ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಅಂಗಾರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಆನೆ ದಾಳಿಯಂದ ಮತಪಟ್ಟ ರೆಂಜಲಾಡಿ ಗ್ರಾಮದ ನೈಲ ರಂಜಿತಾ ಹಾಗೂ ರಮೇಶ್ ರೈ ಅವರ ಮನೆಗೆ ಬಂದರು ಮೀನುಗರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಸಚಿವರ ಆಗಮನವಾಗುತ್ತಿದ್ದಂತೆ ಮನೆಯವರು ತೀವ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿ ಕಳೆದ ಕೆಲವು ತಿಂಗಳಿಂದ ಆನೆಗಳ ಹಾವಳಿಯ ಬಗ್ಗೆ ಎಲ್ಲರಿಗೂ ಗೊತ್ತಿತ್ತು. ಆದರೆ ಯಾರೂ ಸರಿಯಾದ ಕ್ರಮ ಕೈಗೊಂಡಿಲ್ಲ. ನೀವು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುತ್ತಿದ್ದರೆ ನನ್ನ ಮಗಳ ಪ್ರಾಣ