ಕಾಂಗ್ರೆಸ್‌ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ
ಮಂಗಳೂರು ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಸಂವಾದ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಎಸ್.ಸಿ.ಡಿ.ಸಿಸಿ ಬ್ಯಾಂಕ್ ನ ಸಭಾಂಗಣದಲ್ಲಿ ನಗರ ಪೊಲೀಸ್ ವತಿಯಿಂದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸಂವಾದ ಕಾರ್ಯಕ್ರಮವನ್ನ ನಡೆಸಲಾಯ್ತು. ಇನ್ನು ಕಾರ್ಯಕ್ರಮವನ್ನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು
ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಹಾಗೂ ರೈತ ರೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಸೋಮವಾರ ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಲ್ಲಿ ವಿವಿಧ ಸಂಘಟನೆಗಳ ಬೃಹತ್ ಮೆರವಣಿಗೆ ಹಾಗೂ ರಸ್ತೆ ತಡೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ರೈತ , ದಲಿತ , ಕಾರ್ಮಿಕ , ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ ಗೆ ಬೆಂಬಲಿಸಿ ಈ ರ್‍ಯಾಲಿ ಹಾಗೂ ರಸ್ತೆ ತಡೆ ನಡೆಸಲಾಯಿತು. ಪ್ರತಿಭಟನಾ ಸಮಾವೇಶಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಕರ್ನಾಟಕ […]
ಉಡುಪಿ ಮಂಗಳೂರು ಗಡಿಭಾಗ ಹೆಜಮಾಡಿ ಗ್ರಾಮಸಭೆಯಲ್ಲಿ ಶಾಂಭವಿ ಹೊಳೆಯಲ್ಲಿ ರಾಜರೋಷವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ಹಾಗೂ ಮಟ್ಕಾದಂಧೆಯ ವಿರುದ್ಧ ಜನ ಆಕ್ರೋಶ ವ್ಯಕ್ತ ಪಡಿಸಿದ್ದು, ಸಭೆಯಲ್ಲಿದ್ದ ಅಧಿಕಾರಿಗಳಲ್ಲಿ ತಕ್ಷಣವೇ ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದ ಮಾಜಿ ಹೆಜಮಾಡಿ ಗ್ರಾ.ಪಂ. ಅಧ್ಯಕ್ಷ ವಾಮನ್ ಕೋಟ್ಯಾನ್, ಅವಳಿ ಜಿಲ್ಲೆಗಳ ಗಡಿಭಾಗ ಇದಾಗಿದ್ದು ದ.ಕ. ಜಿಲ್ಲಾ ಪರವಾನಿಗೆ ಪಡೆದಿರುವ ಮಂದಿ ಉಡುಪಿ
ಮಂಗಳೂರಿನ ಯೆಯ್ಯಾಡಿಯ ಬಾರೆಬೈಲ್‌ನಲ್ಲಿ ನಡೆದು ಹೋಗುತ್ತಿದ್ದ ವಿ೪ನ್ಯೂಸ್‌ನ ಪತ್ರಕರ್ತೆ ಕಾವ್ಯ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ದುಷ್ಕರ್ಮಿಯೋರ್ವ ಎಳೆದು ಪರಾರಿಯಾದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ವೇಳೆ ಕಚೇರಿಯಿಂದ ಮನೆಗೆ ತೆರಳುವಾಗ ಈ ಘಟನೆ ಸಂಭವಿಸಿದೆ. ದುಷ್ಕರ್ಮಿಯೋರ್ವ ಬೈಕ್‌ನಲ್ಲಿ ಆಗಮಿಸಿ, ಆಕೆಯ ಕುತ್ತಿಯಲ್ಲಿದ್ದ ಚಿನ್ನದ ಸರವನ್ನ ದೋಚಿ ಪರಾರಿಯಾಗಿದ್ದಾನೆ. ಸರವನ್ನು ಎಳೆಯುವ ಸಂದರ್ಭದಲ್ಲಿ ರಸ್ತೆಗೆ ಉರುಳಿ ಬಿದ್ದು
ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಮಹಿಳಾ ಸುರಕ್ಷತೆಗಾಗಿ ಒಂದು ದಿನ ಕಾರ್ಯಕ್ರಮ ಮಹಿಳೆಯ ರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಒಲಿಂಪಿಯನ್, ಅರ್ಜುನ ಪ್ರಶಸ್ತಿ ಪುರಸ್ಕೃತೆ ಎಂ.ಆರ್. ಪೂವಮ್ಮ ಅಭಿಪ್ರಾಯಿಸಿದರು. ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು
ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಸುರತ್ಕಲ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಆಡಳಿತ ಮುಕ್ತೇಸರರಾದ ವೇದಮೂರ್ತಿ ಐ ರಮಾನಂದ ಭಟ್ ಅವರು ಉದ್ಘಾಟನೆ ಮಾಡಲಿದ್ದಾರೆ.
ಮಂಗಳೂರು: ಈ ರಾಜ್ಯದಲ್ಲಿ ಒಳ್ಳೆ ಸರ್ಕಾರ ಕೊಡುವುದಕ್ಕೆ ಆಗಿಲ್ಲ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಕೊಡಲು ಆಗಿಲ್ಲ. ಈ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡಲ್ಲ ಎಂದು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದರು. ಯಾವ ಅಧಿಕಾರಿಗಳು ಅವರ ಮಾತು
ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿದೆ. ಬಿ.ಎಸ್.ಯಡಿಯೂರಪ್ಪ ಶೀಘ್ರ ರಾಜೀನಾಮೆ ನೀಡುವ ಸಾಧ್ಯತೆ ಇದ್ದು, ಬಿಜೆಪಿಯಲ್ಲಿ ಖಾಲಿಯಾಗುವ ಸಿಎಂ ಹುದ್ದೆಗೆ ದಲಿತ ನಾಯಕನನ್ನು ಆಯ್ಕೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಸವಾಲು ಹಾಕಿದ್ದಾರೆ. ಅವರು ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಳಿನ್ ಕುಮಾರ್ ಕಟೀಲು ಇತ್ತೀಚೆಗೆ ಕಾಂಗ್ರೆಸ್ ದಲಿತ ಸಿಎಂ ಅಭ್ಯರ್ಥಿಯನ್ನು
ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸಚಿವ ಅರವಿಂದ ಲಿಂಬಾವಳಿ ಸೂಚಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ತುಳು ಭಾಷೆಗೆ ಮಾನ್ಯತೆ ಪಡೆಯುವಲ್ಲಿ ದಿಟ್ಟ ಹೆಜ್ಜೆಯಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಸಂತಸ ವ್ಯಕ್ತ ಪಡಿಸಿದ್ದಾರೆ. ಅವರು ಮಂಗಳೂರಿನ ಪ್ರೆಸ್‌ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ಪ್ರಕ್ರಿಯೆಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸುವುದಾಗಿ