ಮಂಗಳೂರು ಮಹಾನಗರ ಪಾಲಿಕೆಯು ತನ್ನ ವ್ಯಾಪ್ತಿಯಲ್ಲಿರುವ ದಲಿತ ಸಮುದಾಯದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ರೂಪಿಸಿ ಕಾರ್ಯಗತಗೊಳಿಸುವಲ್ಲಿ ವಿಫಲವಾಗಿರುವ ಕಾರಣದಿಂದ ದಲಿತರ ಸಾಮಾಜಿಕ ಆರ್ಥಿಕ ಪ್ರಗತಿಯ ದರ ಇಳಿಮುಖವಾಗಿದೆ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ರಾಜ್ಯ ಸಹ ಸಂಚಾಲಕರಾದ ಡಾ. ಕೃಷ್ಣಪ್ಪ ಕೊಂಚಾಡಿಯವರು
ಮಂಗಳೂರು: ‘ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಮೂರು ನೆಲೆಗಳಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮ ಅತ್ಯಂತ ಮಹತ್ವ ಪಡೆದಿದೆ. ಪೋರ್ಚುಗೀಸರೊಂದಿಗೆ ಸೆಣಸಿದ ಅಬ್ಬಕ್ಕ ರಾಣಿಯರು ಇಬ್ಬರೋ-ಮೂವರೋ ಎಂಬುದು ಮುಖ್ಯವಲ್ಲ. ಆದರೆ ಅಬ್ಬಕ್ಕ ಎಂಬ ಹೆಸರು ತೌಳವ ನಾಡಿಗರ ಸ್ವಾಭಿಮಾನದ ಸಂಕೇತವಾಗಿ ಚರಿತ್ರೆಯಲ್ಲಿ ದಾಖಲಾಗಿದೆ’ ಎಂದು ಹಿರಿಯ ಇತಿಹಾಸ ಸಂಶೋಧಕ ಹಾಗೂ ವಿಶ್ರಾಂತ ಪ್ರಾಧ್ಯಾಪಕ ಡಾ.ಪುಂಡಿಕಾಯಿ ಗಣಪಯ್ಯ ಭಟ್ ಹೇಳಿದ್ದಾರೆ. ಮಂಗಳೂರು ಮಹಾನಗರಪಾಲಿಕೆ ಮತ್ತು
ಸ್ವಚ್ಛ ಭಾರತ ಮಿಷನ್ (ಗ್ರಾ) ವತಿಯಿಂದ ಸಾಹಸ್ ಸಂಸ್ಥೆ ಬೆಂಗಳೂರು ಮತ್ತು ಸಂಜೀವಿನಿ, KSRLPS(NRLM) ಸಹಯೋಗದೊಂದಿಗೆ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ತ್ಯಾಜ್ಯ ದಿಂದ ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಯ ತರಬೇತಿ ಕಾರ್ಯಾಗಾರವನ್ನು ಮಾನ್ಯ ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಉದ್ಘಾಟಿಸಿದರು. ಉಪಕಾರ್ಯದರ್ಶಿ ಹಾಗೂ ಸ್ವಚ್ಛ ಭಾರತ್ ಮಿಷನ್(ಗ್ರಾ) ಇದರ ನೋಡಲ್ ಅಧಿಕಾರಿಯವರು, ಸಹಾಯಕ ಯೋಜನಾ ಅಧಿಕಾರಿಗಳು, ಮಂಗಳೂರು ತಾಲೂಕು
ಮಂಗಳೂರು,ಫೆ.17(ಕ.ವಾ):- ಜಿಲ್ಲೆಯಲ್ಲಿ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಬ್ಯಾಂಕ್ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ನೆರವು ಹಾಗೂ ಮಾರ್ಗದರ್ಶನ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತಾಕೀತು ಮಾಡಿದರು. ಅವರು ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಫೆ.16ರ ಬುಧವಾರ ಕಿರು ಆಹಾರ ಉದ್ದಿಮೆ ಪ್ರೋತ್ಸಾಹಕ್ಕೆ ಸಂಬಂಧಿಸಿದಂತೆ ಬ್ಯಾಂಕರ್ಸ್ ಹಾಗೂ ವಿವಿಧ ಇಲಾಖೆಗಳ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಯೋಜನೆಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಲು ಆದ್ಯತೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೂ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ. ಮಂಗಳೂರು ನಗರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಮಂಗಳವಾರ ವೀಕ್ಷಿಸಿದ ಬಳಿಕ ಅವರು ಸುದ್ದಿಗೋಷ್ಠಿ ನಡೆಸಿ ಕಾಮಗಾರಿಗಳ
