ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ
ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ
ಮೂಡುಬಿದಿರೆ: ವಿಧಾನಪರಿಷತ್ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ಕೆಥೋಲಿಕ್ ಸಭಾ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಕೊರ್ಪುಸ್ ಕ್ರಿಸ್ತಿ ಚರ್ಚ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷನಿಷ್ಠೆ ಯ ಬದ್ಧತೆಯಿಂದ ಕೆಲಸ ಮಾಡಿದ್ದು ತನ್ನ ಸೇವೆಯನ್ನು ಪರಿಗಣಿಸಿ ಎರಡನೇ ಅವಧಿಗೆ ಈ ಸನ್ಮಾನ ಲಭಿಸಿದೆ. ಸಿಕ್ಕಿದ ಅವಕಾಶವನ್ನು ಬಳಸಿ ನೋಂದವರ ಸಹಾಯ ಹಸ್ತ ಒದಗಿಸುವ ಆದ್ಯತೆ
ಮಂಗಳೂರು: “ಜುಲೈ ೯ರಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯುಎಸ್‌ಎ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾದ ೨೦ ರಾಜ್ಯಗಳ ಮುಖ್ಯ ನಗರಗಳಲ್ಲಿ ನಿಶ್ಚಯಿಸಿರುತ್ತಾರೆ” ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್‌ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ. ರೋಟರಿ ಜಿಲ್ಲಾ ೩೧೮೧ ರ ಗವರ್ನರ್ ಎಚ್. ಆರ್.ಕೇಶವ ಅವರು ಉದ್ಘಾಟಿಸಿ, ಬಂಟ್ವಾಳ ರೋಟರಿ ಕ್ಲಬ್‌ನ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಈ ಕ್ಲಬ್‌ನ ಸದಸ್ಯರ ಸಾಮರ್ಥ ಹಾಗೂ ಬದ್ದತೆ ಅಭಿನಂದನೀಯ ಎಂದರು.
ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕಾವೂರು ಸೂಜಿಕಲ್ ಗುಡ್ಡೆಯಲ್ಲಿ ಖಾಸಗಿ ಮನೆ ಕಟ್ಟಡ ನಿರ್ಮಿಸಲು ಅಗೆಯಲಾದ ಮಣ್ಣಿನಿಂದ ಎತ್ತರದ ಪ್ರದೇಶದಲ್ಲಿರುವ ಮನೆಗಳು ಕೆಳಗೆ ಬೀಳುವ ಸ್ಥಿತಿಯಲ್ಲಿವೆ. ಈ
ಐಎನ್‌ಎಸ್‌ಟಿಸಿ- ಅಂತರರಾಷ್ಟಿçÃಯ ಬಡಗಣ ತೆಂಕಣ ಸಾಗಣೆ ನೇರದಾರಿಯ ಮೂಲಕ ಇದೇ ಮೊದಲ ಬಾರಿಗೆ ರಶಿಯಾದ ಕಲ್ಲಿದ್ದಲು ಭಾರತಕ್ಕೆ ಬಂತು.ರಶಿಯಾದಿದ ನೇರ ಭಾರತಕ್ಕೆ ಇಂಟರ್‌ನ್ಯಾಶನಲ್ ನಾರ್ತ್ ಸೌತ್ ಟ್ರಾನ್ಸ್ಪೋರ್ಟ್ ಕಾರಿಡಾರ್ ರಚನೆಯನ್ನು ರಶಿಯಾ 2000ದಲ್ಲಿ ಆರಂಭಿಸಿತ್ತು. ಆದರೆ ತಡವಾಗಿ ಆರಂಭವಾಗಿದೆ. ಇರಾನಿನ ಬಂದರ್ ಅಬ್ಬಾಸ್‌ವರೆಗೆ ರೈಲು ಹಾದಿ. ಅಲ್ಲಿಂದ ಹಡಗು. ಮುಂದಿನ ರೈಲು ಹಾದಿ ಆಲೋಚನೆಯಲ್ಲೇ ಇದೆ.ಈಗ ರಶಿಯಾವು ಕಜ್‌ಬಾಸ್‌ನಿಂದ ಎರಡು ರೈಲು ಭರ್ತಿ
ಶಾಲಾ ಮಕ್ಕಳನ್ನು ಸಾಗಿಸುತ್ತಿರುವ ಖಾಸಗಿ ವೈಟ್ ಬೋರ್ಡ್ ವಾಹನಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಗೌರವ ಅಧ್ಯಕ್ಷ ಸುನೀಲ್ ಕುಮಾರ್ ಬಜಾಲ್ , ಪೊಲೀಸ್ ಇಲಾಖೆ ಹಾಗೂ ಆರ್ ಟಿ ಓ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳಬೇಕು, ಇಲ್ಲದ್ರೆ ಆರ್ ಟಿಓ ಕಚೇರಿ ಮುತ್ತಿಗೆ ಹಾಕುವ ಅನಿವಾರ್ಯ ಬರುತ್ತೆ ಎಂದು ಎಚ್ಚರಿಕೆ ನೀಡಿದ್ರು. ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿ ಮೆನ್ಸ್ ಮತ್ತು ಮ್ಯಾಕ್ಸಿ
ಮಂಗಳೂರಿನ ಅಮೃತ ವಿದ್ಯಾಲಯಂ ಶಾಲೆಯಲ್ಲಿ ನೂತನವಾಗಿ ರಚನೆಗೊಂಡ ವಿದ್ಯಾರ್ಥಿ ಮಂತ್ರಿ ಮಂಡಲದ ಪದಗ್ರಹಣ ಸಮಾರಂಭ ಮತ್ತು ವಿವಿಧ ಸಂಘಗಳ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಲೆಫ್ಟಿನೆಂಟ್ ಕರ್ನಲ್ ವಿವೇಕ್ ಬಿಂದ್ರ, ಅಮೃತ ಕ್ಯಾಂಪಸ್ಸಿನ ನಿರ್ದೇಶಕರಾದ ಶ್ರೀಯುತ ಯತೀಶ್ ಬೈಕಂಪಾಡಿ, ಶಾಲಾ ಪ್ರಾಂಶುಪಾಲೆ ಶ್ರೀಮತಿ ಅಕ್ಷತಾ ಆರ್ ಶೆಣೈ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ನಂತರ ವಿದ್ಯಾರ್ಥಿ ಮಂತ್ರಿಮಂಡಲಕ್ಕೆ
ಉಳ್ಳಾಲ : ನಮ್ಮ ನಾಡ ಒಕ್ಕೂಟ ಇದರ ಆಶ್ರಯದಲ್ಲಿ ಮಂಗಳೂರು ಕಮ್ಯುನಿಟಿ ಸೆಂಟರ್ ತೊಕ್ಕೊಟ್ಟುವಿನ ಸ್ಮಾರ್ಟ್ ಸಿಟಿ ಕಟ್ಟಡದಲ್ಲಿ ಆರಂಭಗೊಂಡಿತು. ವಿಧಾನ ಸಭಾ ಸ್ವೀಕರ್ ಯು ಟಿ ಖಾದರ್ ಫರೀದ್ ಮಂಗಳೂರು ಕಮ್ಯುನಿಟಿ ಸೆಂಟರ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಜನರಿಗೆ ಮೂಲಭೂತ ಸೌಕರ್ಯ ಗಳನ್ನು ಪಡೆಯಲು ಇಂತಹ ಸೇವೆ ಅವಶ್ಯಕತೆ ಇದೆ.ಶಿಕ್ಷಣ, ಉದ್ಯೋಗ ಮುಂತಾದ ಪ್ರಮುಖ ವಿಷಯಗಳ ಬಗ್ಗೆ ಮಾಹಿತಿ ಅಗತ್ಯ ಇರುತ್ತದೆ.ಇದನ್ನು ನಮ್ಮ ನಾಡ ಒಕ್ಕೂಟ ಉಚಿತ ವಾಗಿ