ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ನಿಟ್ಟಿನಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿಯ ವತಿಯಿಂದ ಫೆಬ್ರವರಿ 21, 2023 ರ ಮಂಗಳವಾರದಂದು ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ದ ಸಲುವಾಗಿ ಶಿವಪಾಡಿಯ ಸಾನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳೊಂದಿಗೆ ಜೋರಾಗಿ ತಯಾರಿಗಳು ಕೂಡ ಸಾಗುತ್ತ ಇವೆ. ಮಹಾಯಾಗದ ಪ್ರಯುಕ್ತ ಫೆಬ್ರವರಿ 20, 2023 ರ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ ರಕ್ಷಿತ್ ಶೆಟ್ಟಿ ಅವರು ಆಗಮಿಸಿ, ದೇಗುಲದಲ್ಲಿ ನಡೆಯುತ್ತಿರುವ ಸಕಲ ತಯಾರಿಗಳನ್ನು ವೀಕ್ಷಿಸಿ,
ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರ ಬುಧವಾರದಿಂದ ಮಾರ್ಚ್ 05, 2023 ರ ಭಾನುವಾರದವರೆಗೆ ಸಂಪನ್ನಗೊಳ್ಳಲಿರುವ ‘ಅತಿರುದ್ರ ಮಹಾಯಾಗ’ ಪ್ರಯುಕ್ತ ಪ್ರತೀದಿನ ಗ್ರಾಮವಾರು ಹೊರೆಕಾಣಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಪಾವನ ಕಾರ್ಯಕ್ಕೆ ಭಕ್ತಾದಿಗಳು ಧವಾಸಧಾನ್ಯ, ಬೆಳೆಕಾಳು, ತರಕಾರಿ, ಅಕ್ಕಿ, ತೆಂಗಿನಕಾಯಿ ಮತ್ತಿತರ ದ್ರವ್ಯಗಳನ್ನು ಹೊರೆಕಾಣಿಕೆಯಾಗಿ ಸಮರ್ಪಿಸಲು ಸುವರ್ಣಾವಕಾಶ ಇದಾಗಿದೆ. ಈ ಪುಣ್ಯಕಾರ್ಯದಲ್ಲಿ
ಶಿವಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ಫೆಬ್ರವರಿ 22, 2023 ರ ಬುಧವಾರ ಬೆಳಿಗ್ಗೆ 06:30 ಕ್ಕೆ ‘ಅತಿರುದ್ರ ಮಹಾಯಾಗ’ದ ಮಹಾಸಂಕಲ್ಪದಿಂದ ಮೊದಲ್ಗೊಂಡು, 121 ಋತ್ವಿಜರಿಂದ ಮಹಾನ್ಯಾಸಪೂರ್ವಕ ಶ್ರೀ ರುದ್ರ ಪುರಶ್ಚರಣ ಪ್ರಾರಂಭಗೊಳ್ಳಲಿದೆ. ನಂತರ ದೇವಸ್ಥಾನದ ಪ್ರಾಂಗಣದಲ್ಲಿ ಶ್ರೀದೇವರಿಗೆ ನವಕಪ್ರಧಾನ ಹೋಮಪುರಸ್ಸರ ನವಕಲಶ ಅಭಿಷೇಕ, ಮಹಾಪೂಜೆ ನೆರವೇರಲಿದೆ. ಮಧ್ಯಾಹ್ನ 12:00 ರಿಂದ ವಿವಿಧ ಭಜನಾ ಮಂಡಳಿಗಳಿಂದ ಭಕ್ತಿ ಮಾಧುರ್ಯ, ಸಂಜೆ 05:30
ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮವು ಪ್ರಾತಃಕಾಲ 06:30 ಕ್ಕೆ ರುದ್ರಾಭಿಷೇಕ, ಪಂಚಾಮೃತ ವಿಶೇಷ ಸೇವೆಗಳೊಂದಿಗೆ ಪ್ರಾರಂಭಗೊಂಡಿತು. ಸಹಸ್ರಾರು ಭಕ್ತಾಭಿಮಾನಿಗಳು ಸನ್ನಿಧಾನಕ್ಕೆ ಆಗಮಿಸಿ, ದೇವರ ಪ್ರಾರ್ಥನೆಗೈದು, ಫೆಬ್ರವರಿ 22 ರಿಂದ ಮಾರ್ಚ್ 05 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗಕ್ಕೆ ಯಾಗ ದ್ರವ್ಯಗಳನ್ನು ಸಮರ್ಪಣೆಗೈದು, ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಿಂದ ಉಮಾಮಹೇಶ್ವರ ಸನ್ನಿಧಾನಕ್ಕೆ
