ಕಾಂಗ್ರೆಸ್ ಹಿರಿಯ ಮುಖಂಡ ಅಸ್ಕರ್ ಫೆರ್ನಾಂಡಿಸ್ ಯೋಗ ಮಾಡುವ ವೇಳೆ ಜಾರಿ ಬಿದ್ದು ಗಾಯಗೊಂಡು ಮಂಗಳೂರಿನ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.ಬುಧವಾರದಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಅಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯವನ್ನು ವಿಚಾರಿಸಿದರು. ತದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಸ್ಕರ್
ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಮಯದಲ್ಲಿ ಅರ್ಕುಳಬೈಲ್‌ನಿಂದ ಹರಿದು ಹೋಗುವ ನೀರಿಗೆ ಸಮರ್ಪಕ ವ್ಯವಸ್ಥೆ ಕಲ್ಪಿಸದೇ ಇರುವುದರಿಂದ ಸ್ಥಳೀಯ ನಿವಾಸಿಗಳಿಗೆ ತೊಂದರೆ ಆಗುವುದನ್ನ ಮನಗಂಡ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ನೀರು ಹರಿದು ಹೋಗುವ ಮೋರಿಗಳು ಮಣ್ಣಿನಿಂದ ತುಂಬಿದ ಕಾರಣ ಕೃಷಿ ಭೂಮಿಯಲ್ಲಿ ನೀರು ತುಂಬಿ ಕೃಷಿಗೆ ತೊಂದರೆ ಆಗಿರುವುದರಿಂದ ಅಧಿಕಾರಿಗಳೊಂದಿಗೆ ಭೇಟಿ ಕೊಟ್ಟರು. ಇನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೆ
ದೇಶದಾದ್ಯಂತ ಇಂದು ಮುಸ್ಲಿಮರು ಬಕ್ರೀದ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ಮಂಗಳೂರಿನ ಉಳ್ಲಾಲದ ಕೇಂದ್ರ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನಿರ್ವಹಿಸಿದರು. ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಹಸ್ತಲಾಘವ, ಆಲಿಂಗನ ಇಲ್ಲದೇ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಜಿಲ್ಲೆಯಲ್ಲಿ ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಯಾವುದೇ ರೀತಿಯಲ್ಲೂ ಕಾಳಜಿ ವಹಿಸಿದಂತೆ ತೋರುತ್ತಿಲ್ಲ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಉಳ್ಳಾಲ, ಸೋಮೇಶ್ವರ್ ಬೀಚ್ ನಲ್ಲಿ ರಸ್ತೆಗಳು ಸಮುದ್ರ ಪಾಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಟ್ಯಾಂತರ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಎಲ್ಲಾವೂ ಸಮುದ್ರ ಪಾಲಾಗುತ್ತಿದೆ. ಶಾಶ್ವತ ಪರಿಹಾರದ ಬಗ್ಗೆ
ಬಿಜೆಪಿ ರಾಜ್ಯಾಧ್ಯಕ್ಷರ ಆಡಿಯೋ ನಕಲಿ ಅಥವಾ ಅಸಲಿಯೇ ಎಂದು ಮುಖ್ಯ ಮಂತ್ರಿ ಸ್ಪಷ್ಟ ಪಡಿಸಬೇಕಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಹಾಲಿ ಸಿ.ಎಂ ಯಡಿಯೂರಪ್ಪ ಇನ್ನೂ ಮುಂದುವರಿಯುತ್ತಾರೋ ಇಲ್ಲವೋ ಎನ್ನುವುದನ್ನು ಬಿಜೆಪಿ ರಾಜ್ಯಾಧ್ಯಕ್ಷರು ಸ್ಪಷ್ಟವಾಗಿ ತಿಳಿಸಲಿ ಯು.ಟಿ.ಖಾದರ್ ಅವರು ಹೇಳಿದರು. ಇನ್ನು ಕಾಂಗ್ರೆಸ್‌ನಲ್ಲಿ ಯಾವುದೇ ಬಣವಿಲ್ಲ, ಎಲ್ಲಾರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವ ಕೆಲಸ
ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಸಿಕೆ ವಿತರಣೆಯಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆರೋಪ ಮಾಡಿದ್ದಾರೆ. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ದಿನ ಸುಮಾರು ಒಂದೂವರೆ ಲಕ್ಷ ಡೋಸ್ ಲಸಿಕೆ ಅಗತ್ಯ ಇದೆ.ಆದರೆ ಸರಬರಾಜಾಗುತ್ತಿರುವುದು ಒಂದು ವಾರಕ್ಕೆ 50 ಸಾವಿರ.ಇದರಿಂದಾಗಿ ಜನಸಾಮಾನ್ಯರು ಲಸಿಕೆಗಾಗಿ ಪರದಾಡುವಂತಾಗಿದೆ. ಸರಕಾರ ಜನಸಾಮಾನ್ಯರ ಈ ರೀತಿಯ ಅಗತ್ಯಗಳ ಬಗ್ಗೆ ,ಸಮಸ್ಯೆ
ಕರ್ನಾಟಕ ಕೇರಳ ಗಡಿಯಿಂದ ತಲಪಾಡಿ ಚೆಕ್‌ಪೋಸ್ಟ್ ಸೇರಿದಂತೆ 7 ಕಡೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ರು. ಜಿಲ್ಲೆಯ ಗಡಿ ಭಾಗವನ್ನು ಹೊಂದಿರುವ ಚೆಕ್ ಪೋಸ್ಟ್‌ಗಳಲ್ಲಿ ಪ್ರತೀ ದಿನ ಹೆಚ್ಚು ಜನರು ತಮ್ಮ ವೃತ್ತಿಯನ್ನರಸಿ ಮಂಗಳೂರು ನಗರಕ್ಕೆ ಬರುತ್ತಿದ್ದಾರೆ. ಇವರುಗಳ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯನ್ನು ಗಡಿಯ ಚೆಕ್ ಪೋಸ್ಟ್‌ನಲ್ಲಿಯೇ ಮಾಡಲು ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಜಿಲ್ಲಾಡಳಿತ ಸೂಚನೆ
ಮಂಗಳೂರಿನ ಫಳ್ನೀರ್‌ನ ಖಾಸಗಿ ಕಾಲೇಜಿನಲ್ಲಿ ರ್‍ಯಾಗಿಂಗ್ ಪ್ರಕರಣಕ್ಕೆ ಸಂಬಂಧಿಸಿ, ಆರು ಮಂದಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಹೇಳಿದ್ದಾರೆ. ಫಳ್ನೀರ್‌ನಲ್ಲಿರುವ ಖಾಸಗಿ ಕಾಲೇಜಿ ವಿದ್ಯಾರ್ಥಿಗಳಾದ ಶ್ರೀಲಾಲ್ , ಶಾಹಿದ್, ಅಮ್ಜದ್, ಜುರೈಜ್, ಹುಸೈನ್, ಲಿಮ್ಸ್, ಬಂಧಿತ ಆರೋಪಿಗಳಾಗಿದ್ದಾರೆ. ಜುಲೈ 14ರಂದು ರಾತ್ರಿ 8ಗಂಟೆಗೆ ನಗರದ ಹೋಟೆಲೊಂದರಲ್ಲಿ ರ್‍ಯಾಗಿಂಗ್‌ಗೆ ಒಳಗಾದ ಸಂತ್ರಸ್ತ ಮ್ಯಾನುಯಲ್ ಬಾಬು
ಕರಾವಳಿಯ ಪ್ರಸಿದ್ಧ ಕ್ಷೇತ್ರ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ಕ್ಷೇತ್ರಕ್ಕೆ ನೂತನ ವ್ಯವಸ್ಥಾಪನ ಸಮಿತಿಯ ರಚನೆಯಾಗಿದೆ. ಕ್ಷೇತ್ರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ.ಜೆ.ಶೆಟ್ಟಿ ಆಯ್ಕೆಗೊಂಡರೆ, ಸದಸ್ಯರಾಗಿ ರಾಘವೇಂದ್ರ ಅಡಿಗ, ಕೆ.ದೇವದಾಸ್ ಕುಮಾರ್, ಎಚ್.ಕುಸುಮಾ ದೇವಾಡಿಗ, ಎನ್.ನಿವೇದಿತ ಶೆಟ್ಟಿ, ಕೆ.ರಾಜೇಶ್ , ಎಚ್.ಕೆ.ಪುರುಷೋತ್ತಮ ಜೋಗಿ, ಮನೋಹರ್ ಸುವರ್ಣ, ನಾರಾಯಣ್ ಕೋಟ್ಯಾನ್ ಬೋಳಾರ್ ಆಯ್ಕೆಯಾಗಿದ್ದಾರೆ. ಮೂರು ವರ್ಷದ ಅವಧಿಗೆ ವ್ಯವಸ್ಥಾಪನ
ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಂಗಳೂರು ನಗರದ ಕುಲಶೇಖರದ ಬಳಿಯ ಕೊಂಗೂರಿನಲ್ಲಿ ಗುಡ್ಡ ಕುಸಿತವಾಗಿದ್ದು, ರೈಲ್ವೆಯ ಹಳಿಯ ಮೇಲೆ ಮಣ್ಣು ಬಿದ್ದಿದೆ. ಇದರಿಂದಾಗಿ ರೈಲ್ವೆ ಸಂಚಾರ ಸ್ಥಗಿತಗೊಂಡಿದೆ. ಕುಲಶೇಖರದ ಬಳಿಯಲ್ಲಿ ರೈಲ್ವೆ ಇಲಾಖೆ ರೈಲ್ವೆಹಳಿ ಪಕ್ಕದಲ್ಲಿ ತಡೆಗೋಡೆಯನ್ನು ನಿರ್ಮಾಣ ಮಾಡುತ್ತಿದೆ. ಆದ್ರೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಗುಡ್ಡ ಕುಸಿದು, ನಿರ್ಮಾಣಗೊಂಡಿದ್ದ ತಡೆಗೋಡೆ ಕಾಮಗಾರಿ ಕುಸಿದು ಬಿದ್ದಿದೆ.