ಬೈಂದೂರು: ಬೈಂದೂರಿನ ಪಡುವರಿಯ ಸೋಮೇಶ್ವರ ಬೀಚ್ ಗೆ ತೆರಳುವ ರಸ್ತೆಯಲ್ಲಿ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಈ ಸಂಬಂಧ ಅಗತ್ಯ ಕಾಮಗಾರಿ ವ್ಯವಸ್ಥಿತ ರೀತಿಯಲ್ಲಿ ನಡೆಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಈಗ ಮಳೆಗೆ ಗುಡ್ಡ ಕುಸಿದರೆ ಅಧಿಕಾರಿಗಳೇ ಅದಕ್ಕೆ ಜವಾಬ್ದಾರರು. ತಕ್ಷಣವೇ
ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ. ಬೈಂದೂರು ಭಾಗದಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಶಾಸಕ ಗುರುರಾಜ್ ಗಂಟಿಹೊಳೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೌಪರ್ಣಿಕಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ನದಿಯ ಅಕ್ಕ ಪಕ್ಕ ಪ್ರದೇಶಗಳಾದ ನಾವುಂದ, ಸಾಲ್ಬುಡ, ಬಡಾಕೆರೆ, ನಾಡ, ಕಡ್ಕೆ, ಮರವಂತೆ, ಪಡುಕೋಣೆ, ಪ್ರದೇಶಗಳಿಗೆ ಭೇಟಿ ನೀಡಿ ನೆರೆಯಿಂದ ಆಗುವ ಸಮಸ್ಯೆಗಳ ಬಗ್ಗೆ ಸ್ಥಳೀಯ ಹಾಗೂ ಪಂಚಾಯತ್
ಬೈಂದೂರು ವಿಧಾನಸಭಾ ಕ್ಷೇತ್ರದ ತಲ್ಲೂರಿನಿಂದ ಬೈಂದೂರಿನ ತನಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆ ಉದ್ಭವವಾಗುವ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹೆಮ್ಮಾಡಿ, ಮುಳ್ಳಿಕಟ್ಟೆ, ತ್ರಾಸಿ, ಮರವಂತೆ, ನಾಗೂರು, ಉಪ್ಪುಂದ, ಬೈಂದೂರು ಭಾಗಗಳಲ್ಲಿ, ಜನಸಾಮಾನ್ಯರ ಸಮಸ್ಯೆ ಬಗ್ಗೆ ವಿಚಾರಿಸಿ, ಸ್ಥಳೀಯರ ಒಂದಿಷ್ಟು ಮನವಿಗಳನ್ನು