ಬಂಟ್ವಾಳ : ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇದ್ದ ಸೌಹಾರ್ದತೆಯ ವಾತವರಣ ಮತ್ತೆ ರಾಜ್ಯದಲ್ಲಿ ಸೃಷ್ಟಿಯಾಗಲಿದೆ, ಯಾರೂ ಉತ್ತಮ ಆಡಳಿತ ನೀಡಿದ್ದಾರೆ, ಯಾರೂ ಪೆÇಳ್ಳು ಭರವಸೆಗಳನ್ನು ನೀಡಿ ಯಾಮಾರಿಸಿದ್ದಾರೆ ಎನ್ನುವ ತಿಳಿವಳಿಕೆ ಜನರಿಗೆ ಬಂದಿದೆ. ಆದ್ದರಿಂದ ಈ ಭಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದರಲ್ಲಿ ಸಂಶಯ ಇಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ
ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.ಕೆನರಾ ವಿಕಾಸ್ ಪಿ.ಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ
ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೇರ್ ಟ್ರಸ್ಟ್ ಇದರ 9ನೇ ವರ್ಷದ ಸಂಭ್ರಮದ ಪ್ರಯುಕ್ತ ಬಂಟ ಸಾಂಸ್ಕøತಿಕ ವೈಭವ 2023 ಬಂಟ ಸಮಾಜದ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಗರದ ಉರ್ವಾಸ್ಟೋರ್‍ನ ಅಂಬೇಡ್ಕರ್ ಭವನದಲ್ಲಿ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮವನ್ನು ಇಂಟರ್‍ನ್ಯಾಷನಲ್ ಬಂಟ್ಸ್ ವೆಲ್‍ಫೆರ್ ಟ್ರಸ್ಟ್‍ನ ಸ್ಥಾಪಕಾಧ್ಯಕ್ಷರಾದ ಎ.ಸದಾನಂದ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವು
ಆಮ್ ಆದ್ಮಿ ಪಕ್ಷದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಂತೋಷ್ ಕಾಮತ್ ಅವರು ನಾಮಪತ್ರ ಸಲ್ಲಿಸಿದ್ರು. ನಾಮಪತ್ರ ಸಲ್ಲಿಕೆಗೂ ಮೊದಲು ನಗರದ ಮಂಗಳಾದೇವಿ ದೇವಳದಲ್ಲಿ ಕುಟುಂಬಿಕರು, ಪಕ್ಷದ ಮುಖಂಡರುಗಳು ಹಾಗೂ ಅಭಿಮಾನಿಗಳ ಜತೆಗೂಡಿ ಪೂಜೆ ಸಲ್ಲಿಸಿದ್ರು. ತದ ಬಳಿಕ ನಗರದ ಬಳ್ಳಾಲ್‍ಬಾಗ್‍ನಿಂದ ಮಹಾನಗರಪಾಲಿಕೆಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ನಾಮಪತ್ರ ಸಲ್ಲಿಸಿದ್ರು. ಈ ವೇಳೆ ಆಮ್ ಆದ್ಮಿ ಪಕ್ಷದಮುಖಂಡರಾದ
ಮಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಂಗಳವಾರ ವಿವಿಧ ಧರ್ಮಗಳ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕೊಲ್ಲೂರು ಮುಕಾಂಬಿಕೆ ದೇವಸ್ಥಾನ, ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ, ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತದ ಬಿಷಪ್, ಬಂದರು ಕೇಂದ್ರ ಜುಮ್ಮಾ ಮಸೀದಿ ದರ್ಗಾಕ್ಕೆ ಭೇಟಿ ನೀಡಿ ಅವರು ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಪ್ರಸಿದ್ಧ ವಸ್ತ್ರ ಮಳಿಗೆಯಾದ ಆರಾಧ್ಯ ಮಳಿಗೆಯಲ್ಲಿ ಶುಭ ಸಮಾರಂಭ ಹಾಗೂ ಹಬ್ಬಗಳ ಖರೀದಿಗಾಗಿ ಅಮೋಘ ಕೊಡುಗೆಗಳನ್ನು ನೀಡುತ್ತಿದ್ದಾರೆ. ನಗರದ ಕಾರ್ ಸ್ಟ್ರೀಟ್ ನಲ್ಲಿರುವ ಆರಾಧ್ಯ ವಸ್ತ್ರಮಳಿಗೆಯಲ್ಲಿ ವಿಶೇಷ ಆಫರ್ ಗಳನ್ನು ಘೋಷಿಸಿದ್ದಾರೆ. ಸಿಲ್ಕ್‍ಸಾರೀಸ್, ಫ್ಯಾನ್ಸಿಸಾರೀಸ್ ಮತ್ತು ಕುರ್ತಾ ವಸ್ತ್ರಗಳಿಗೆ ಶೇ.15 ರಿಯಾಯಿತಿಯನ್ನು ಘೋಷಿಸಿದ್ದಾರೆ. ಈ ಆಫರ್ ಏಪ್ರಿಲ್ 30ರ ವರೆಗೆ ಲಭ್ಯವಿದೆ. ಇಂದೇ ಮಳಿಗೆಗೆ ಭೇಟಿ ನೀಡಿ ನಿಮಗೆ ಇಷ್ಟವಾದ
ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್‍ಡಿಪಿಐ ಅಭ್ಯರ್ಥಿ ರಿಯಾಜ್ ಫರಂಗಿಪೇಟೆ ಅವರು ನಾಮಪತ್ರ ಸಲ್ಲಿಸಿದರು. ಅವರು ತೊಕ್ಕೊಟ್ಟುವಿನ ಮೈದಾನದಲ್ಲಿ ಜರಗಿದ ಎಸ್‍ಡಿಪಿಐ ಮಂಗಳೂರು ವಿಧಾಸನಭಾ ಕ್ಷೇತ್ರದ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಪ್ರಯುಕ್ತ ಹಮ್ಮಿಕೊಳ್ಳಲಾದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಸರಳ ವ್ಯಕ್ತಿತ್ವ, ಸ್ಟೀಲ್ ಲೋಟದಲ್ಲಿ ಚಹಾ ಕುಡಿಯುವವರು ಕೆ.ಟಿಯನ್ನು ಸೇವಿಸುವವರು ಉಳ್ಳಾಲದ ಶಾಸಕರು. ಚುನಾವಣೆ ಬಂದಾಗ ಎಲ್ಲರಿಂದಲೂ ಹಣ
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಕೇಂದ್ರ ಹಾಗೂ ರಾಜ್ಯ ಸರಕಾರದ ವೈಫಲ್ಯ ವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಯಿತಲ್ಲದೆ, ಗ್ಯಾಸ್ ಸಿಲಿಂಡರ್ ಮತ್ತು ಕಟ್ಟಿಗೆಯ ಅಣಕು ಶವ ಯಾತ್ರೆ ನಡೆಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ `ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಾದರೂ ಕೂಡ ಬಿಜೆಪಿಗರು ತಲೆ
ಮಂಗಳೂರು: ರಾಷ್ಟ್ರೀಯ ಮತದಾರರ ದಿನಾಚರಣೆಯ (2023) ಅಂಗವಾಗಿ ವಿವಿಧ ವಿಭಾಗಗಳಲ್ಲಿ ತೋರಿದ ಅತ್ಯುತ್ತಮ ನಿರ್ವಹಣೆಗಾಗಿ ದ.ಕ. ಜಿಪಂ ಸಿಇಒ ಡಾ. ಕುಮಾರ್ ಗೆ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದೆ. ಜ.25ರ ಬೆಳಗ್ಗೆ 11:30ಕ್ಕೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ




























