Home Posts tagged #mla ashok kumar rai

ಪುತ್ತೂರು: ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವರು ಅವಭೃಯ ಸ್ನಾನಕ್ಕೆ ತೆರಳುವ ಶಾಂತಿಗೋಡು ಗ್ರಾಮದ ವೀರಮಂಗಲ ದಂಡಿ ರಸ್ತೆಗೆ ಕಾಂಕ್ರಿಟೀಕರಣಕ್ಕೆ ಶಾಸಕ ಅಶೋಕ್‌ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿದರು. ನಂತರ ಮಾತನಾಡಿದ ಶಾಸಕರು, ದೇವರು ಅವಭೃತ ಸ್ನಾನಕ್ಕೆ ತೆರಳುವ ರಸ್ತೆಯನ್ನು ಯಾಕೆ ಕಾಂಕ್ರಿಟೀಕರಣ ಮಾಡಿಲ್ಲ ಎಂಬುದು ನನಗೆ ಗೊತ್ತಿಲ್ಲ. ಕಳೆದ ಏಳು ವರ್ಷಗಳಿಂದ ಇಲ್ಲಿನವರ

ಪುತ್ತೂರು: ಈಶ್ವರಮಂಗಲದ ಮೇನಾಲ ದರ್ಗಾಗೆ ಶಾಸಕ ಅಶೋಕ್ ರೈ ಭೇಟಿ

ಪುತ್ತೂರು: ಈಶ್ವರಮಂಗಲ ಮೇನಾ ಮಖಾಂ ದರ್ಗಾ ಶರೀಫ್‌ಗೆ ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದರ್ಗಾದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆದಿತ್ತು. ಈ ಸಂದರ್ಭದಲ್ಲಿ ಮಸೀದಿಯ ಧರ್ಮಗುರುಗಳಾದ ಜಮಾಲುದ್ದೀನ್ ತಂಙಳ್ ದುಗ್ಗಲಡ್ಕ, ನೆಟ್ಟಣಿಗೆ ಮುಡ್ನೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಮೂಸಾನ್, ನೆಟ್ಟನಿಗೆ ಮುಡ್ನೂರು ಗ್ರಾಪಂ ಸದಸ್ಯರಾದ ಶ್ರೀರಾಂ ಪಕ್ಕಳ, ಅಕ್ರಮಸಕ್ರಮ ಸಮಿತಿ ಸದಸ್ಯರಾದ ಮಹಮ್ಮದ್ ಬಡಗನ್ನೂರು

ಪುತ್ತೂರು: ಪಂಜಳ ಅಂಗನವಾಡಿ ಕೇಂದ್ರದಲ್ಲಿ ಬಾಲಮೇಳ

ಪುತ್ತೂರು: ಮಕ್ಕಳ ಕಲಿಕೆಯ ಮೊದಲ ಹೆಜ್ಜೆಯೇ ಅಂಗನವಾಡಿ ಕೇಂದ್ರಗಳು, ಈ ಕೇಂದ್ರಗಳಲ್ಲಿ ಮಕ್ಕಳಿಗೆ ಕಲಿಕೆಯ ಜೊತೆಗೆ ಮನೆಯ ಎಲ್ಲಾ ವಾತಾವರಣಗಳು ಅಂಗನವಾಡಿ ಕೇಂದ್ರಗಳಲ್ಲಿ ಕಾಣಲು ಸಾಧ್ಯವಾಗುತ್ತದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಮುಂಡೂರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ನಡೆದ ಬಾಲ ಮೇಳದಲ್ಲಿ ಮಾತನಾಡಿದರು.ಪುಟ್ಟ ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ಇಲ್ಲಿ ನೀಡಲಾಗುತ್ತಿದ್ದು ಮಕ್ಕಳನ್ನು ಅಂಗನವಾಡಿಗೆ ದಾಖಲಿಸುವಂತೆ ಶಾಸಕರು ಮನವಿ ಮಾಡಿದರು.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ

ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಶೋಕ್

ಪುತ್ತೂರು ಶಾಸಕರನ್ನು ಬೇಟಿಯಾದ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ

ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕರು ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯಚಟುವಟಿಕೆಯ ಬಗ್ಗೆ ಅಧ್ಯಕ್ಷರು ಶಾಸಕರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷರುಗಳಾದ ಅಜಮಾಡ ರಮೇಶ್ ಕುಟ್ಟಪ್ಪ, ಭವಾನಿ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅಧಿಕಾರಿಗಳ ಜೊತೆ ಶಾಸಕ ಅಶೋಕ್ ಕುಮಾರ್ ರೈ ಸಭೆ

ಪುತ್ತೂರು: ಕಿಡ್ನಿ ರೋಗಿಗಳಿಗೆ ಸ್ಪಂದನೆ ನೀಡುವ ನಿಟ್ಟಿನಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಪ್ರಸ್ತುತ 6 ಡಯಾಲಿಸಿಸ್ ಮೆಷಿನ್ ಕಾರ್ಯಾಚರಿಸುತ್ತಿದ್ದು, ಮುಂದಿನ ವಾರದಲ್ಲಿ ಆರು ಡಯಾಲಿಸಿಸ್ ಮೆಷಿನ್ ರೋಟರಿ ಮೂಲಕ ಸರಕಾರಿ ಆಸ್ಪತ್ರೆಗೆ ಬರಲಿದೆ ಎಂದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ. ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.ಈಗಾಗಲೇ ಕಡಬದಲ್ಲಿ ಮೂರು ಮೆಷಿನ್ ಇದ್ದು ಸರಿಯಾಗಿ

ಚುನಾವಣೆ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಹೆಚ್ಚಿದ ಜವಾಬ್ದಾರಿ : ಶಾಸಕ ಅಶೋಕ್ ಕುಮಾರ್ ರೈ

ವಿಟ್ಲ: ಕಾರ್ಯಕರ್ತರು ಮಾಡಿದ ಕೆಲಸಕ್ಕೆ ಹೃದಯದಲ್ಲಿ ಜಾಗವನ್ನು ನೀಡಲಾಗಿದೆ. ಜನರ ಮನಸ್ಸಿನಲ್ಲಿ ಹಲವು ನಿರೀಕ್ಷೆಗಳಿದ್ದು, ಚುನಾವಣೆಯಲ್ಲಿ ಗೆದ್ದ ಬಳಿಕ ಪ್ರತಿಯೊಂದು ನಡೆಯಲ್ಲೂ ಜವಾಬ್ದಾರಿ ಹೆಚ್ಚಿದೆ. ಭ್ರಷ್ಟಾಚಾರ ಮುಕ್ತ ಮಾಡುವ ಕಾರ್ಯಕ್ಕೆ ಕೈಹಾಕಿದ್ದು, ಯಾರೊಬ್ಬರೂ ಹಣ ನೀಡುವ ಅಗತ್ಯವಿಲ್ಲ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಮಂಗಳವಾರ ವಿಟ್ಲ ಚರ್ಚ್ ಸಮೀಪದ ಶತಮಾನೋತ್ಸವ ಸಮುದಾಯ ಭವನದಲ್ಲಿ ವಿಟ್ಲ – ಉಪ್ಪಿನಂಡಿ ಬ್ಲಾಕ್

ಪೊಲೀಸ್ ದೌರ್ಜನ್ಯ ಮಾಡಿಸಿದ್ದು ಯಾರೆಂದು ರಾಜ್ಯಕ್ಕೆ ಗೊತ್ತಿದೆ : ಶಾಸಕ ಅಶೋಕ್ ಕುಮಾರ್ ರೈ

ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