗಿ ಸಿ.ಬಿ.ರಿಷ್ಯಂತ್

15 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಸಿ. ಬಿ. ರಿಷ್ಯಂತ್ ನೇಮಕಗೊಂಡಿದ್ದಾರೆ. 2013ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ, ಬೆಂಗಳೂಳು ಮೂಲದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತ್ತು ದಾವಣಗೆರೆಯ ಎಎಸ್‍ಪಿಯಾಗಿ, ನಂತರ ್ದ ದಾವಣಗೆರೆಯ ಎಸ್‍ಪಿಯಾಗಿ ಸೇವೆ ಸಲ್ಲಿಸಿದ್ದರು. ಈ ಹಿಂದೆ

ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಎಂ.ಜಿ.ರೋಡ್‍ ತಿರುವು ರಸ್ತೆಯಲ್ಲಿ ಕೃತಕ ನೆರೆ

ಮಂಗಳೂರಿನ ಎಂ.ಜಿ.ರೋಡ್ ಬಲ್ಲಾಳ್‍ಬಾಗ್‍ನಿಂದ ತಿರುವು ಪಡೆದ ರಸ್ತೆಯ ಅಂಚಿನಲ್ಲಿ ಕೃತಕ ನೆರೆ ಸೃಷ್ಠಿಯಾಗಿದೆ. ಈ ರಸ್ತೆಯಲ್ಲಿ ನೀರು ಹರಿಯಲು ಸೂಕ್ತವಾದ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಮಳೆ ನೀರು ರಸ್ತೆಯಂಚಿನಲ್ಲೇ ನಿಂತು ವ್ಯಾಪಾರ ಮಳಿಗೆಗಳ ಒಳಗೆ ನುಗ್ಗುತ್ತಿದೆ. ಮಂಗಳೂರಿನ ಬಲ್ಳಾಲ್‍ಬಾಗ್ ಎಂ.ಜಿ.ರೋಡ್ ರಸ್ತೆಯಿಂದ ತಿರುವು ಪಡೆದ ರಸ್ತೆಯ ಕೋಡಿಯಾಲ್ ಗುತ್ತು ಜನತಾ ಡೀಲಕ್ಸ್ ಹೋಟೆಲ್ ಬಳಿ ಚಿಕ್ಕ ಮಳೆ ಬಂದರೆ ಸಾಕು,

ಉಳ್ಳಾಲ : ಬಿಫರ್ ಜಾಯ್ ಚಂಡಾಮಾರುತ ಭೀತಿ – ತುರ್ತು ಸುರಕ್ಷತಾ ಕಾಮಗಾರಿ

ಉಳ್ಳಾಲ: ಬಿಫರ್ ಜಾಯ್ ಚಂಡಾಮಾರುತ ಭೀತಿ ಹಿನ್ನೆಲೆಯಲ್ಲಿ ಒಂದು ವಾರದಿಂದ ಪ್ರಕ್ಷುಬ್ದಗೊಂಡಿದ್ದ ಉಚ್ಚಿಲ ಬಟ್ಟಪ್ಪಾಡಿಯ ಸಮುದ್ರತೀರದಲ್ಲಿ ಜಿಲ್ಲಾಡಳಿತದ ಆದೇಶದಂತೆ ತುರ್ತು ಕಲ್ಲು ಹಾಕುವ ಕಾಮಗಾರಿಯನ್ನು ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ತಕ್ಷಣದ ಸುರಕ್ಷತಾ ಕಾಮಗಾರಿ ಆರಂಭಿಸಲಾಗಿದೆ. ಉಳ್ಳಾಲದ ಸಮುದ್ರ ತೀರಕ್ಕೂ ಭಿಪರ್ ಜಾಯ್ ಎಫೆಕ್ಟ್ ತಟ್ಟುವ ಸಾಧ್ಯತೆ ಹಿನ್ನೆಲೆ ತುರ್ತಾಗಿ ಕಲ್ಲುಗಳನ್ನು ಹಾಕಲಾಗುತ್ತಿದೆ. ದ.ಕ ಜಿಲ್ಲಾ ಉಸ್ತುವಾರಿ ಸಚಿವ

ಕಾವೂರು : ಮನೆಯೊಂದಕ್ಕೆ ಬೃಹತ್ ಮರ ಬಿದ್ದು ಹಾನಿ – ಮೂವರಿಗೆ ಗಾಯ

ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದಲ್ಲಿ ಮನೆಯೊಂದರ ಮೇಲೆ ಬೃಹತ್ ಮರ ಬಿದ್ದು ಮೂವರು ಗಾಯಗೊಂಡಿದ್ದಾರೆ. ಮಂಗಳೂರಿನ ಕಾವೂರು ಬಿಜಿಎಸ್ ಹಾಸ್ಟೆಲ್ ಪಕ್ಕದ ಮನೆ ಮೇಲೆ ಮುಂಜಾನೆ ವೇಳೆ ಬೃಹತ್ ಮರ ಉರುಳಿಬಿದ್ದಿದ್ದು, ಮನೆಯಲ್ಲಿದ್ದ ಸದಾನಂದ ಹಾಗೂ ಅವರ ಪತ್ನಿ ರತ್ನಾ ಮತ್ತು ಪುತ್ರಿಗೆ ಗಾಯವಾಗಿದೆ. ಸ್ಥಳಕ್ಕೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಭೇಟಿ ನೀಡಿ ಪರಿಶೀಲಿಸಿದರು. ಸ್ಥಳಕ್ಕೆ ತಹಸೀಲ್ದಾರ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು,

ಮಂಗಳೂರು ನಗರದಲ್ಲಿ ಬಿರುಸುಗೊಂಡ ಮಳೆ : ಹವಾಮಾನ ಇಲಾಖೆಯಿಂದ ಮುನ್ಸೂಚನೆ

ಮಂಗಳೂರು ನಗರದಲ್ಲಿ ಮಳೆ ಸುರಿಯುತ್ತಿದೆ. ಬೆಳಿಗ್ಗೆ ಅಲ್ಪ ಮಳೆಯಾಗಿತ್ತು. 10 ಗಂಟೆಯ ವೇಳೆಗೆ ಉತ್ತಮ ಮಳೆ ಸುರಿಯಿತು. ಮುಂದಿನ ಮೂರು ಗಂಟೆಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಕೋಲಾರ, ಉಡುಪಿ, ಉತ್ತರ ಕನ್ನಡದ ಒಂದು ಅಥವಾ ಎರಡು ಸ್ಥಳಗಳಲ್ಲಿ 30-40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ

ಪಿಯುಸಿ ಫೇಲ್ ಆದ ಪ್ರಿಯಾಂಕ ಖರ್ಗೆ ಅವರು ಎಂಜಿನಿಯರ್ ಸೂಲಿಬೆಲೆಯ ಪದವಿ ಕೇಳುತ್ತಿದ್ದಾರೆ- ಡಾ.ಭರತ್ ಶೆಟ್ಟಿ ವ್ಯಂಗ್ಯ

ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕೆಲಸ ತ್ಯಜಿಸಿ, ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ. ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ,