Home Posts tagged #mangaluru (Page 31)

Mangaluru : ವಿಶ್ವ ರೆಡ್ ಕ್ರಾಸ್ ದಿನಾಚರಣೆ- ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣೆ

ವಿಶ್ವ ರೆಡ್‍ಕ್ರಾಸ್ ದಿನ-2023 ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮವು ಹಂಪಕಟ್ಟೆಯ ಮಂಗಳೂರು ವಿವಿಯ ರವೀಂದ್ರ ಕಲಾಭವನದಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್

ಜೂನ್ 3ರಂದು ದಿ.ಜಾರ್ಜ್ ಫೆರ್ನಾಂಡಿಸ್ ರವರ ಜನ್ಮದಿನಾಚರಣೆ, ಪ್ರಶಸ್ತಿ ಪ್ರದಾನ

ಮುಂಬಯಿ :ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಗಳ ಅಭಿವೃದ್ದಿಗಾಗಿ ವಿವಿಧ ರೀತಿಯಲ್ಲಿ ಶ್ರಮಿಸುತ್ತಿರುವ ಮುಂಬಯಿಯಲ್ಲಿ ನೆಲೆಸಿದ ಕರ್ನಾಟಕದ ಕರಾವಳಿಯ ಎಲ್ಲಾ ಜಾತೀಯ ಹಾಗೂ ವಿವಿಧ ಭಾಷೀಯ ಸಂಘಟನೆಗಳನ್ನೊಳಗೊಂಡ ಏಕೈಕ ಸರಕಾರೇತರ ಸಂಘಟನೆ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿ. ಇದರ ಮಾರ್ಗದರ್ಶಕರಾಗಿದ್ದ ಮಾಜಿ ಕೇಂದ್ರ ಸಚಿವ ದಿ. ಜಾರ್ಜ್ ಫೆರ್ನಾಂಡಿಸ್ ಅವರ 94ನೇ ಜನ್ಮದಿನಾಚರಣೆ ಅಂಗವಾಗಿ ಜೂನ್ 3 ರಂದು ಅವರ ಸ್ಮರಣಾರ್ಥ ರಾಷ್ಟೀಯ ಪ್ರಶಸ್ತಿ ಪ್ರದಾನ ಸಮಾರಂಭ ರಂಜನಿ

ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜು : ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್

ಮುಂಗಾರು ಮಳೆ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಜ್ಜಾಗಿದೆ. ಪ್ರಕೃತಿ ವಿಕೋಪ ಸಮರ್ಥವಾಗಿ ನಿರ್ವಹಿಸಲು ಬೇಕಾದ ಎಲ್ಲಾ ರೀತಿ ಸಿದ್ಧತೆಯನ್ನು ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್ ಹೇಳಿದರು. ವಿ4ನ್ಯೂಸ್‍ನೊಂದಿಗೆ ಮಾತನಾಡಿದ ಅವರು, ಈಗಾಗಲೇ ಸ್ಪೀಕರ್ ಯು.ಟಿ.ಖಾದರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು, ಇದರಲ್ಲಿ ಸ್ಪೀಕರ್ ಅವರು ಕೆಲವೊಂದು

ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಗ್ಯಾರಂಟಿಯಿಂದ ವಂಚಿಸಬೇಡಿ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಮಂದಿಗೆ ಗ್ಯಾರಂಟಿ ಯೋಜನೆ ಕೊಡಬಾರದು ಎಂದು ಕಾಂಗ್ರೆಸ್ಸಿಗರು ಜಾಲತಾಣಗಳಲ್ಲಿ ಬರೆಯುತ್ತಿದ್ದಾರೆ. ಇದು ನಾಚಿಕೆಗೇಡಿನ ವಿಚಾರ. ಕೇವಲ ಗೆಲ್ಲಿಸಿದ ಕ್ಷೇತ್ರಗಳಿಗೆ ಮಾತ್ರ ಗ್ಯಾರಂಟಿ ಕೊಡುವ ಕಾಂಗ್ರೆಸ್ ಮನಸ್ಥಿತಿ ಸರಿಯಲ್ಲ. ದ.ಕ.ಮತ್ತು ಉಡುಪಿ ಜಿಲ್ಲೆಯ ಜನತೆಯನ್ನು ಗ್ಯಾರಂಟಿ ಯೋಜನೆಯಿಂದ ವಂಚಿಸಬೇಡಿ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ

ಮಂಗಳೂರು ; ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ

ಮಂಗಳೂರು : ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದಿರುವ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಮಂಗಳೂರಿನಿಂದ ದುಬೈಗೆ ಹೊರಟಿತ್ತು. ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದ ವೇಳೆ ರನ್ ವೇನಲ್ಲಿ ವಿಮಾನದ ರೆಕ್ಕೆಗೆ ಹಕ್ಕಿ ಢಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.  ತಕ್ಷಣ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ ಪೈಲಟ್, ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದಲೇ

ಬೋಂದೆಲ್‍ ; ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜು – ಪ್ರವೇಶಾತಿ ಆರಂಭ

ಮಂಗಳೂರಿನ ಬೋಂದೆಲ್‍ನಲ್ಲಿರುವ ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2023-24ನೇ ಪ್ರವೇಶಾತಿ ಆರಂಭಗೊಂಡಿದೆ.ಕಾಲೇಜಿನಲ್ಲಿ ಇಂಜಿನಿಯರಿಂಗ್ ಕೋರ್ಸ್‍ಗಳು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ನಾನ್ ಇಂಜಿನಿಯರಿಂಗ್, ಕಮರ್ಶಿಯಲ್ ಪ್ರಾಕ್ಟೀಸ್, ಆಂಗ್ಲ ಮತ್ತು ಕನ್ನಡ ಭಾಷೆಗಳಲ್ಲಿ ಬೋಧನೆಯನ್ನು ಮಾಡುತ್ತಿದ್ದಾರೆ.

ಗ್ಯಾರಂಟಿ ಕಾರ್ಡ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ : ಐವನ್ ಡಿಸೋಜಾ ಕಿಡಿ

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಕಾರ್ಡ್ ಬಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಕಿಡಿಕಾರಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆದು, ಫಲಾನುಭವಿಗಳಿಗೆ ಯೋಜನೆಗಳು ಸಿಗಲಿದೆ ಎಂದರು. ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಜನರು ಯಾವುದೇ ಗೊಂದಲ ಪಡುವ

ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತಕ್ಕೆ ಹದಿಮೂರು ವರ್ಷ

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾಯಿಂದ ಬಂದ ಏರ್ ಇಂಡಿಯಾ ಎಕ್ಸ್‍ಪ್ರೆಸ್ ಲ್ಯಾಂಡ್ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ ಬಂದು ಇನ್ನೇನು ಇಳಿಯಲು ಸಿದ್ಧತೆ ನಡೆಸುತ್ತಿದ್ದರು. ನಸು ನಿದ್ದೆಯಲ್ಲಿದ್ದವರು ಭೀಕರ

ಕಂಬಳಕ್ಕೆ ಸುಪ್ರಿಂಕೋರ್ಟ್ ಮಾನ್ಯತೆ – ಮೇ 18 ಕಂಬಳಕ್ಕೆ ಐತಿಹಾಸಿಕ ದಿನ

ಮೂಡುಬಿದಿರೆ: ಕರಾವಳಿಯ ಜಾನಪದ ಕ್ರೀಡೆ ಕಂಬಳ. ರಾಜ್ಯದಲ್ಲಿ ಪ್ರಾಣಿ ಹಿಂಸಾ ತಡೆ ಕಾಯ್ದೆಗೆ ತಿದ್ದುಪಡಿ ತಂದು ಕರಾವಳಿ ಕರ್ನಾಟಕದಲ್ಲಿ ನಡೆಯುವ ಕಂಬಳಕ್ಕೆ ಮಾನ್ಯತೆ ನೀಡಿರುವುದರ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ಪ್ರಾಣಿ ದಯಾ ಸಂಘಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ ಗ್ರೀನ್ ಸಿಗ್ನಲ್ ನೀಡಿರುವುದಕ್ಕೆ ಕಂಬಳ ಸಮಿತಿ ಸಂತಸ ವ್ಯಕ್ತಪಡಿಸಿದ್ದು, ಈ ದಿನ ಕಂಬಳ ಕ್ಷೇತ್ರದಲ್ಲಿ ಐತಿಹಾಸಿಕ ದಿನ ಎಂದು ಕಂಬಳ ಸಮಿತಿ ಬಣ್ಣಿಸಿದೆ. ಈ ಬಗ್ಗೆ ಜಿಲ್ಲಾ ಕಂಬಳ ಸಮಿತಿಯ

ಬಸ್ ಚಾಲಕನ ಅಜಾಗರುಕತೆ ಚಾಲನೆಯಿಂದ ಸರಣಿ ಅಪಘಾತ

ಖಾಸಗಿ ಬಸ್ ಚಾಲಕನೊರ್ವ ಏಕಾಏಕಿ ಬಸ್‍ನ್ನು ಹೆದ್ದಾರಿಗಡ್ಡವಾಗಿ ತಿರುಗಿಸಿದ್ದರ ಪರಿಣಾಮ ನಡೆದ ಸರಣಿ ಅಪಘಾತದಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.ಪಡುಬಿದ್ರಿಯ ಅಪಾಯಕಾರಿ ತಿರುವು ಸಹಿತ ಜಂಕ್ಷನ್‍ನಲ್ಲಿ ಮಂಗಳೂರು ಕಡೆಯಿಂದ ಬಂದ ಖಾಸಗಿ ಬಸ್ ವಿದ್ಯಾರ್ಥಿಗಳನ್ನು ತುಂಬಿಸಿಕೊಂಡು ಉಡುಪಿ ಕಡೆಯಿಂದ ಹೆದ್ದಾರಿಯಲ್ಲಿ ವಾಹನಗಳು ಬರುತ್ತಿದ್ದರೂ ಕ್ಯಾರೇ ಎನ್ನದೆ ಏಕಾಏಕಿ ಹೆದ್ದಾರಿಗಡ್ಡವಾಗಿ ಬಸ್ ಚಲಾಯಿಸಿದಾಗ ಹೆದ್ದಾರಿಯಲ್ಲಿ ಬರುತ್ತಿದ್ದ