ರಾಜ್ಯ ನಗರಾಭಿವೃದ್ದಿ ಸಚಿವರಾದ ಭೈರತಿ ಬಸವರಾಜ್ ಅವರು ನಗರದ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು. ನಗರದ ಹಂಪನಕಟ್ಟೆ ಜಂಕ್ಷನ್, ಎಮ್ಮೆಕೆರೆ ಈಜುಕೊಳ, ಕಂಕನಾಡಿ ಮಾರುಕಟ್ಟೆ, ಕದ್ರಿ ಪಾರ್ಕ್, ವೆನ್ಲಾಕ್ ನ ನೂತನ ಕಾಮಗಾರಿ, ಮಂಗಳಾದೇವಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಸುಮಂಗಲ ರಾವ್, ಮನಪಾ ಕಮಿಷನರ್ ಅಕ್ಷಯ್ ಶ್ರೀಧರ್ ,
ಬೆಂಗಳೂರು, ನ.24: ಮಂಗಳೂರು ಸ್ಮಾರ್ಟ್ ಸಿಟಿ ಎಕ್ಸಿಕ್ಯುಟಿವ್ ಇಂಜಿನಿಯರ್ ಕೆ.ಎಸ್.ಲಿಂಗೇಗೌಡ ಸೇರಿದಂತೆ ರಾಜ್ಯದ 15 ಕಡೆಗಳಲ್ಲಿ ಏಕಕಾಲದಲ್ಲಿ ಭ್ರಷ್ಟ ಅಧಿಕಾರಿಗಳ ಮನೆ ಮತ್ತು ಕಚೇರಿಗಳಿಗೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಕಡತ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆ ಎಕ್ಸಿಕ್ಯೂಟಿವ್ ಎಂಜಿನಿಯರ್ ಕೆ.ಎಸ್ ಲಿಂಗೇಗೌಡ, ಮಂಡ್ಯ ಹೆಚ್.ಎಲ್.ಬಿ.ಸಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಶ್ರೀನಿವಾಸ್ ಕೆ, ದೊಡ್ಡಬಳ್ಳಾಪುರ
ರಾಜ್ಯ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕನ್ನಡಕ್ಕಾಗಿ ನಾವು ಅಭಿಯಾನದಲ್ಲಿ ಅ. 28ರ ಗುರುವಾರ ಬೆಳಿಗ್ಗೆ 11 ಗಂಟೆಗೆ ತಣ್ಣೀರುಬಾವಿ ಬೀಚ್‍ನಲ್ಲಿ ಕನ್ನಡ ಭಾಷೆಯ ಮಹತ್ವ ಸಾರುವ ಲಕ್ಷ ಕಂಠಗಳ ಸಮೂಹ ಗೀತ ಗಾಯನವನ್ನು ಹಮ್ಮಿಕೊಳ್ಳಲಾಗಿತ್ತು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗೀತಗಾಯನ ಕಾರ್ಯಕ್ರಮವನ್ನು ಡೊಂಗರಕೇರಿಯ ಕೆನರಾ ಪ್ರೌಢಶಾಲೆ,
ಮಂಗಳೂರು ಮಹಾನಗರ ಪಾಲಿಕೆಯು ದಸರಾ ಹಬ್ಬಕ್ಕೆ ದಾರಿ ದೀಪಾಲಂಕಾರಕ್ಕಾಗಿ 38 ಲಕ್ಷ ಹಣವನ್ನು ಪೋಲು ಮಾಡುತ್ತಿರುವ ಹಿಂದೆ ಬಿಜೆಪಿ ಪಕ್ಷದ ವೋಟ್ ಬ್ಯಾಂಕ್ ರಾಜಕಾರಣವು ಅಡಗಿದೆ ಮಾತ್ರವಲ್ಲ ಇದು ಜನತೆಯ ತೆರಿಗೆಯ ಹಣವನ್ನು ದಸರಾ ಹೆಸರಲ್ಲಿ ಲೂಟಿ ಮಾಡಲು ಹೊರಟಿದೆ ಎಂದು ಸಿಪಿಐಎಂ ಪಕ್ಷದ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಮುಂಭಾಗದಲ್ಲಿ ಸಮಾನ ಮನಸ್ಕ ಸಂಘಟನೆ, ಪಕ್ಷಗಳ ಒಕ್ಕೂಟದ ಆಶ್ರಯದಲ್ಲಿ ನಡೆದ
ರಾಜ್ಯ ಮತ್ತು ನಗರದ ಆಡಳಿತದಲ್ಲಿ ಪರ್ಸಂಟೆಜ್ ಸರಕಾರವಿದೆ.ಸರಿಯಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡದೆ ಜನರ ಮೇಲೆ ಬರೆ ಎಳೆದಿದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಪ್ರತಿ ಪಕ್ಷದ ನಾಯಕ ಎ.ಸಿ.ವಿನಯ್ ರಾಜ್ ಹೇಳಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಂಗಳೂರು ಪಾಲಿಕೆ ಘನ ತ್ಯಾಜ್ಯ ನಿರ್ವಹಣೆಗೆ ಸಾಕಷ್ಟು ಹಣ ಖರ್ಚು ಮಾಡುತ್ತಿದೆ. ಆದ್ರೆ ಅದರ ನಿರ್ವಹಣೆಯ ಕೊರತೆ ಎದ್ದು ಕಾಣುತ್ತಿದೆ. ಮಂಗಳೂರು ನಗರ ಸ್ವಚ್ಛ ಮಂಗಳೂರು