ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ, ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಹಾಗೂ ಜನರಿಗೆ ರಕ್ಷಣೆ ನೀಡಲು ಆಗ್ರಹಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಮಹಾನಗರ ಪಾಲಿಕೆಯ ಎದುರಿನ ಲಾಲ್‍ಬಾಗ್ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ
ಪುತ್ತೂರು: ಮಣಿಪುರ ರಾಜ್ಯದಲ್ಲಿ ಎರಡು ಜನಾಂಗಗಳ ಮಧ್ಯೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್‍ನಿಂದ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯ ಬಳಿ ಮೊಂಬತ್ತಿ ಉರಿಸಿ, ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಮಣಿಪುರದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮೆರುಗಿಗೆ ಕುಂದುಂಟಾಗಿದೆ. ಹಿರಿಯರ ದೂರದರ್ಶಿತದ ಚಿಂತನೆಗಳ ಮಣ್ಣು
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷ ಮತ್ತು ಒಂದು ನಿರ್ದಿಷ್ಟ ಪಂಗಡದ ಮಹಿಳೆಯರ ಮೇಲಿನ ಅಮಾನವೀಯ ಲೈಂಗಿಕ ದೌರ್ಜನ್ಯ ವಿಶ್ವದ ಎದುರು ದೇಶ ತಲೆ ತಗ್ಗಿಸುವಂತೆ ಮಾಡಿದೆ. ಇದಕ್ಕೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಅಲ್ಲಿನ ರಾಜ್ಯ ಸರಕಾರದ ಬೇಜವಾಬ್ಧಾರಿ ನಡೆಯೇ ನೇರ ಕಾರಣ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಹೇಳಿದ್ದಾರೆ. ಅವರು ಕಾರ್ಕಳದ ಕೇಂದ್ರ ಬಸ್ ನಿಲ್ದಾಣದ ಬಳಿ, ಮಣಿಪುರದಲ್ಲಿ ಮಹಿಳೆಯರ ಮೇಲೆ
ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರು, ಕೇಂದ್ರದ ಬಿಜೆಪಿ ಸರಕಾರ ಬೇಟಿ ಬಚಾವೋ ಎಂದು ಹೇಳಿ ಅಧಿಕಾರಕ್ಕೆ ಬಂದು, ಇದೀಗ ಬೇಟಿಕೋ ಮಾರ್‍ಡಾಲೋ ಮಾಡುತ್ತಿದೆ. ಬಿಜೆಪಿಯವರು ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗೆ ಮಣಿಪುರದಲ್ಲಿ ಮತ ರಾಜಕೀಯ
ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ಹಾಗೂ ಹಿಂಸಾಚಾರ ಖಂಡಿಸಿ ಆಗಸ್ಟ್ 2ರಂದು ಉಡುಪಿಯ ಸಮಾನ ಮನಸ್ಕರ ವೇದಿಕೆ ವತಿಯಿಂದ ಕಾಲ್ನಡಿಗೆ ಜಾಥ ನಡೆಯಲಿದೆ. ಈ ಬಗ್ಗೆ ಮಾಹಿತಿನೀಡಿದ ಪ್ರಶಾಂತ್ ಜತ್ತನ್ ಮಣಿಪುರದಲ್ಲಿ ಹಿಂಸಚಾರ ಶುರುವಾಗಿ ಸುಮಾರು ಮೂರು ತಿಂಗಳಾಗಿದೆ ,ಸುಮಾರು 114 ಮಂದಿ ಹತ್ಯೆಯಾಗಿದ್ದಾರೆ.ಅರವತ್ತು ಸಾವಿರಕ್ಕೂ ಹೆಚ್ಚು ಜನ ನಿರ್ವಸಿತರಾಗಿದ್ದಾರೆ ,ಮಹಿಳೆಯರ ಮೇಲೆ ಮಕ್ಕಳ ಮೇಲೆ ದೌರ್ಜನ್ಯಗಳು ಹೆಚ್ಚಾಗಿವೆ, ಚರ್ಚುಗಳು ಮಸೀದಿಗಳು ಧ್ವಸಂವಾಗಿದೆ.
ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ಪಾರ್ಲಿಮೆಂಟ್‍ಲ್ಲಿ ಅಸಹಕಾರ, ಕೇಂದ್ರ ಸರ್ಕಾರದ ವೈಫಲ್ಯವನ್ನು ಖಂಡಿಸಿ ಜುಲೈ 31ರಂದು ನಗರದ ಲಾಲ್‍ಬಾಗ್‍ನ ಗಾಂಧಿಪ್ರತಿಮೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಮಣಿಪುರ ಬಗ್ಗೆ ಲೋಕಸಭೆಯಲ್ಲಿ ವಿಪಕ್ಷಗಳಿಗೆ
ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಧೀರ್ ಕುಮಾರ್ ಅವರು, ಮೈಥೇಯಿ-ಕುಕಿ-ನಾಗಾ ಸಮುದಾಯದಲ್ಲಿ ಎಷ್ಟು ಸಂಖ್ಯೆ ಇದೆ ಗೊತ್ತಿಲ್ಲ. ಚುನಾವಣೆ ಉದ್ದೇಶದಿಂದ ಬಿಜೆಪಿ ಸರ್ಕಾರ ಮೈಥೇಯಿ ಪರವಾಗಿ ನಿಂತಿದೆ. ಬಿಜೆಪಿ ಮನುಷ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ದೇಶದಲ್ಲಿ ದೌರ್ಜನ್ಯ ನಡೆಯುತ್ತಿರುವಾಗ ಮೋದಿ ವಿಶ್ವನಾಯಕನಾಗಲು ಸಾಧ್ಯವಿಲ್ಲ ಎಂದರು. ಇನ್ನು
ಮಹಿಳೆಯರನ್ನು ಮಾತೆಯರೆನ್ನುವ ಬಿಜೆಪಿ ಸರ್ಕಾರದ ಇನ್ನೊಂದು ಮುಖ ಮಹಿಳೆಯರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡುವುದರ ಮೂಲಕ ಮಣಿಪುರದಲ್ಲಿ ಬಹಿರಂಗಗೊಂಡಿದೆ ಎಂಬುದಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ. ಅವರು ಬಿಜೆಪಿ ಆಡಳಿತ ನಡೆಸುತ್ತಿರುವ ಮಣಿಪುರ ರಾಜ್ಯದಲ್ಲಿ ನಡೆದ ಪೈಶಾಚಿಕ ಕೃತ್ಯವನ್ನು ವಿರೋಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಕಾಪು ಪೇಟೆಯಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್
ಮಣಿಪುರದ ಹಿಂಸಾಚಾರವನ್ನು ನಿಲ್ಲಿಸಿ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ನೀಡಲು ಕೇಂದ್ರ ಸರ್ಕಾರ ವಿಫಲವಾದರೆ ದೆಹಲಿ ಮತ್ತು ಮಣಿಪುರ ಚಲೋ ನಡೆಸಲಾಗುವುದು ಎಂದು ಕರ್ನಾಟಕ ಕ್ರೈಸ್ತ ಸಂಘಟನೆಯ ಅಧ್ಯಕ್ಷ ಸ್ಟ್ಯಾನಿ ಪಿಂಟೊ ಎಚ್ಚರಿಕೆ ನೀಡಿದರು. ಕಥೋಲಿಕ್ ಸಭಾದ ನೇತೃತ್ವದಲ್ಲಿ ಮಂಗಳೂರು ಧರ್ಮಕ್ಷೇತ್ರದ ಮಹಿಳಾ ಆಯೋಗ, ಕ್ರೈಸ್ತ ಐಕ್ಯತೆಯ ಆಯೋಗ, ಮಂಗಳೂರು ಕ್ರಿಶ್ಚಿಯನ್ ಕೌನ್ಸಿಲ್‍ನ ಸಹಭಾಗಿತ್ವಲ್ಲಿ ನಗರದ ಪುರಭವನದ ಎದುರು ನಡೆದ ಪ್ರತಿಭಟನೆಯಲ್ಲಿ ಅವರು
ಮೂಡುಬಿದಿರೆ: ಮಣಿಪುರ ರಾಜ್ಯದಲ್ಲಿ ಹಲವಾರು ದಿನಗಳಿಂದ ಹಿಂಸಾಚಾರ, ಅತ್ಯಾಚಾರ, ಅನಾಚಾರಗಳು ನಡೆಯುತ್ತಿದ್ದು, ಇದು ಸರಕಾರದ ಹೆಸರನ್ನು ಕೆಡಿಸಲು ವಿಪಕ್ಷಗಳು ಮಾಡಿರುವ ಪ್ರಾಯೋಜಿತ ಕಾರ್ಯಕ್ರಮವಾಗಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದರು. ಅವರು ಮಣಿಪುರ ಘಟನೆಯ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಮಣಿಪುರ ರಾಜ್ಯದಲ್ಲಿ ಸಾವಿರಾರು ಎಕರೆ ಪ್ರದೇಶದಲ್ಲಿ ಅಕ್ರಮವಾಗಿ ಗಾಂಜಾ, ಮಾದಕ ವಸ್ತುಗಳನ್ನು ಬೆಳೆಸುತ್ತಿದ್ದಾರೆ ಇದನ್ನು ಸರಕಾರ