Home Posts tagged #mla bhagirati murulya

ಮಂಗಳೂರು : ಬಿಜೆಪಿ ಬೂತ್ ಕಾರ್ಯಕರ್ತರ ಸಮಾವೇಶ

ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ವಿಫಲವಾಗಿದ್ದು, ಜನರಿಗೆ ನರೇಂದ್ರ ಮೋದಿ ಗ್ಯಾರಂಟಿ ಮೇಲೆ ಮಾತ್ರ ವಿಶ್ವಾಸ ಮೂಡಿದೆ. ಹೀಗಾಗಿ ರಾಜ್ಯದ ಜನರು ನರೇಂದ್ರ ಮೋದಿ ಜೊತೆಗಿದೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದರು. ಅವರು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸಂಘನಿಕೇತನದಲ್ಲಿ ನಡೆದ ಬಿಜೆಪಿ ಬೂತ್ ಕಾರ್ಯಕರ್ತರ ಬೃಹತ್

ಸುಳ್ಯ: ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಸರಕಾರದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಲು ಹಾಗೂ ಜನರ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಅವರು ಸುಳ್ಯ ಕೆವಿಜಿ ಪುರಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸಲು ಜನತಾ ದರ್ಶನ

ಸುಳ್ಯ: ಉಜ್ವಲ್ ಯೋಜನೆಯಡಿ ಗ್ಯಾಸ್ ಸಂಪರ್ಕ ವಿತರಣೆ

ಅರಂತೋಡು ತೆಕ್ಕಿಲ್ ಎಚ್.ಪಿ. ಗ್ಯಾಸ್ ವಿತರಣಾ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಆಯ್ಕೆಯಾದ ಬಿ.ಪಿ.ಎಲ್ ಕಾರ್ಡ್ ದಾರರಿಗೆ ಉಚಿತ ಗ್ಯಾಸ್ ವಿತರಣಾ ಸಮಾರಂಭವು ಅರಂತೋಡು-ತೊಡಿಕಾನ ಪ್ರಾಥಮಿಕ ಕ್ರಷಿಪತ್ತಿನಸಹಕಾರಿ ಸಂಘದ ಸಿರಿಸೌಧ ಸಭಾಂಗಣದಲ್ಲಿ ನಡೆಯಿತು. ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕ ಕು| ಭಾಗಿರಥಿ ಮುರುಳ್ಯ ಚಾಲನೆ ನೀಡಿದರು. ಅವರು ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು

ಕಡಬ ಸಮುದಾಯ ಆಸ್ಪತ್ರೆ – ಡಯಾಲಿಸಿಸ್ ಕೇಂದ್ರ ಶೀಘ್ರ ಆರಂಭಿಸುವ ಭರವಸೆ : ಭಾಗೀರಥಿ ಮುರುಳ್ಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ಡಯಾಲಿಸಿಸ್ ಕೇಂದ್ರ ಆರಂಭಿಸಲು ಶೀರ್ಘ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್ ಆಸ್ಪತ್ರೆಯ ಸಿಬಂದಿ ಕೊರತೆ ಹಾಗೂ ಇತರ ಅಗತ್ಯತೆಗಳ ಕುರಿತು ಶಾಸಕಿಗೆ ಮಾಹಿತಿ ನೀಡಿದರು. ಆಸ್ಪತ್ರೆಗೆ ಹೊಸ ಡಿಜಿಟಲ್ ಎಕ್ಸ್‍ರೇ ಯಂತ್ರ ನೀಡಲಾಗಿದ್ದರೂ

ಕಡಬ ಪತ್ರಕರ್ತರಿಂದ ಶಾಸಕಿಗೆ ಅಭಿನಂದನೆ

ಕಡಬ: ಸೋಮವಾರ ಕಡಬಕ್ಕೆ ಆಗಮಿಸಿದ್ದ ಸುಳ್ಯ ವಿಧಾನ ಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು. ಕಡಬ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ ಅವರ ನೇತೃತ್ವದಲ್ಲಿ ಶಾಸಕರನ್ನು ಹೂಗುಚ್ಚ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರು ಕ್ಷೇತ್ರದ ಅಭಿವೃದ್ಧಿಗೆ ಪತ್ರಕರ್ತರ ಸಹಕಾರ ಕೋರಿದರು. ಈ ವೇಳೆ

ಕಡಬ : ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ – ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಗಿಡ ನಾಟಿ

ಕಡಬ,: ಅಂತರಾಷ್ಟ್ರೀಯ ಜೀವ ವೈವಿದ್ಯ ದಿನಾಚರಣೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಗಿಡ ನಾಟಿ ಮಾಡುವ ಮೂಲಕ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆಸಲಾಯಿತು. ಈ ಸದರ್ಭದಲ್ಲಿ ಕಡಬ ತಹಸೀಲ್ದಾರ್ ರಮೇಶ್ ಬಾಬು, ಕಡಬ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಕೆಂಪೇ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೃಷ್ಣ ಶೆಟಿ ಕಡಬ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಸಹಾಯಕ ನಿರ್ದೆಶಕ ಚೆನ್ನಪ್ಪ ಗೌಡ ಕಜೆಮೂಲೆ, ವ್ಯವಸ್ಥಾಪಕ ಭವನೇಂದ್ರ