ಗೋವುಗಳ ಸಂರಕ್ಷಣೆ ಹಾಗೂ ಗೋ ಸಂತತಿ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಣಿಪಾಲದ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 14, 2023 ರ ಮಂಗಳವಾರದಂದು ಗೋವು ಆಲಿಂಗನ ವಿಶೇಷ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಆಂಧ್ರದ ನಲ್ಲೂರು ಜಿಲ್ಲೆಯ ಪುಂಗನೂರು ರಾಜಮನೆತನದವರು ಬೆಳಸಿದ ಪುಂಗನೂರು ತಳಿಯ ಐದು ಹಸುಗಳಿಗೆ ಶಾಸಕ ಕೆ. ರಘುಪತಿ ಭಟ್ ಅವರ ತಾಯಿ ಸರಸ್ವತಿ ಬಾರಿತ್ತಾಯ ಅವರು ಮೇವು ನೀಡಿ ಆಲಿಂಗನ ಮಾಡಿದರು. ತದನಂತರ
ಮಣಿಪಾಲ ಸರಳೆಬೆಟ್ಟುವಿನ ಶಿವಪಾಡಿಯಲ್ಲಿರುವ ಶ್ರೀ ಉಮಾಮಹೇಶ್ವರ ದೇಗುಲದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ಲೋಕಕಲ್ಯಾಣಕ್ಕಾಗಿ ನಡೆಯಲಿರುವ “ಅತಿರುದ್ರ ಮಹಾಯಾಗ” ಪ್ರಯುಕ್ತ ದೇವಸ್ಥಾನದಲ್ಲಿ ಹಲವಾರು ಕಾರ್ಯಕ್ರಮಗಳೊಂದಿಗೆ ಅತಿರುದ್ರ ಮಹಾಯಾಗಕ್ಕೆ ಸಾಕಷ್ಟು ತಯಾರಿಗಳು ಬಿಡುವಿಲ್ಲದೆ ನಡೆಯುತ್ತಿವೆ. ಈಗಾಗಲೇ ಉಡುಪಿ ತಾಲೂಕು ಮಟ್ಟದ ಪುಟಾಣಿಗಳ ಚಿತ್ರಕಲಾ ಪ್ರತಿಭೆಯನ್ನು ಗುರುತಿಸಲು “ಶಿವ ಚಿತ್ತಾರ”
ಮಣಿಪಾಲ, 30ನೇ ಜನವರಿ 2023: ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ , ಅಂಗ ಸಂಸ್ಥೆಯಾಗಿರುವ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸಾ ವಿಭಾಗವು 28 ಜನವರಿ 2023 ರಂದು ಶನಿವಾರ ಲೈವ್ (ನೇರ ಪ್ರಸಾರದ) ಎಂಡೋಸ್ಕೋಪಿ ಕಾರ್ಯಾಗಾರ ಮತ್ತು 29 ಜನವರಿ 2023 ಭಾನುವಾರ ಲೈವ್ (ನೇರ ಪ್ರಸಾರದ) ಬಂಜೆತನ ಅಲ್ಟ್ರಾಸೌಂಡ್ ಕುರಿತು ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಿತ್ತು. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡಾ
ಮಣಿಪಾಲ 16ನೇ ಡಿಸೆಂಬರ್ 2022:ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು ಕಾರ್ಪೊರೇಟ್ ಕಂಪನಿ , ಬ್ಯಾಂಕ್ ಗಳು , ವೈದ್ಯಕೀಯ ಸಂಘ, ಆಸ್ಪತ್ರೆಗಳು ಮತ್ತು ಮಾಧ್ಯಮ ಮಿತ್ರರಿಗಾಗಿ 3 ದಿನಗಳ ಕಾಲ ಸೌಹಾರ್ದಯುತವಾಗಿ ಕಸ್ತೂರ್ಬಾ ಆಸ್ಪತ್ರೆ ಕಾರ್ಪೊರೇಟ್ ಕ್ರಿಕೆಟ್ ಲೀಗ್ (ಕೆ ಎಚ್ -ಸಿ ಸಿ ಎಲ್)2022 ಆಯೋಜಿಸಿದೆ. ಇಂದು ನಡೆದ ಸರಳ ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ. ಎಚ್ ಎಸ್ ಬಲ್ಲಾಳ್ ಅವರು ಟ್ರೋಪಿ ಅನಾವರಣ ಮಾಡಿ ಮೊದಲ ಪಂದ್ಯಕ್ಕೆ ಟಾಸ್ ಮಾಡುವುದರ
ಮಣಿಪಾಲ, 8ನೇ ಡಿಸೆಂಬರ್2022:ದಾವಣಗೆರೆ ಜಿಲ್ಲೆಯ 62 ವರ್ಷದ ಮಹಿಳೆಯೊಬ್ಬರಿಗೆ ಇತ್ತೀಚೆಗೆ ಪಾರ್ಕಿನ್ಸನ್ ಕಾಯಿಲೆಗೆ ಇತ್ತೀಚಿನ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಸಾಧನದೊಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು, ಇದು ಕರಾವಳಿ ಕರ್ನಾಟಕದಲ್ಲಿ ಮೊದಲನೆಯದು. ಅವರು ಕಳೆದ 12 ವರ್ಷಗಳಿಂದ ನರ ದುರ್ಬಲಗೊಳಿಸುವ ನರವೈಜ್ಞಾನಿಕ ಸ್ಥಿತಿಯಿಂದ ಬಳಲುತ್ತಿದ್ದರು ಮತ್ತು ನಿಧಾನವಾಗಿ ಔಷಧಿಗಳಿಗೆ ಪ್ರತಿರೋಧ ಬೆಳೆಯಿತು. ಅವರ ಕೈಕಾಲುಗಳಲ್ಲಿನ ನಡುಕ, ಬಿಗಿತ ಮತ್ತು